POSTMAN NEWS

ನೈಜ ಸುದ್ದಿ ನೇರ ಬಿತ್ತರ..

ನ.22 ಕ್ಕೆ ಅಡಕೆ ಬೆಳೆಯ ಎಲೆಚುಕ್ಕೆ ರೋಗದ ಅಧ್ಯಯನಕ್ಕೆ ಕೇಂದ್ರ ತಂಡ ತೀರ್ಥಹಳ್ಳಿಗೆ ಆಗಮನ : ಆರಗ ಜ್ಞಾನೇಂದ್ರ|Araga

ರಾಜ್ಯದಲ್ಲಿ ಅಡಿಕೆ ತೋಟಗಳಲ್ಲಿ ಹಬ್ಬಿರುವ ಎಲೆಚುಕ್ಕೆ ರೋಗದ ಬಗ್ಗೆ ಅಧ್ಯಯನ ನಡೆಸಿ, ಪರಿಹಾರ ಕಂಡುಕೊಳ್ಳಲು ಕೇಂದ್ರ ಸರಕಾರದ ಏಳು ಮಂದಿ ತಜ್ಞರನ್ನು ಒಳಗೊಂಡ ತಜ್ನರ ಸಮಿತಿ ಮುಂದಿನ ವಾರ ರಾಜ್ಯಕ್ಕೆ ಆಗಮಿಸಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳ ಜತೆ ಇಂದು ಮಾತನಾಡಿರುವ ಸಚಿವರು ಮಲೆನಾಡು ಹಾಗೂ ಕರಾವಳಿ ಭಾಗದ ರೈತರು ಎದುರಿಸುತ್ತಿರುವ ಸಂಕಷ್ಟಕ್ಕೆ ಕೇಂದ್ರ ಸರಕಾರ ತಕ್ಷಣ ಸ್ಪಂದಿಸಿದ್ದು ಅಡಿಕೆ ಬೆಳೆಗೆ ಎದುರಾಗಿರುವ ರೋಗ ನಿವಾರಣೆಗೆ ಸಮಿತಿ ಪರಿಹಾರ ಕಂಡುಕೊಳ್ಳಲು ಸಹಕಾರಿಯಾಗಲಿ ಎಂದು ಹಾರೈಸಿದ್ದಾರೆ.

ಇತ್ತೀಚೆಗಷ್ಟೇ ರಾಜ್ಯ ಅಡಿಕೆ ಬೆಳೆಗಾರರ ಆತಂಕಕ್ಕೆ ಕಾರಣವಾದ ಎಲೆ ಚುಕ್ಕೆ ರೋಗಕ್ಕೆ ಪರಿಹಾರ ಬಯಸಿ ನಿಕಟಪೂರ್ವ ಮುಖ್ಯಮಂತ್ರಿಗಳೂ ಹಾಗೂ ಹಿರಿಯ ಬಿಜೆಪಿ ನಾಯಕರಾದ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ, ಕೇಂದ್ರ ಕೃಷಿ ಸಚಿವ ನರೆಂದ್ರ ಸಿಂಗ್ ತೋಮರ್ ಅವರಿಗೆ, ನವದೆಹಲಿಯಲ್ಲಿ ನಿಯೋಗ ಭೇಟಿಯಾಗಿ ಮನವಿ ಸಲ್ಲಿಸಿದ್ದು ಕೇಂದ್ರ ಸರಕಾರ ಸಮಸ್ಯೆಯ ಪರಿಹಾರಕ್ಕೆ ಪೂರಕವಾಗಿ ಸ್ಪಂದಿಸಿ ಸಮಿತಿ ರಚಿಸಿದೆ ಎಂದರು.

ರಾಜ್ಯದಲ್ಲಿ ಸುಮಾರು 20 ಸಾವಿರ ಹೆಕ್ಟೇರ್ ಪ್ರದೇಶದ ಅಡಿಕೆ ತೋಟಗಳು ಎಲೆ ಚುಕ್ಕೆ ರೋಗಕ್ಕೆ ಬಲಿಯಾಗಿದ್ದು ಕಾಳ್ಗಿಚ್ಚಿನಂತೆ ಇತರೆಡೆ ಹರಡುತ್ತಿದೆ ಎಂದು ಆತಂಕ ವ್ಯಕ್ತಪಡಿಸಿ ಇದೇ ನವೆಂಬರ್ 22ರಂದು, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿಗೆ ಆಗಮಿಸುವ, ಸಂಶೋಧನಾ ತಜ್ಞರನ್ನು ಭೇಟಿಯಾಗಿ ಪರಿಸ್ಥಿತಿಯ ಮನವರಿಕೆ ಮಾಡಿಕೊಡುವೆ ಎಂದು ತಿಳಿಸಿದ್ದಾರೆ.

ಸರಿಸುಮಾರು ಐವತ್ತು ಲಕ್ಷ ಜನರಿಗೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಜೀವನೋಪಾಯ ಕಲ್ಪಿಸಿಕೊಟ್ಟಿ ರುವ ಅಡಿಕೆ ಬೆಳೆ ನಮ್ಮ ಭಾಗದ ರೈತರ ಆರ್ಥಿಕ ಜೀವನಾಡಿಯಾಗಿದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.