ರಿಪ್ಪನ್‌ಪೇಟೆ: ಇಲ್ಲಿನ ಸಮೀಪದ ಆಲುವಳ್ಳಿ ಗ್ರಾಮದಲ್ಲಿ 67ನೇ ಕರ್ನಾಟಕ ರಾಜ್ಯೋತ್ಸವದ ಅದ್ಧೂರಿಯಾಗಿ ನಡೆಯಿತು.
ಆಲುವಳ್ಳಿ ಗ್ರಾಮದ ವೃತ್ತದಲ್ಲಿ ಕನ್ನಡ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.ಪ್ರಮುಖ ಬೀದಿಗಳಲ್ಲಿ ತಾಯಿ ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರೆ ಮತ್ತು ಮೆರವಣಿಗೆ ನಡೆಯಿತು.
ಮಕ್ಕಳು ವಿವಿಧ ವೇಷಭೂಷಣ ಧರಿಸಿ ಮೆರವಣಿಗೆಯಲ್ಲಿ ಪಾಲ್ಗೊಂಡು ಎಲ್ಲಾರ ಗಮನ ಸೆಳೆದರು.
ಕಾರ್ಯಕ್ರಮದ ಧ್ವಜಾರೋಹಣ ಕಾರ್ಯಕ್ರಮವನ್ನು ಕನ್ನಡ ಸಂಘದ ಅಧ್ಯಕ್ಷರಾದ ಟೀಕೇಶಪ್ಪ ಗೌಡ ನೆರವೇರಿಸಿದರು
ಈ ಸಂಧರ್ಭದಲ್ಲಿ ಗ್ರಾಮದ ಹೈಮಾಸ್ಕ್ ಬೀದಿ ದೀಪವನ್ನು ಹೊಸನಗರ ತಾಪಂ ಮಾಜಿ ಅಧ್ಯಕ್ಷ ವೀರೇಶ್ ಆಲುವಳ್ಳಿ ಉದ್ಘಾಟಿಸಿದರು.
ಅಂಬೇಡ್ಕರ್ ವೃತ್ತದ ನಾಮಫಲಕವನ್ನು ಕೆಂಚನಾಲ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ಉದ್ಘಾಟಿಸಿದರು.
ಈ ಸಂಧರ್ಭದಲ್ಲಿ ಕೆಂಚನಾಲ ಗ್ರಾ ಪಂ ಸದಸ್ಯರಾದ ಹೂವಮ್ಮ ರಾಮಪ್ಪ,ಮಹಮ್ಮದ್ ಷರೀಫ್,ಪರಮೇಶ್,ನಾಗಾರ್ಜುನ ಸ್ವಾಮಿ,ಎಸ್.ಡಿ.ಎಂ.ಸಿ ಅಧ್ಯಕ್ಷರು,ಕನ್ನಡ ಸಂಘದ ಕಾರ್ಯದರ್ಶಿ ಯೋಗೇಂದ್ರಪ್ಪ ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.