ರಿಪ್ಪನ್ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಕೆದಲುಗುಡ್ಡೆ ಗ್ರಾಮದಲ್ಲಿ ಚಲುಸುತಿದ್ದ ಬಸ್ ನ್ನು ಅಡ್ಡ ಹಾಕಿ ನಾಲ್ವರು ಯುವಕರು ವಿದ್ಯಾರ್ಥಿಯೊಬ್ಬನ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಪಟ್ಟಣದ ಸರ್ಕಾರಿ ಪ್ರೌಡ ಶಾಲೆಯ 10 ನೇ ತರಗತಿಯ ವಿದ್ಯಾರ್ಥಿ ಗಾಳಿಬೈಲ್ ಗ್ರಾಮದ ನಿವಾಸಿ ರಿಫಾಯತ್(17) ಇಂದು ಸಂಜೆ ವಿಶೇಷ ತರಗತಿ ಮುಗಿಸಿಕೊಂಡು ತನ್ನ ಊರಾದ ಕೆಂಚನಾಲಕ್ಕೆ ಬಸ್ ನಲ್ಲಿ ಹಿಂದಿರುತಿದ್ದಾಗ ನಾಲ್ಕು ಜನ ಯುವಕರು ಬೈಕ್ ನಲ್ಲಿ ಹಿಂಬಾಲಿಸಿ ಕೆದಲುಗುಡ್ಡೆ ಗ್ರಾಮದ ಬಳಿ ಬಸ್ ಅಡ್ಡ ಹಾಕಿ ವಿದ್ಯಾರ್ಥಿಯನ್ನು ಬಸ್ ನಿಂದ ಕೆಳಗಿಳಿಸಿ ಹಲ್ಲೆ ನಡೆಸಿರುವ ಘಟನೆ ಇಂದು ಸಂಜೆ ನಡೆದಿದೆ.
ಹಲ್ಲೆಗೊಳಗಾದ ವಿದ್ಯಾರ್ಥಿಗೆ ಪಟ್ಟಣದ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಗೆ ದಾಖಲಿಸಲಾಗಿದೆ.
ರಿಪ್ಪನ್ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್