w
Headlines
Home » ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಪತಿ

ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಪತಿ


ಗಂಡ ಹೆಂಡತಿ ನಡುವೆ ಜಗಳವಾಗಿದ್ದು, ಗಂಡ ತನ್ನ ಹೆಂಡತಿ ಮೇಲೆ ರಾಡಿನಿಂದ ಹಲ್ಲೆ ನಡೆಸಿ, ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಶಿವಮೊಗ್ಗದ ದುಮ್ಮಳ್ಳಿಯಲ್ಲಿ ನಡೆದಿದೆ.

ಶೋಭ (50) ಕೊಲೆಯಾದ ಮಹಿಳೆ.

ಪ್ರಕಾಶ ಎಂಬಾತ ತನ್ನ ಹೆಂಡತಿ ಶೋಭರನ್ನು ಕೊಲೆ ಮಾಡಿದ್ದಾನೆ. ಇಂದು ಬೆಳಗ್ಗೆ ಸ್ಥಳಕ್ಕೆ ತುಂಗಾನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆರೋಪಿ ಪ್ರಕಾಶ್ ನನ್ನು ಕೃತ್ಯ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಬಂಧಿಸಿದ್ದಾರೆ.



ಶೋಭಾ ದುಮ್ಮಳ್ಳಿಯಲ್ಲಿ ಹಾಲಿನ ಅಂಗಡಿ ನಡೆಸುತ್ತಿದ್ದರು. ಪತಿಯೊಂದಿಗೆ ಸಂಸಾರದಲ್ಲಿ ಸರಿಬಾರದ ಕಾರಣ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಇಬ್ಬರ ನಡುವಿನ ವೈಮನಸ್ಸಿನಲ್ಲಿ ಶೋಭಾ ಪತಿಯ ವಿರುದ್ಧ ದೂರು ದಾಖಲಿಸಿದ್ದರು. ದೂರು ವಾಪಸ್ ತೆಗೆದುಕೊಳ್ಳುವಂತೆ ಪತಿ ಅನೇಕ ಬಾರಿ ಪತ್ನಿಗೆ ಎಚ್ಚರಿಕೆ ನೀಡಿದ್ದ.ವ ಮಾತು ಕೇಳದ ಹಿನ್ನೆಲೆಯಲ್ಲಿ ಪತಿಯೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.



Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.