Headlines

ಬೇಡಿಕೆ ಈಡೇರಿಸದ ಜಿಲ್ಲಾಡಳಿತದ ವಿರುದ್ದ ಆಕ್ರೋಶಗೊಂಡು ತನ್ನ ಬೈಕ್ ಗೆ ಬೆಂಕಿ ಹಚ್ಚಿದ ಯುವಕ – ಜಿಲ್ಲಾಧಿಕಾರಿ ಕಛೇರಿ ಆವರಣದಲ್ಲಿ ಕೆಲಕಾಲ ಆತಂಕದ ವಾತವರಣ|Shivamogga

ಶಿವಮೊಗ್ಗ : ಬೇಡಿಕೆ ಈಡೇರಿಸದ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಯುವಕನೊಬ್ಬ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ತನ್ನ ಬೈಕ್ ಗೆ ಬೆಂಕಿ ಹಚ್ಚಿ ತನ್ನ ಆಕ್ರೋಶವನ್ನು ಹೊರಹಾಕಿದ್ದಾನೆ.

 ಈ ಘಟನೆಯಿಂದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.




 ಬೈಕ್ ಗೆ ಬೆಂಕಿ ಹಚ್ಚಿದ್ದ ಗಾಡಿಕೊಪ್ಪ ಸಮೀಪದ ಡಾ.ಅಂಬೇಡ್ಕರ್ ನಗರದ ರಾಜು (29) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಧ್ಯಾಹ್ನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರಾಜು, ತನ್ನ ಬೈಕಿಗೆ ಬೆಂಕಿ ಹಚ್ಚಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾನೆ. ಕೆಲವೇ ಕ್ಷಣದಲ್ಲಿ ಬೈಕು ಹೊತ್ತಿ ಉರಿದಿದೆ. ಇದನ್ನು ಗಮನಿಸಿದ ಅಧಿಕಾರಿಗಳು, ಜಿಲ್ಲಾಧಿಕಾರಿ ಕಚೇರಿ, ತಾಲೂಕು ಕಚೇರಿಗೆ ಬಂದಿದ್ದ ಸಾರ್ವಜನಿಕರು ಆತಂಕಕ್ಕೀಡಾದರು.
ಕೂಡಲೆ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.




ರಾಜು ಎಂಬುವವನು  ಡಾ. ಅಂಬೇಡ್ಕರ್ ಕಾಲೋನಿಯ ನಿವಾಸಿ, ತುಂಗಾ ಏತ ನೀರಾವರಿ ಯೋಜನೆ ಜಾಗ ಒತ್ತುವರಿ ಮಾಡಿ ಮನೆ ಕಟ್ಟಿಕೊಂಡಿದ್ದನು. ನ್ಯಾಯಾಲಯದ ಆದೇಶದ ಮೇರೆಗೆ ಅದನ್ನು ತೆರವುಗೊಳಿಸಲಾಗಿತ್ತು.ಈ ಬಗ್ಗೆ ಅನೇಕ ಪ್ರತಿಭಟನೆಗಳು ನಡೆದಿತ್ತು


ಇಲ್ಲಿಯವರೆಗೂ ನಮ್ಮ ಕಾಲೋನಿಯ ನಿವಾಸಿಗಳಿಗೆ ನ್ಯಾಯಾ ಸಿಕ್ಕಿಲ್ಲ ಎಂದು ರಾಜು ಆಕ್ರೋಶಗೊಂಡಿದ್ದ. ಪ್ಲಾಸ್ಟಿಕ್ ಹೂವುಗಳನ್ನು ಮಾರಾಟ ಮಾಡುವ ಉದ್ಯೋಗ ಮಾಡುತ್ತಿದ್ದ ರಾಜು, ತಮಗೆ ಯಾರೂ ನ್ಯಾಯ ಒದಗಿಸುತ್ತಿಲ್ಲ ಎಂದು ಬೇಸರಗೊಂಡು ಈ ಕೃತ್ಯ ಎಸಗಿದ್ದಾನೆ.




ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave a Reply

Your email address will not be published. Required fields are marked *