ಸಾಹಿತಿಗಳಿಗೆ ಬೆದರಿಕೆಯೊಡ್ಡುವುದನ್ನು ಸಹಿಸಲು ಸಾಧ್ಯವಿಲ್ಲ : ಹರತಾಳು ಹಾಲಪ್ಪ | ಸಾಹಿತಿ ನಾ ಡಿಸೋಜಾ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿದ ಶಾಸಕರು|sagara

ಸಾಗರ : ಲೇಖಕರು, ಸಾಹಿತಿಗಳು ನಿರ್ಭಯವಾಗಿ ಬರವಣಿಗೆ ಮಾಡಲು ಅವಕಾಶವಾಗಬೇಕು. ಹಿಂಸೆ, ಭಯದ ಮೂಲಕ ಲೇಖನಿಯನ್ನು ತಡೆಯುವ ಯಾವುದೇ ಪ್ರಯತ್ನ ಸರಿಯಲ್ಲ ಎಂದು ಶಾಸಕ ಹರತಾಳು ಹಾಲಪ್ಪ ತಿಳಿಸಿದರು.

ಬೆದರಿಕೆ ಪತ್ರ ಬಂದಿರುವ ಹಿನ್ನೆಲೆಯಲ್ಲಿ ಹಿರಿಯ ಸಾಹಿತಿ ಡಾ| ನಾ.ಡಿಸೋಜಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿ ಅವರು ಮಾತನಾಡಿದರು. ಹಿಂದೆ ಗೌರಿ ಲಂಕೇಶ್‌, ಕಲಬುರ್ಗಿ ಅಂತವರ ಹತ್ಯೆ ನಡೆದಿದೆ. ಬೇರೆ ಬೇರೆ ವಿಚಾರಧಾರೆಯುಳ್ಳವರಿಂದ ಇಂತಹ ಕೆಲಸ ನಡೆದಿದೆ.


ಚರ್ಚೆಯ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕೇ ವಿನಃ ಹಿಂಸೆಗೆ ಇಳಿಯಬಾರದು ಎನ್ನುವುದು ನನ್ನ ಅಭಿಪ್ರಾಯವಾಗಿದೆ. ಈ ಹಿನ್ನೆಲೆಯಲ್ಲಿ ಸಾಹಿತಿ ಡಾ| ನಾ.ಡಿಸೋಜ ಅವರಿಗೆ ಬೆದರಿಕೆ ಪತ್ರ ಬಂದಿರುವ ಮಾಹಿತಿ ಗೊತ್ತಾಗುತ್ತಿದ್ದಂತೆಯೇ ಅವರ ಮನೆಗೆ ಭೇಟಿ ಮಾಡಿ ಧೈರ್ಯ ತುಂಬುವ ಕೆಲಸ ಮಾಡಿದ್ದೇನೆ. ನಗರ ಠಾಣೆ ವೃತ್ತ ನಿರೀಕ್ಷಕರಿಗೆ ಡಿಸೋಜಾ ಅವರ ಮನೆಗೆ ಭೇಟಿ ನೀಡಿ ವರದಿ ಪಡೆಯಲು ತಿಳಿಸಲಾಗಿತ್ತು. ಘಟನೆ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿಗಳ ಜೊತೆ ಸಹ ಮಾತುಕತೆ ನಡೆಸಲಾಗುತ್ತದೆ.

ಸಾಹಿತಿ ನಾ.ಡಿಸೋಜ ಅವರು ಮುಂಜಾಗ್ರತೆ ಹಿನ್ನೆಲೆಯಲ್ಲಿ ನಗರ ಠಾಣೆಗೆ ದೂರು ನೀಡಲು ಸಲಹೆ ನೀಡಿದ್ದೇನೆ ಎಂದು ಹೇಳಿದರು.

ನಂತರ ನಾ.ಡಿಸೋಜಾ ಮಾತನಾಡಿ, ಸುಮಾರು 6 ತಿಂಗಳ ಹಿಂದೆ ಎರಡು ಬೆದರಿಕೆ ಪತ್ರ ಬಂದಿತ್ತು. ಪತ್ರದಲ್ಲಿ ವಿಳಾಸ ಇಲ್ಲ. ದಾವಣಗೆರೆಯಿಂದ ನನಗೆ ಪತ್ರ ಬಂದಿದೆ. ನನಗೆ ಪ್ರತಿ ದಿನ ಹತ್ತಾರು ಪತ್ರಗಳು ಅಂಚೆ ಮೂಲಕ ಬರುತ್ತವೆ. ನನ್ನ ಸಾಹಿತ್ಯ ಹೊಗಳಿಯೋ, ವಿಮರ್ಶೆ ಮಾಡಿ ಪತ್ರ ಬರುವುದು ಸಹಜ. ಆದರೆ ಅನಾಮಧೇಯವಾಗಿ ಎರಡು ಪತ್ರ ಬಂದಾಗ ನಾನು ಹೆಚ್ಚು ತಲೆ ಕೆಡಿಸಿಕೊಂಡಿಲ್ಲ. ಅನಗತ್ಯವಾಗಿ ಪೊಲೀಸರಿಗೆ ದೂರು ನೀಡಿ ವಿಷಯ ಇನ್ನಷ್ಟು ದೊಡ್ಡದು ಮಾಡುವ ಇಷ್ಟ
ತಮಗೆ ಇಲ್ಲ ಎಂದು ಹೇಳಿದರು.

ಈ ಸಂದರ್ಭದಲ್ಲಿ ಆಪ್ಸ್‌ಕೋಸ್‌ ಸದಸ್ಯ ಆರ್‌.ಎಸ್‌.ಗಿರಿ, ಬಗರ್‌ಹುಕುಂ ಸಮಿತಿ ಸದಸ್ಯ ರೇವಪ್ಪ ಹೊಸಕೊಪ್ಪ, ನಗರಸಭೆ ಸದಸ್ಯೆ ನಾದೀರಾ ಪರ್ವಿನ್‌, ಲೇಖಕ ವಿಲಿಯಂ, ರವೀಂದ್ರ ಬಸರಾಣಿ, ವಿನಾಯಕ ರಾವ್‌ ಮನೇಘಟ್ಟ ಇನ್ನಿತರರು ಇದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

2 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

3 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

9 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

1 day ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

1 day ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

2 days ago