ತೀರ್ಥಹಳ್ಳಿ : ಸ್ನೇಹಿತನನ್ನು ಹಣದ ಆಸೆಗೆ ಗುಡ್ಡಕ್ಕೆ ಕರೆಯಿಸಿ ಗುಂಡಿಕ್ಕಿ ಕೊಂದ ತೀರ್ಥಹಳ್ಳಿ ತಾಲೂಕಿನ ವಾಟಗಾರು ಗ್ರಾಮದ ಭುಜಂಗ (45) ಎಂಬುವರಿಗೆ ಶಿವಮೊಗ್ಗದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಭುಜಂಗ ತಮ್ಮ ಪಕ್ಕದ ಗ್ರಾಮದ ಮಳಲಿಮಕ್ಕಿ ಗ್ರಾಮದ ನಾಗರಾಜ್ (35) ನನ್ನು ಕೆಸಿನಮನೆ ಗ್ರಾಮದ ಅಭಯಾರಣ್ಯದ ಗುಡ್ಡಕ್ಕೆ ಕರೆಯಿಸಿ ತನ್ನ ಬಳಿ ಇದ್ದ ನಾಡ ಬಂದೂಕುನಿಂದ ಗುಂಡಿಕ್ಕಿ ಕೊಂದಿದ್ದರು. ಬಳಿಕ ನಾಗರಾಜ್ ಬಳಿ ಇದ್ದ ಬೈಕ್, ಹಣ, ಬಂಗಾರದ ಚೈನ್ ಹಾಗೂ ಉಂಗುರವನ್ನು ತೆಗೆದುಕೊಂಡು ಪರಾರಿಯಾಗಿದ್ದರು.
ಈ ಘಟನೆ ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಹಿನ್ನೆಲೆ ಅಂದಿನ ಡಿವೈಎಸ್ಪಿ ಓಂಕಾರ ನಾಯ್ಕ ಅವರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು.
ಈ ಕುರಿತು ಸರ್ಕಾರದ ಪರ ವಕೀಲರಾದ ಪುಷ್ಪ ಮಂಡಿಸಿದ ವಾದವನ್ನು ಅಲಿಸಿದ ನ್ಯಾಯಾಧೀಶರಾದ ಬಿ.ಆರ್. ಪಲ್ಲವಿ ಅವರು ಕಲಂ 302 ಮತ್ತು ಕಲಂ7 , 25 ಶಸ್ತ್ತಾಸ್ತ್ರ ಕಾಯ್ಧೆ ಅಡಿ ಆರೋಪ ದೃಢಪಟ್ಟಿದ್ದರಿಂದ ಭುಜಂಗ ಅವರಿಗೆ ಜೀವಾವಧಿ ಶಿಕ್ಷೆ ಹಾಗೂ 2 ಲಕ್ಷ ರೂಪಾಯಿ ದಂಡವನ್ನು ನೀಡಿ ಆದೇಶ ನೀಡಿದೆ. ಒಂದು ವೇಳೆ ದಂಡ ಕಟ್ಟಲು ಆಗದೆ ಹೋದರೆ ಒಂದು ವರ್ಷ ಹೆಚ್ಚುವರಿ ಶಿಕ್ಷೆಯನ್ನು ಅನುಭವಿಸಲು ಸೂಚಿಸಿದೆ.
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…