ತಾಯಿಯ ಅಂತ್ಯ ಸಂಸ್ಕಾರ ಮುಗಿಸಿ ಮನೆಗೆ ಹಿಂತಿರುಗಿದ ಮಗ ಹೃದಯಾಘಾತದಿಂದ ಸಾವು|Hosanagara

ಹೊಸನಗರ : ತಾಯಿಯ ಅಂತ್ಯ ಸಂಸ್ಕಾರ ಮುಗಿಸಿ ಮನೆಗೆ ಬಂದ ಮಗ ಸಹ ಸಾವನ್ನಪ್ಪಿದ ಘಟನೆ ತಾಲೂಕಿನ ಸುಳಗೋಡು ಗ್ರಾಮ ಪಂಚಾಯತಿಯ ಹುಲ್ಲುಸಾಲೆ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.




ಕಳೆದ ಶನಿವಾರ ಹುಲ್ಲುಸಾಲೆ ಗ್ರಾಮದ ಚಿನ್ನಮ್ಮ(78) ವಯೋ ಸಹಜವಾಗಿ ಸಾವನ್ನಪ್ಪಿದ್ದರು. ಇವರ ಅಂತ್ಯ ಸಂಸ್ಕಾರವನ್ನು ಭಾನುವಾರ ನಡೆಸಲಾಯಿತು. ತಾಯಿ ಚಿನ್ನಮ್ಮನ ಅಂತ್ಯ ಸಂಸ್ಕಾರ ಮುಗಿಸಿ ಮನೆಗೆ ಬಂದ 30 ನಿಮಿಷದ ನಂತರ ಚಿನ್ನಮ್ಮನ ಮಗ ತಿಮ್ಮಪ್ಪಗೌಡ(58) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.





ತಿಮ್ಮಪ್ಪಗೌಡ ತನ್ನ ತಾಯಿಯನ್ನು ಬಹಳ ಪ್ರೀತಿಸುತ್ತಿದ್ದರು. ಇದರಿಂದ ಅವರಿಗೆ ಹೃದಯಾಘಾತವಾಗಿರಬಹುದು ಎನ್ನಲಾಗುತ್ತಿದೆ. ಒಂದೇ ಮನೆಯಲ್ಲಿ ತಾಯಿ ಮಗ ಸಾವನ್ನಪ್ಪಿದ್ದು, ಕುಟುಂಬಕಷ್ಟೇ ಅಲ್ಲದೆ, ಗ್ರಾಮಸ್ಥರಿಗೆ ದಿಗ್ಬ್ರಮೆಯನ್ನುಂಟು ಮಾಡಿದೆ. ತಿಮ್ಮಪ್ಪಗೌಡರಿಗೆ ಪತ್ನಿ ಹಾಗೂ ಓರ್ವ ಪುತ್ರ ಇದ್ದಾರೆ.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶ

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…

5 hours ago

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…

7 hours ago

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…

10 hours ago

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…

10 hours ago

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…

11 hours ago

ರಿಪ್ಪನ್‌ಪೇಟೆ ಕೆಪಿಎಸ್‌ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ

ರಿಪ್ಪನ್‌ಪೇಟೆ ಕೆಪಿಎಸ್‌ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ Karnataka Public…

11 hours ago