ಮಲೆನಾಡಿನಲ್ಲಿ ಎಲೆ ಚುಕ್ಕೆ ತೀವ್ರತೆ ಹೆಚ್ಚಾಗಿದ್ದು, ರೈತನೋರ್ವನ ಬಲಿ ಪಡೆದುಕೊಂಡಿದೆ.
ಎಲೆಚುಕ್ಕೆ ರೋಗಕ್ಕೆ ಅಡಕೆ ತೋಟ ಬಲಿಯಾದ ಹಿನ್ನೆಲೆ ಮಾಡಿದ ಸಾಲ ತೀರಿಸಲಾಗದೆ ಸಂಕಷ್ಟಕ್ಕೆ ಸಿಲುಕಿದ ರೈತ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸನಗರ ತಾಲೂಕಿನ ಕರಿಮನೆ ಗ್ರಾಪಂ ವ್ಯಾಪ್ತಿಯ ಕಿಳಮದೂರು ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಕರಿಮನೆ ಗ್ರಾಪಂ ಕಿಳಂದೂರು ಗ್ರಾಮದ ಕೃಷ್ಣಪ್ಪಗೌಡ (60) ಮೃತ ವ್ಯಕ್ತಿ ಮನೆಯ ಪಕ್ಕದಲ್ಲಿರುವ ಮಾವಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತ ಕೃಷ್ಣಪ್ಪಗೌಡ ಅವರ ಸಹೋದರ ಯೋಗೇಂದ್ರ ಗೌಡ ಜಂಟಿ ಹೆಸರಿನಲ್ಲಿ 4 ಎಕರೆ 11 ಗುಂಟೆ, ಕೃಷ್ಣಪ್ಪಗೌಡ ಹೆಸರಿನಲ್ಲಿ 2 ಎಕರೆ 20 ಗುಂಟೆ ಜಮೀನು ಹೊಂದಿದ್ದರು. ಜಮೀನಿನಲ್ಲಿ ಅಡಕೆ ತೋಟ ಮತ್ತು ಭತ್ತದ ಕೃಷಿ ಮಾಡಿಕೊಂಡಿದ್ದರು. ಆದರೆ ಎಲೆಚುಕ್ಕೆ ರೋಗದಿಂದ ಅಡಕೆ ತೋಟ ಸಂಪೂರ್ಣ ಹಾಳಾಗಿದ್ದು ತೊಂದರೆಗೆ ಸಿಲುಕಿದ್ದರು.
ಕೃಷಿ ಅಭಿವೃದ್ಧಿಗಾಗಿ ಕೆನರಾ ಬ್ಯಾಂಕ್ ನಲ್ಲಿ 3 ಲಕ್ಷ, ನಗರ ನೀಲಕಂಠೇಶ್ವರ ಪತ್ತಿನ ಸಹಕಾರ ಸಂಘದಲ್ಲಿ ರೂ.1.5 ಲಕ್ಷ ಸಾಲ ಮಾಡಿದ್ದರು. ಅಲ್ಲದೇ ಕೃಷಿ ಕೆಲಸಕ್ಕಾಗಿ ಊರಿನಲ್ಲಿ ಹಲವರ ಹತ್ತಿರ ಕೈಸಾಲ ಮಾಡಿಕೊಂಡಿದ್ದರು. ಆದರೆ ಅಡಿಕೆ ಬೆಳೆ ಎಲೆಚುಕ್ಕೆ ರೋಗಕ್ಕೆ ತುತ್ತಾದ ಹಿನ್ನೆಲೆಯಲ್ಲಿ ಮಾಡಿದ ಸಾಲ ಹೇಗೆ ತೀರಿಸೋದು ಎಂದು ಯೋಚನೆಗೀಡಾಗಿ ಮನೆಯಲ್ಲಿ ಹೇಳಿಕೊಂಡಿದ್ದರು.
ಈ ಕಾರಣವೇ ನಮ್ಮ ತಂದೆಯ ಆತ್ಮಹತ್ಯೆಗೆ ಕಾರಣ. ಅದು ಬಿಟ್ಟು ಬೇರೆ ಯಾವುದೇ ಕಾರಣ ಇರಲಿಲ್ಲ ಎಂದು ಅವರ ಮಗ ಸತೀಶ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…
ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…
ಬಸ್-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…
ಅಕ್ರಮ ವಿದ್ಯುತ್ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು - ತೋಟದ ಮಾಲೀಕನ ಬಂಧನ A three-year-old male…
ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್ Shivamogga rowdy sheeter…
ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ Kudumallige Society CEO Madan,…