ಶಿವಮೊಗ್ಗ: ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಸೀಗೆಹಟ್ಟಿ ಬಳಿಯ ಧರ್ಮಪ್ಪ ನಗರದಲ್ಲಿ ನಡೆದಿದ್ದು, ಹಲ್ಲೆಗೊಳಗಾದ ವ್ಯಕ್ತಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೋಮವಾರ ರಾತ್ರಿ 11.30ರ ಸುಮಾರಿಗೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಧರ್ಮಪ್ಪ ನಗರದ ಎರಡನೇ ಕ್ರಾಸ್ ನಿವಾಸಿ ಪ್ರಕಾಶ್ (25)ಎಂಬಾತನ ಮೇಲೆ ಹಲ್ಲೆ ನಡೆಸಿದ್ದಾರೆ. ಪ್ರಕಾಶ್‌ನ ತಲೆಗೆ ಗಾಯವಾಗಿದ್ದು, ಮೆಗ್ಗಾನ್ ಅಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿತ್ತು.
ಸುದ್ದಿ ತಿಳಿದು ಸ್ಥಳಕ್ಕೆ ಬಂದ ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ಎಎಸ್ಪಿ ವಿಕ್ರಂ ಆಮ್ಟೆ ಸ್ಥಳದಲ್ಲಿ ಜಮಾಯಿಸಿದ್ದ ಜನರನ್ನು ಸಮಾಧಾನಪಡಿಸಿದ್ದಾರೆ.
ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಧರ್ಮಪ್ಪ ನಗರ ಮತ್ತು ಸೀಗೆಹಟ್ಟಿಯಲ್ಲಿ ಪೊಲೀಸರು ಬಿಗು ಬಂದೋಬಸ್ತ್ ಏರ್ಪಡಿಸಲಾಗಿದೆ. ಕೆಎಸ್ಆರ್‌ಪಿ ತುಕಡಿಯನ್ನು ನಿಯೋಜಿಸಲಾಗಿದ್ದು, ರಾತ್ರಿ ಬೀಟ್ ಕೂಡ ಹೆಚ್ಚಿಸಲಾಗಿದೆ.
ಇತ್ತ ಗಾಯಾಳು ಪ್ರಕಾಶ್ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಎಸ್ಪಿ ಮತ್ತು ಎಎಸ್ಪಿ ಮೆಗ್ಗಾನ್ ಆಸ್ಪತ್ರೆಗೂ ಭೇಟಿ ನೀಡಿದ್ದು, ಗಾಯಾಳು ಪ್ರಕಾಶ್ ಅವರಿಂದ ಮಾಹಿತಿ ಪಡೆದುಕೊಂಡಿದ್ದಾರೆ.
ಮಾದ್ಯಮದೊಂದಿಗೆ ಮಾತನಾಡಿದ ಎಸ್ಪಿ ಮಿಥುನ್ ಕುಮಾರ್, ಬೈಕ್‌ನಲ್ಲಿ ಬಂದ ಮೂವರು ಹಲ್ಲೆ ನಡೆಸಿರುವುದಾಗಿ ಪ್ರಕಾಶ್ ತಿಳಿಸಿದ್ದಾರೆ. ದುಷ್ಕರ್ಮಿಗಳ ಪತ್ತೆಗಾಗಿ ಜಾಲ ಬೀಸಿದ್ದೇವೆ. ಪರಿಸರದ ಸಿಸಿಟಿವಿ ಫೂಟೇಜ್ಗಳ ಪರಿಶೀಲನೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಘಟನೆಯ ಪ್ರತ್ಯಕ್ಷದರ್ಶಿ, ಪ್ರಕಾಶ್ ಅವರ ಸೋದರ ಸಂಬಂಧಿ ಕೃಷ್ಣ ಮಾತನಾಡಿ, ಮೂರು ಬೈಕ್‌ಗಳಲ್ಲಿ ಒಂಬತ್ತು ಜನರು ಬಂದಿದ್ದರು. ಕೈಯಲ್ಲಿ ಶಸ್ತ್ರಾಸ್ತ್ರಗಳಿದ್ದವು. ಆರ್‌ಎಸ್ಎಸ್, ಭಜರಂಗದಳಕ್ಕೆ ಅವಾಚ್ಯ ಶಬ್ದಗಳಿಂದ ಬೈಯುತ್ತಿದ್ದರು. ಎಲ್ಲರೂ ಮುಖವನ್ನು ಮರೆಮಾಚಿಕೊಂಡಿದ್ದರು. ಒಂದು ಬೈಕ್‌ನ ಮೂವರು ಪ್ರಕಾಶ್ ಮೇಲೆ ಹಲ್ಲೆ ನಡೆಸಿ, ಪರಾರಿಯಾಗಿದ್ದಾರೆ. ತಕ್ಷಣ ಪ್ರಕಾಶ್ ಮನೆಯೊಳಗೆ ಓಡಿ ಹೋಗಿದ್ದು, ಆತನನ್ನು ನಾವು ಮೆಗ್ಗಾನ್ ಆಸ್ಪತ್ರೆಗೆ ಕರೆತಂದು ದಾಖಲಿಸಿದ್ದೇವೆ ಎಂದು ತಿಳಿಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್