ಶಿವಮೊಗ್ಗ : ಬಿಹೆಚ್ ರಸ್ತೆಯಲ್ಲಿ ನಡೆದುಕೊಂಡು ಹೋಗುತಿದ್ದ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ – ಆಸ್ಪತ್ರೆಗೆ ದಾಖಲು|Shivamogga

ಹಲವಾರು ಗಲಭೆಯ ಬಳಿಕ ಶಾಂತವಾಗಿರುವ ಶಿವಮೊಗ್ಗದಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಮೇಲೆ ಹರಿತವಾದ ವಸ್ತುವಿನಿಂದ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ.

ಶಿವಮೊಗ್ಗ ಬಸ್ ನಿಲ್ದಾಣದ ಸಮೀಪದ ರಾಯಲ್ ಆರ್ಕೇಡ್ ಹೋಟೆಲ್ ಬಳಿ ಭಾನುವಾರ ರಾತ್ರಿ ಘಟನೆ ನಡೆದಿತ್ತು.

ಸದ್ಯ ಗಾಯಾಳು ಅಶೋಕ್​ ಪ್ರಭು ಎಂಬವರನ್ನು ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಸುಮಾರು ನಾಲ್ಕು ಜನರ ಗುಂಪಿನಿಂದ ಈ ದಾಳಿ ನಡೆದಿದೆ. ದುಷ್ಕರ್ಮಿಗಳ ಗುಂಪು ಮೊದಲೇ ರಸ್ತೆಯಲ್ಲಿ ನಿಂತುಕೊಂಡಿತ್ತು. ಈ ವೇಳೆ ಅಶೋಕ್ ಪ್ರಭು ಮೇಲೆ ದಾಳಿ ನಡೆಸಿದ್ದಾರೆ. ಅಶೋಕ್ ಪ್ರಭು ಕೆಳಗೆ ಬೀಳುತ್ತಿದ್ದಂತೆ ಮೊಬೈಲ್ ಕಿತ್ತುಕೊಳ್ಳಲು ದುಷ್ಕರ್ಮಿಗಳು ಮುಂದಾಗಿದ್ದಾರೆ. ಅಶೋಕ್ ಪ್ರಭು ಪ್ರತಿರೋಧ ಒಡ್ಡಿದಾಗ ಹರಿತವಾದ ವಸ್ತುವಿನಿಂದ ದಾಳಿ ನಡೆಸಿದ್ದಾರೆ. ಕೊನೆಗೆ ಅಶೋಕ್ ಪ್ರಭು ದುಷ್ಕರ್ಮಿಗಳಿಂದ ತಪ್ಪಿಸಿಕೊಂಡು ಬಂದಿದ್ದಾರೆ.

ಅಶೋಕ್ ಪ್ರಭು ಮುಖದ ಭಾಗಕ್ಕೆ ಗಾಯವಾಗಿದೆ. ದುಷ್ಕರ್ಮಿಗಳು ಉರ್ದು ಭಾಷೆಯಲ್ಲಿ ಮಾತನಾಡುತ್ತಿದ್ದರು ಎಂದು ಅಶೋಕ್ ಪ್ರಭು ಮಾಹಿತಿ ನೀಡಿದ್ದಾರೆ. ಅಶೋಕ್ ಪ್ರಭು ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನೆ ಬಳಿಕ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಯುವಕ ಸ್ಥಳದಲ್ಲೇ ಸಾವು

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…

3 hours ago

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು – ತೋಟದ ಮಾಲೀಕನ ಬಂಧನ

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು - ತೋಟದ ಮಾಲೀಕನ ಬಂಧನ A three-year-old male…

3 hours ago

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್ Shivamogga rowdy sheeter…

7 hours ago

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ Kudumallige Society CEO Madan,…

7 hours ago

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

22 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

22 hours ago