ಹೊಸನಗರ: ಪಿಎಸ್ಐ ಸೇರಿದಂತೆ ಪೊಲೀಸರ ಸಮವಸ್ತ್ರ ಹರಿದು, ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆ ತಾಲೂಕಿನ ನಗರ ಪೊಲೀಸ್ ಠಾಣೆಯಲ್ಲೇ ನಡೆದಿದೆ.
ಹೌದು ಹೀಗಂತ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರಿಂದಲೇ ದೂರು ದಾಖಲಾಗಿದ್ದು ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ.
ಬೇಳೂರು ಗ್ರಾಮದ ಮಕ್ಕಿಮನೆ ವಾಸಿಗಳಾದ ಕೃಷ್ಣಮೂರ್ತಿ(45), ರಾಮಚಂದ್ರ (50) ಬಂಧಿತ ಆರೋಪಿಗಳು
ಏನಿದು ಘಟನೆ?
ಭಾನುವಾರ ಸಂಜೆ ಠಾಣೆ ಬಂದ ಹರೀಶ್ ನೀಡಿದ ದೂರಿನ ಅರ್ಜಿಯಂತೆ, ಕೃಷ್ಣಮೂರ್ತಿ ಮತ್ತು ರಾಮಚಂದ್ರ ಎಂಬುವರನ್ನು ವಿಚಾರಣೆ ನಡೆಸುತ್ತಿದ್ದ ವೇಳೆ, ಪಿಎಸ್ಐ ನಾಗರಾಜ್, ಹೆಚ್ ಸಿ ವೆಂಕಟೇಶ್ ಮತ್ತು ದೇವರಾಜ ನಾಯ್ಕ ಎಂಬುವವರ ಮೇಲೆ ವಿಚಾರಣೆಗೆ ಬಂದಿದ್ದ ಕೃಷ್ಣಮೂರ್ತಿ ಮತ್ತು ರಾಮಚಂದ್ರ ಸಮವಸ್ತ್ರ ಹರಿದು, ಅವಾಚ್ಯವಾಗಿ ಬೈದು , ಹಲ್ಲೆ ಮಾಡಿ, ಜೀವ ಬೆದರಿಕೆಯನ್ನು ಹಾಕಿದ್ದಲ್ಲದೇ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಸೆಕ್ಷನ್ 504, 353, 332, 506 r/w, 34 IPC ನಂತೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಾದ ಕೃಷ್ಣಮೂರ್ತಿ ಮತ್ತು ರಾಮಚಂದ್ರ ಎಂಬುವರನ್ನು ಬಂಧಿಸಲಾಗಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್