ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಕಳೆದುಕೊಂಡಿದ್ದ ಸುಮಾರು 300 ಗ್ರಾಂ ಚಿನ್ನಾಭರಣವನ್ನು ಹಿಂತಿರುಗಿಸಿ ವ್ಯಕ್ತಿಯೊಬ್ಬರು ಮಾನವೀಯತೆ ಮೆರೆದಿದ್ದಾರೆ.
ತುಮಕೂರಿನ ವಕ್ಕೋಡಿ ಗ್ರಾಮದ ಗುರುರಾಜ್ ಎಂಬುವವರು ಕಳೆದು ಹೋದ ಬ್ಯಾಗ್ ವಾರಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.
ಶಿವಮೊಗ್ಗ ಮೂಲದ ಕುಟುಂಬವೊಂದು 300 ಗ್ರಾಂ ಚಿನ್ನ ಇದ್ದು ಬ್ಯಾಗ್ ಕಳೆದುಕೊಂಡಿತ್ತು. ಪೊಲೀಸರ ಸಹಾಯದಿಂದ ಗುರುರಾಜ್ ಅವರು ಬ್ಯಾಗನ್ನು ಮಾಲೀಕರು ಮರಳಿಸಿದ್ದಾರೆ.
ತುಮಕೂರು ತಾಲೂಕಿನ ವಕ್ಕೋಡಿ ಗ್ರಾಮದ ಗುರುರಾಜ್ ನ್ಯಾಯಾಲಯದಲ್ಲಿ ಎಫ್ಡಿಎ ಆಗಿ ಕೆಲಸ ಮಾಡುತ್ತಿದ್ದಾರೆ. ಶಿವಮೊಗ್ಗ ರೈಲ್ವೆ ನಿಲ್ದಾಣದ ಲಿಫ್ಟ್ನಲ್ಲಿ ಬ್ಯಾಗ್ ಪತ್ತೆಯಾಗಿತ್ತು. ರೈಲು ತುಂಬಾ ಬ್ಯಾಗ್ ಕಳೆದುಕೊಂಡವರನ್ನು ಹುಡುಕಿದ್ದಾರೆ. ನಂತರ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿ ತುಮಕೂರಿಗೆ ಬಂದಿದ್ದಾರೆ.
ಹದಿನೈದು ಲಕ್ಷ ಮೌಲ್ಯದ ಚಿನ್ನಾಭರಣ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ತುಲಕೂರಿನ ವ್ಯಕ್ತಿ
ಶಿವಮೊಗ್ಗದ ವಿನೋಭಾನಗರದ ಅರ್ಪಿತಾ ಕುಟುಂಬ ಚಿಂತಾಮಣಿಗೆ ಸಂಬಂಧಿಕರ ಮದುವೆಗೆ ಹೊರಟಿತ್ತು. ಈ ವೇಳೆ ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಬ್ಯಾಗ್ ಕಳೆದುಕೊಂಡಿದ್ದರು. ಬ್ಯಾಗ್ ನಾಪತ್ತೆಯಿಂದ ಕಂಗಾಲಾಗಿದ್ದ ಕುಟುಂಬ. ಬ್ಯಾಗ್ನಲ್ಲಿ 300 ಗ್ರಾಂ ಚಿನ್ನದ ಒಡವೆ ಇದ್ದ ಬಗ್ಗೆ ಪೊಲೀಸರಿಗೆ ದೂರು ನೀಡಲು ಹೋಗಿದ್ದಾರೆ. ಪೊಲೀಸರು ಗುರುರಾಜ್ ನೀಡಿದ್ದ ಮಾಹಿತಿ ಆಧರಿಸಿ ಅದೇ ಬ್ಯಾಗ್ ಎಂದು ಅಂದಾಜಿಸಿದ್ದಾರೆ.
ರೈಲ್ವೆ ಪೊಲೀಸರು ಬ್ಯಾಗ್ ಇದ್ದ ಬಗ್ಗೆ ಗುರುರಾಜ್ ಜೊತೆ ಮೊಬೈಲ್ನಲ್ಲಿ ಮಾತನಾಡಿದರು. ಅರ್ಪಿತಾ ಕುಟುಂಬಕ್ಕೆ ಬ್ಯಾಗ್ ಹಿಂತಿರುಗಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್