ರಿಪ್ಪನ್‌ಪೇಟೆ : ಇಂದು ಬಲಿಪಾಡ್ಯಮಿಯ ಅಂಗವಾಗಿ ರಿಪ್ಪನ್‌ಪೇಟೆಯ ವಿವಿದಢೆಯಲ್ಲಿ ಮತ್ತು ಮಜರಾಯಿ ಇಲಾಖೆಯವರ ಅದೇಶದನ್ವಯ ಹಲವು ದೇವಸ್ಥಾನಗಳಲ್ಲಿ ಗೋಪೂಜೆಯನ್ನು ಶ್ರದ್ದಾಭಕ್ತಿಯಿಂದ ಸಂಭ್ರಮಸಿದರು.
ಇಲ್ಲಿನ ಗಣಪತಿ ದೇವಸ್ಥಾನದಲ್ಲಿ ಬೆಳಗ್ಗೆ ಗೋವುಯನ್ನು ಶೃಂಗರಿಸಿ ದೇವಸ್ಥಾನದ ಪ್ರದಾನ ಅರ್ಚಕ ವೇ.ಚಂದ್ರಶೇಖರ ಭಟ್ ಮತ್ತು ಗುರುರಾಜ್ ಭಟ್ ನೇತೃತ್ವದಲ್ಲಿ ಗೋ ಮಾತೆಗೆ ಬೆಲ್ಲ ಅಕ್ಕಿ ಬಾಳೆಹಣ್ಣು ನೀಡಿ ವಿಶೇಷ ಪೂಜೆ ಸಲ್ಲಿಸಲಾಯಿತು.
ದೇವಸ್ಥಾನದ ಧರ್ಮದರ್ಶಿ ಆರ್.ಈ.ಈಶ್ವರಶೆಟ್ಟಿ, ಎಂ.ಡಿ.ಇಂದ್ರಮ್ಮ,ಗಣೇಶ್ ಎನ್.ಕಾಮತ್, ಎನ್.ಸತೀಶ್,ಸುಧೀಂದ್ರ ಪೂಜಾರಿ,ಮಂಜಪ್ಪ, ಮೋಹನ್,ಜಯಲಕ್ಷಿ, ರಾಘವೇಂದ್ರ,ಕೆ.ಆರ್.ಭೀಮರಾಜ್‌ಗೌಡರು, ವೈ.ಜೆ.ಕೃಷ್ಣ,ರಾಘವೇಂದ್ರ ಆರ್.ಸರಸ್ವತಿ ರಾಘವೇಂದ್ರ,ಇನ್ನಿತರರು ಹಾಜರಿದ್ದರು.
[ ರಿಪ್ಪನ್‌ಪೇಟೆಯ ಸಮೀಪದ ಹಾರೋಹಿತ್ತಲು ಗ್ರಾಮದಲ್ಲಿ ನಾಗರತ್ನಮ್ಮ ಸಿದ್ದಪ್ಪಗೌಡರ ರೈತ ಕುಟುಂಬದವರು ಗೋಪೂಜೆಯನ್ನು ಸಾಮೂಹಿಕವಾಗಿ ಆಚರಿಸಿದರು.]
[ರಿಪ್ಪನ್‌ಪೇಟೆಯ ಸಮೀಪದ ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದಲ್ಲಿ ಮಠದ ಮ.ನಿ.ಪ್ರ.ಆಭಿನವ ಚನ್ನಬಸವ ಮಹಾಸ್ವಾಮೀಜಿ ಗೋ ಮಾತೆಯನ್ನು ಪೂಜಿಸಿ ಬಾಳೆಹಣ್ಣು ಅಕ್ಕಿ ಬೆಲ್ಲವನ್ನು ನೀಡುತ್ತಿರುವುದು.]