ಬೀದಿ ನಾಯಿಗಳ ದಾಳಿಯಿಂದ ನಾಲ್ಕು ವರ್ಷದ ಬಾಲಕನೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ದಡಮಘಟ್ಟ ಗ್ರಾಮದಲ್ಲಿ ನಡೆದಿದೆ.
ಸೈಯದ್ ಮದನಿ(4) ನಾಯಿಗಳ ದಾಳಿಗೆ ಬಲಿಯಾದ ಬಾಲಕ.
ಬಾಲಕ ಸೈಯದ್ ಮದನಿಯು ಸಂಜೆ ನಾಲ್ಕು ಗಂಟೆಗೆ ಮನೆಯಿಂದ ಹೊರಗೆ ಆಟವಾಡಲು ಬಂದಾಗ ಏಕಾಏಕಿ ಹತ್ತಾರು ನಾಯಿಗಳು ಒಂದೇ ಸಮನೆ ದಾಳಿ ನಡೆಸಿವೆ. ದಾಳಿಗೆ ಬೆದರಿದ ಮದನಿ ನೆಲಕ್ಕೆ ಬಿದ್ದಿದ್ದಾನೆ. ಈ ವೇಳೆ ಎಲ್ಲ ನಾಯಿಗಳು ಆತನನ್ನು ಕಚ್ಚಿ ಹಾಕಿದೆ. ಅಲ್ಲದೇ, ರಸ್ತೆ ತುಂಬೆಲ್ಲಾ ಎಳೆದಾಡಿವೆ
ಬಾಲಕ ಸೈಯದ್ ಮದನಿ ನಾಯಿಗಳ ದಾಳಿಗೆ ಸಿಲುಕಿ ಕೂಗಿಕೊಂಡರೂ ಸಹ ಮನೆಯವರಿಗೆ ಗೂತ್ತಿಲ್ಲ. ನಾಯಿಗಳು ಏಕಾಏಕಿ ಬೊಗಳುತ್ತಾ ಸಾಗಿವೆ. ಕೊನೆಗೆ ಮನೆಯವರು ಹೊರಗೆ ಬಂದು ನೋಡಿದಾಗ ನಾಯಿಗಳು ಬಾಲಕನನ್ನು ಕಚ್ಚುತ್ತಿರುವುದು ಕಂಡು ಕೋಲು ತೆಗೆದುಕೊಂಡು ಓಡಿಸಿದ್ದಾರೆ. ಅಷ್ಟರಲ್ಲಿ ಕ್ರೂರ ನಾಯಿಗಳು ಬಾಲಕನ ಒಡೆದ ತಲೆಯನ್ನು ಸೀಳಿ ಮೆದುಳನ್ನು ತಿಂದು ಹಾಕಿವೆ.
ತಕ್ಷಣ ಬಾಲಕನ್ನು ಭದ್ರಾವತಿಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಲ್ಲಿನ ವೈದ್ಯರ ಶಿಫಾರಸ್ಸಿನ ಮೇರೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದು ಕೊಂಡು ಬರುವಾಗ ಬಾಲಕ ಸೈಯದ್ ಮದನಿ ದಾರಿಯಲ್ಲಿಯೇ ಸಾವನ್ನಪ್ಪಿದ್ದಾನೆ. ಈ ಕುರಿತು ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್