ತೀರ್ಥಹಳ್ಳಿಯಲ್ಲಿ ಕೋರ್ಟ್ ಕಟ್ಟಡವನ್ನೇ ಗೋಡೌನ್ ಮಾಡಿಕೊಂಡಿದ್ದ ಗುಜರಿ ವ್ಯಾಪಾರಿ – ಆರೋಪಿಗೆ ನ್ಯಾಯಂಗ ಬಂಧನ|Thirthahalli

ನ್ಯಾಯಾಲಯದ ಕಟ್ಟಡವನ್ನು ಗೋಡೌನ್ ಮಾಡಿ ಕೊಂಡಿದ್ದ ವ್ಯಕ್ತಿಯೊಬ್ಬನಿಗೆ ತೀರ್ಥಹಳ್ಳಿ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿ, ಬಿಗ್ ಶಾಕ್ ನೀಡಿರುವಂತ ಘಟನೆ ನಡೆದಿದೆ.

ತೀರ್ಥಹಳ್ಳಿ ಪಟ್ಟಣದ ಶಿಬಿನಕೆರೆಯಲ್ಲಿ ಹೊಸ ನ್ಯಾಯಾಲಯವಾದ ಪ್ರಯುಕ್ತ ಸೊಪ್ಪು ಗುಡ್ಡೆಯಲ್ಲಿರುವ ಹಳೆ ನ್ಯಾಯಾಲಯದ ಕಟ್ಟಡದಲ್ಲಿ ಬೀಗಗಳನ್ನು ಹಾಕಿ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧಿತ ಮತ್ತು ನಿಷೇಧಿತ ಪ್ರದೇಶವೆಂದು ಕಟ್ಟಡಗಳಿಗೆ ಬೀಗಗಳನ್ನು ಹಾಕಲಾಗಿತ್ತು.

ನ್ಯಾಯಾಲಯದ ಕಟ್ಟಡದ ಆವರಣದಲ್ಲಿ ಅನೇಕರು ತಮ್ಮ ಕಾರುಗಳನ್ನು ಅಕ್ರಮ ಪಾರ್ಕಿಂಗ್ ಮಾಡಿಕೊಂಡಿದ್ದರು. ಇದಲ್ಲದೆ ಸೊಪ್ಪುಗುಡ್ಡೆ ಎರಡನೇ ಕ್ರಾಸ್ ನಿವಾಸಿ ಮೇರಾ ರಾಮ್ ಬಿನ್ ಮಕಾನಾರಾಮ್ 48 ವರ್ಷ ಈತನು ನ್ಯಾಯಾಲಯ ಕಟ್ಟಡದ ಒಳಗೆ ಅತಿಕ್ರಮ ಪ್ರವೇಶ ಮಾಡಿ ಹಿಂಭಾಗದ ಬಾಗಿಲು ಬೀಗವನ್ನು ಮುರಿದು ಬಾಗಿಲು ಮತ್ತು ಕಿಟಕಿಗಳಿಗೆ ಹಾನಿ ಮಾಡಿ ತಾನು ವ್ಯಾಪಾರ ಮಾಡುತ್ತಿರುವ ಗುಜರಿ ಸಾಮಾನುಗಳನ್ನು ಮತ್ತು ರಟ್ಟಿನ ಬಾಕ್ಸ ಗಳನ್ನು ನ್ಯಾಯಾಲಯದ ಕಟ್ಟಡದ ಒಳಗೆ ದಾಸ್ತಾನು ಮಾಡಿದ್ದನು. ಅಲ್ಲದೇ ತನ್ನ ಎರಡು ವಾಹನಗಳನ್ನು ನ್ಯಾಯಾಲಯದ ಆವರಣದ ಒಳಗೆ ಪಾರ್ಕಿಂಗ್ ಮಾಡಿದ್ದನು.

ದಿನಾಂಕ 15 -11-2022 ರಂದು ತೀರ್ಥಹಳ್ಳಿ ಹಿರಿಯ ವ್ಯವಹಾರಗಳ ಸಿವಿಲ್ ನ್ಯಾಯಾಲಯ ಮತ್ತು ಜೆ ಎಂ ಎಫ್ ಸಿ ನ್ಯಾಯಾಲಯ ದ ಆಡಳಿತ ಶಿರೆಸ್ತೆದಾರ್ ಲೀನಾ ಕೆ. ಎಸ್. ರವರು ನ್ಯಾಯಾಲಯದ ಆವರಣದ ಪರಿಶೀಲನೆಗೆ ಹೋದಾಗ ನ್ಯಾಯಾಲಯದ ಕಟ್ಟಡದ ಹಿಂಭಾಗದ ಕೋಣೆಗಳ ಬಾಗಿಲು ಮುರಿದು ಗುಜರಿ ಸಾಮಾನುಗಳು ಮತ್ತು ರಟ್ಟಿನ ಬಾಕ್ಸುಗಳನ್ನು ದಾಸ್ತಾನು ಹಾಕಿರುವುದನ್ನು ಹಾಗೂ ನ್ಯಾಯಾಲಯದ ಆವರಣದಲ್ಲಿ ಎರಡು ವಾಹನಗಳನ್ನು ನಿಲ್ಲಿಸಿರುವುದು ಕಂಡು ಬಂದಿರುತ್ತದೆ. ಅಲ್ಲದೇ ಮೇರಾ ರಾಮ್ ರವರಿಗೆ ಸಂಬಂಧಪಟ್ಟ ಇರುವುದು ಎಂದು ತಿಳಿದುಬಂದಿದೆ. ತಕ್ಷಣ ತೀರ್ಥಹಳ್ಳಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದೆ.

ಈ ಸಂಬಂಧ ತೀರ್ಥಹಳ್ಳಿ ಪೊಲೀಸರು ಐಪಿಸಿ ಸೆಕ್ಷನ್ 448 .427. 3(1) ಮತ್ತು ಪ್ರಿವೆನ್ಷನ್ ಆಫ್ ಡ್ಯಾಮೇಜ್ ಪಬ್ಲಿಕ್ ಪ್ರಾಪರ್ಟಿ ಆಕ್ಟ್ 1984ರ ಅಡಿಯಲ್ಲಿ ಎಫ್‌ಐಆರ್ ರನ್ನು ದಾಖಲು ಮಾಡಿ ತೀರ್ಥಹಳ್ಳಿ ಜೆಎಂಪ್ಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಧೀಶರು ಆರೋಪಿ ಮೇರಾ ರಾಮ್ ಗೆ ನ.28ರವರೆಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ. ಈ ಮೂಲಕ ನ್ಯಾಯಾಲಯದ ಆವರಣವನ್ನೇ ಗೋಡೌನ್ ಮಾಡಿಕೊಂಡಿದ್ದಂತ ಆರೋಪಿ ಮೇರಾ ರಾಮ್ ಜೈಲು ಪಾಲಾಗುವಂತೆ ಆಗಿದೆ.

ತೀರ್ಥಹಳ್ಳಿ ಹೊಸ ನ್ಯಾಯಾಲಯ ಪ್ರಾರಂಭವಾದ ನಂತರ ಹಳೆ ಕಟ್ಟಡವನ್ನು ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹಾಕಿ ನ್ಯಾಯಾಲಯದ ಕೊಠಡಿಗಳಿಗೆ ಬೀಗ ಹಾಕಲಾಗಿತ್ತು. ಕೆಲವು ದುಷ್ಕರ್ಮಿಗಳು ರಾತ್ರಿ ಹೊತ್ತು ನ್ಯಾಯಾಲಯದ ಹಿಂಭಾಗದಲ್ಲಿ ಕುಳಿತು ಮಧ್ಯ ಸೇವನೆ ಮಾಡುವುದು ಧೂಮಪಾನ ಮಾಡುವುದು ಇನ್ನಿತರೆ ಕೆಲಸಗಳಲ್ಲಿ ನ್ಯಾಯಾಲಯದ ಆಭರಣದ ಸ್ವಚ್ಛತೆಯನ್ನು ಹಾಳು ಮಾಡುತ್ತಿದ್ದರು. ಅನೇಕರು ತಮ್ಮ ಕಾರುಗಳನ್ನು ನ್ಯಾಯಾಲಯದ ಆವರಣದ ಒಳಗೆ ನಿಲ್ಲಿಸಿ ಪಾರ್ಕಿಂಗ್ ವ್ಯವಸ್ಥೆಗೆ ಮಾಡಿಕೊಂಡಿದ್ದರು .ಈ ಬಗ್ಗೆ ಹಿರಿಯ ಸಿವಿಲ್ ನ್ಯಾಯಾಧೀಶರು ಮನಗಂಡು ಲೋಕೋಪಯೋಗಿ ಇಲಾಖೆಯ ಮೂಲಕ ಸ್ವಚ್ಛ ಗೊಳಿಸಲು ಮತ್ತು ನ್ಯಾಯಾಲಯ ಅವಣದಲ್ಲಿ ಸಾರ್ವಜನಿಕರು ಯಾರು ಪ್ರವೇಶ ಮಾಡದಂತೆ ಹಾಗೂ ಕಾರುಗಳನ್ನು ವಾಹನಗಳನ್ನು ಪಾರ್ಕಿಂಗ್ ಮಾಡದಂತೆ ಕ್ರಮ ಜರಗಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

23 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

23 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

1 day ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

1 day ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

1 day ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

2 days ago