ಮಂಗಳೂರಿನ ಆಟೋ ಸ್ಪೋಟ ಪ್ರಕರಣ – ತೀರ್ಥಹಳ್ಳಿಯ ಶಾರೀಕ್ ಲಿಂಕ್ !!!..??|Manglore


ಮಂಗಳೂರಿನ ಹೊರವಲಯದಲ್ಲಿ ನಡೆದ ಆಟೋ ಸ್ಪೋಟದ ಹಿಂದೆ  ಭಯೋತ್ಪಾದಕರ ಕೈವಾಡವಿದೆ ಎಂದು ಡಿಜಿಪಿ ಪ್ರವೀಣ್ ಸೂದ್ ಟ್ವೀಟ್ ಮಾಡಿದ ಬೆನ್ನಲ್ಲೇ ಈ ಪ್ರಕರಣದಲ್ಲಿ ಶಿವಮೊಗ್ಗದ ವ್ಯಕ್ತಿಯ ಲಿಂಕ್ ಸಹ ಕೇಳಿ ಬರುತ್ತಿದೆ.

ಈ ರೀತಿಯ ಸುದ್ದಿಯ ಜಾಡನ್ನ ಬೆನ್ನು ಹತ್ತಿರುವ ಮಾಧ್ಯಮಗಳಿಗೆ ಹೆಸರು ಕೇಳಿ ಬರುತ್ತಿರುವ ಹೆಸರೆಂದರೆ ಶಾರೀಕ್ ಹೆಸರು. ಯಾರೂ ಈ ಶಾರೀಕ್ ಎಂದು ಕೇಳ್ತಾ ಹೋದರೆ ಸೆಪ್ಪಂಬರ್ ತಿಂಗಳಲ್ಲಿ ಶಿವಮೊಗ್ಗದಲ್ಲಿ ಪತ್ತೆಯಾದ ಮೂವರು ಶಂಕಿತರ ಹೆಸರಿನಲ್ಲಿ ಕೇಳಿ ಬಂದ ಪ್ರಮುಖ ಆರೋಪಿ ಈ ಶಾರೀಕ್.

ತೀರ್ಥಹಳ್ಳಿಯ ನಿವಾಸಿ ಶಾರೀಕ್ ಮತೀನ್ ಜೊತೆ ಸಂಪರ್ಕ ಹೊಂದಿ ಮಂಗಳೂರಿನೊಂದಿಗೆ ಲಿಂಕ್ ಇಟ್ಟುಕೊಂಡಿದ್ದನು. ಶಿವಮೊಗ್ಗದಲ್ಲಿ ಮಾಜ್ ಮತ್ತು ಯಾಸೀನ್  ಈ ಇಬ್ಬರ ಸಂಗಡದೊಂದಿದೆ ಬೆರತು ಬಾಂಬ್ ನ್ನು  ನದಿಯಲ್ಲಿ ಬ್ಲಾಸ್ಟ್ ಮಾಡುವ ಪ್ರಯೋಗ ಮಾಡಿದ್ದನು.

ಈ ಪ್ರಕರಣ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಮಾಜ್ ಸಹ ತೀರ್ಥಹಳ್ಳಿಯವನಾಗಿದ್ದು ಆತ ಮಂಗಳೂರಿನ ಬಿಇ ವಿದ್ಯಾರ್ಥಿಯಾಗಿದ್ದನು ಮತ್ತು ಯಾಸೀನ್ ಶಿವಮೊಗ್ಗದ ಸಿದ್ದೇಶ್ವರ ನಗರದ ನಿವಾಸಿಯಾಗಿದ್ದಾನೆ. ಈ ಪ್ರಕರಣದಲ್ಲಿ  ಶಾರೀಕ್ ತಲೆ ಮರೆಸಿಕೊಂಡಿದ್ದನು. ಶಾರೀಕ್ ಪತ್ತೆಯಲ್ಲಿ ಪೊಲೀಸರು ಯಶಸ್ವಿಯಾಗಿರಲಿಲ್ಲ. ಈಗ ಮಂಗಳೂರಿನ ಆಟೋ ಬ್ಲಾಸ್ಟ್ ನಲ್ಲಿ ಶಾರೀಕ್ ಹೆಸರು ಕೇಳಿ ಬರುತ್ತಿದೆ.

ಆಟೋ ನಿಗೂಢ ಸ್ಪೋಟ ಪ್ರಕರಣ ದಿನಕ್ಕೊಂದು ಚುರುಕುಗೊಳಿಸುತ್ತಿದೆ. ಸ್ಪೋಟದ ಸ್ಥಳದಲ್ಲಿ ಕಂಕನಾಡಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಈಗಾಗಲೇ ಕೇಂದ್ರ ತನಿಖಾ ಸಂಸ್ಥೆಗಳಾದ RAW ಮತ್ತು IB ಈಗಾಗಲೇ ಮಾಹಿತಿಯನ್ನು ಕಲೆ ಹಾಕಿದೆ. ಇನ್ನೊಂದೆಡೆಯಲ್ಲಿ ಎನ್ಐಎ ಅಧಿಕಾರಿಗಳ ತಂಡ ಈಗಾಗಲೇ ಮಂಗಳೂರಿಗೆ ಆಗಮಿಸಿದ್ದು, ತನಿಖೆಯನ್ನು ಆರಂಭಿಸಿದೆ.




ಮಂಗಳೂರು ಹೊರವಲಯದ ನಾಗುರಿಯಲ್ಲಿ ನಡೆದಿದ್ದ ಆಟೋ ಸ್ಪೋಟ ಪ್ರಕರಣದಲ್ಲಿ  ಈಗಾಗಲೇ ಕುಕ್ಕರ್, ಬ್ಯಾಟರಿ, ಟೈಮರ್ ಪತ್ತೆಯಾಗಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಮಂಗಳೂರು ನಗರದಲ್ಲಿ ಬಾಂಬ್ ತಯಾರಿ ನಡೆಯುತ್ತಿದ್ಯಾ ಅನ್ನೋ ಅನುಮಾನ ವ್ಯಕ್ತವಾಗಿದ್ದು, ಬಾಂಬ್ ತಯಾರಿಸಿ ಬೇರೆಡೆಗೆ ಸ್ಥಳಾಂತರಿಸುವ ಕೃತ್ಯವನ್ನು ನಡೆಸಲಾಗುತ್ತಿತ್ತಾ ಅನ್ನೋ ಬಗ್ಗೆಯೂ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

4 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

6 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

23 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

23 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

1 day ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago