ಜನಾಕ್ರೋಶ ಪಾದಯಾತ್ರೆ ಡಬಲ್ ಇಂಜಿನ್ ಸರ್ಕಾರಕ್ಕೆ ಎಚ್ಚರಿಕೆಯ ಗಂಟೆಯಾಗಲಿದೆ : ಕಲಗೋಡು ರತ್ನಾಕರ್|Congress

ರಿಪ್ಪನ್‌ಪೇಟೆ : ಇದೇ 28 ರಂದು ಅಯನೂರಿನಿಂದ ಶಿವಮೊಗ್ಗಕ್ಕೆ ಹತ್ತು ಹಲವು ಸಮಸ್ಯೆಗಳ ಪರಿಹಾರಕ್ಕಾಗಿ ಜನಾಕ್ರೋಶ ಪಾದಯಾತ್ರೆ ಹಾಗೂ ಬೃಹತ್ ಸಮಾವೇಶವನ್ನು ಕೇಂದ್ರ ಮತ್ತು ರಾಜ್ಯದ ಡಬಲ್ ಇಂಜಿನ್ ಸರ್ಕಾರಕ್ಕೆ ಎಚ್ಚರಿಕೆಯ ಗಂಟೆಯಾಗಲಿದೆ ಎಂದು ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಕಲಗೋಡು ರತ್ನಾಕರ್ ಹೇಳಿದರು.


ಉಳುವವನೇ ಹೊಲದೊಡೆಯ ಹೋರಾಟದ ಹಿನ್ನಲೆಯ ರಾಜ್ಯದ ಹಿರಿಯ ಸಮಾಜವಾದಿ ನಾಯಕ ಕಾಗೋಡು ತಿಮ್ಮಪ್ಪನವರ ಅಧ್ಯಕ್ಷತೆಯಲ್ಲಿ ನಡೆಯುವ ಜನಾಕ್ರೋಶ ಪಾದಯಾತ್ರೆ  ಕುರಿತು ಬೆಳ್ಳೂರು, ಅರಸಾಳು ಹಾಗೂ ಕೆಂಚನಾಲ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ  ಅವರು ಮಾತನಾಡಿದರು.

ಈಗಾಗಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರದ ದ್ವಂದ್ವ ನಿಲುವಿನಿಂದ ಶರಾವತಿ ಸಂತ್ರಸ್ತರು ಅತಂತ್ರ ಸ್ಥಿತಿಯನ್ನು ತಲುಪಿದ್ದಾರೆ. ಕಾಂಗ್ರೆಸ್  ಅವಧಿಯಲ್ಲಿ ಬಗರ್‌ಹುಕುಂ ರೈತರ ಮತ್ತು ಶರಾವತಿ ಮುಳಗಡೆ ಸಂತ್ರಸ್ಥ ರೈತರಿಗೆ ಭೂ ಒಡೆತನ ನೀಡುವ  ಮದನ್ ಗೋಪಾಲ್ ವರದಿಯ ಹಕ್ಕನ್ನು  ಕಸಿದುಕೊಳ್ಳುವ ಮೂಲಕ ಮಲೆನಾಡಿನ ರೈತರ ಜನಾಕ್ರೋಶಕ್ಕೆ ಬಿಜೆಪಿ ಪಕ್ಷ ಗುರಿಯಾಗಿದೆ.


ದೈನಂದಿನ  ಬಳಕೆ ವಸ್ತುಗಳ ಬೆಲೆ ಗಗನಕ್ಕೇರಿದ್ದು  ಜನಸಾಮಾನ್ಯರ ಬದುಕು ದುಸ್ತರವಾಗಿದೆ.ಈ ಎಲ್ಲಾ ಅಂಶಗಳಿಂದ ಡಬ್ಬಲ್ ಇಂಜಿನ್ ಸರ್ಕಾರವನ್ನು  ಕಿತ್ತೊಗೆಯಲು ಜನ ಪಣತೊಟ್ಟಿದ್ದಾರೆ,ಜನಸಾಮಾನ್ಯರು ಈ ಪಾದಯಾತ್ರೆಗೆ ಬೆಂಬಲ ನೀಡುವುದರ ಮೂಲಕ ರೈತರ ಬೆನ್ನಿಗೆ ನಿಲ್ಲಬೇಕಾಗಿದೆ,ಎಲ್ಲಾರು ಸ್ವಯಂಪ್ರೇರಿತವಾಗಿ ಕಾರ್ಯಕ್ರಮಕ್ಕೆ ಆಗಮಿಸುವಂತೆ ಮನವಿ‌ ಮಾಡಿದರು.

ಈ ಜನಾಕ್ರೋಶ ಪಾದಯಾತ್ರೆ ಕಾರ್ಯಕ್ರಮಕ್ಕೆ ಕೆರೆಹಳ್ಳಿ – ಹೊಂಬುಜ  ಹೋಬಳಿ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿ ಜನ ಭಾಗಿಯಾಗುವ ನಿರೀಕ್ಷೆ ಇದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ  ಬಿ ಪಿ  ರಾಮಚಂದ್ರ,ಜಿಲ್ಲಾ ಮುಖಂಡ ಅಮೀರ್ ಹಂಜಾ,ಈಶ್ವರಪ್ಪ ಗೌಡ, ಗ್ರಾಮ ಪಂಚಾಯತ್ ಸದಸ್ಯರಾದ ಮಧುಸೂದನ್, ಆಸಿಫ್ ಭಾಷಾಸಾಬ್, ಗಣಪತಿ, ಪ್ರಕಾಶ್ ಪಾಲೇಕರ್  ಸೇರಿದಂತೆ  ಪಕ್ಷದ ಸ್ಥಳೀಯ ಮುಖಂಡರು ಹಾಜರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

12 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

1 day ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

1 day ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

1 day ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

1 day ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

1 day ago