Headlines

ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ ಮೂರು ಟಿಪ್ಪರ್ ಲಾರಿ ವಶಕ್ಕೆ !!!|Sand Mafia

ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿ ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ ಮೂರು ಟಿಪ್ಪರ್ ವಾಹನಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ನಡೆದಿದೆ.

ತಾಲೂಕಿನ ಮುತ್ತಲ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ದಾಳಿ ಮಾಡಿ, ಕೆಎ-15-3172, ಕೆಎ-15-ಎ-0957, ಕೆಎ-42-2108 ನೋಂದಣಿ ಸಂಖ್ಯೆ ಮೂರು ಟಿಪ್ಪರ್‌ಗಳನ್ನು ವಶಕ್ಕೆ ಪಡೆದು ಆರೋಪಿಗಳಾದ ಈಚಲಕೊಪ್ಪ ಕಿರಣ, ಮುತ್ತಲ ಮಂಜುನಾಥ ಮತ್ತು ರಾಮಚಂದ್ರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.

ವಲಯ ಅರಣ್ಯಾಧಿಕಾರಿ ರಾಘವೇಂದ್ರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಉಪವಲಯ ಅರಣ್ಯಾಧಿಕಾರಿಗಳಾದ ಯುವರಾಜ್, ರಾಘವೇಂದ್ರ, ಮಂಜುನಾಥ್, ವಾಹನ ಚಾಲಕರಾದ ಜಗದೀಶ್, ಪ್ರಮೋದ್‌ ದಾಳಿಯಲ್ಲಿ ಭಾಗವಹಿಸಿದ್ದರು.

ಹೊಸನಗರ ತಾಲೂಕಿನಲ್ಲಿ ಪ್ರಭಾವಿ ರಾಜಕೀಯ ನಾಯಕರ ಕೃಪೆಯಲ್ಲಿ ಅಕ್ರಮ ಮರಳು ಸಾಗಾಟ ಮಾಡುವವರ ಹೆಡೆಮುರಿ ಕಟ್ಟುವಲ್ಲಿ ಅರಣ್ಯ ಇಲಾಖೆ ಮುಂದಾಗಿರುವುದು ವಿಶೇಷವಾಗಿದ್ದು ಇದೇ ತರಹ ಇನ್ನಷ್ಟೂ ಅಕ್ರಮ ಮರಳು ಸಾಗಾಟ ವಾಹನಗಳನ್ನು ಮಟ್ಟ ಹಾಕುತ್ತಾರೋ‌ ಕಾದು ನೋಡಬೇಕಾಗಿದೆ.

Leave a Reply

Your email address will not be published. Required fields are marked *

Exit mobile version