ಸಾಗರ : ಬೈಕ್ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸಾಗರ ತಾಲೂಕಿನ ಕಾಸ್ಪಾಡಿ ಗ್ರಾಮದಲ್ಲಿ ನಡೆದಿದೆ.
ಶಿವಮೊಗ್ಗ ತಾಲ್ಲೂಕಿನ ಹಾರನಹಳ್ಳಿ ಗ್ರಾಮದ ಹರೀಶ್ ಕುಮಾರ್ (42) ಎಂಬುವರು ಮೃತಪಟ್ಟ ದುರ್ಧೈವಿಯಾಗಿದ್ದಾರೆ.
ಸಹೋದರಿಯ ಮನೆಗೆ ಹೋಗಿ ವಾಪಾಸ್ ಮನೆಗೆ ಬೈಕ್ ನಲ್ಲಿ ಮರಳುವಾಗ ಕಾಸ್ಪಾಡಿ ತಿರುವಿನಲ್ಲಿ ಬೈಕ್ ಮೇಲಿನ ನಿಯಂತ್ರಣ ಕಳೆದುಕೊಂಡು ಉರುಳಿ ಬಿದ್ದಿದ್ದಾರೆ.ತೀವ್ರ ಸ್ವರೂಪದ ಗಾಯವಾಗಿದ್ದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಕುರಿತು ಸಾಗರ ಗ್ರಾಮಾಂತರ ಬುಧವಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.