ಮಣಿಪಾಲ ಆರೋಗ್ಯಕಾರ್ಡ್ 2022 ರ ನೋಂದಾವಣೆಯನ್ನು 30ನೇ ನವೆಂಬರ್ 2022 ರವರೆಗೆ ವಿಸ್ತರಣೆ | ಕಾರ್ಡ್ ಚಿಕ್ಕದು – ಸೌಲಭ್ಯ ದೊಡ್ಡದು -ಡಾ. ಅವಿನಾಶ್ ಶೆಟ್ಟಿ|Manipal card

ರಿಪ್ಪನ್‌ಪೇಟೆ : ಸಾರ್ವಜನಿಕ ಬೇಡಿಕೆಯ ಮೇರೆಗೆ ಮಣಿಪಾಲ ಆರೋಗ್ಯಕಾರ್ಡ್ 2022 ರ ನೋಂದಾವಣೆಯನ್ನು 30ನೇ ನವೆಂಬರ್ 2022 ರವರೆಗೆ ವಿಸ್ತರಿಸಲಾಗಿದೆ ಎಂದು ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ್ ಶೆಟ್ಟಿ ಹೇಳಿದರು.


ಪಟ್ಟಣದ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಣಿಪಾಲ ಆರೋಗ್ಯಕಾರ್ಡ್ (MAC) ಅನ್ನು ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಚಿಕಿತ್ಸೆಯನ್ನು ಕೈಗೆಟುಕುವಂತೆ ಮಾಡುವ ಉದ್ದೇಶದಿಂದ ಆರಂಭಿಸಲಾಯಿತು. ಮಣಿಪಾಲ್ ಕಾರ್ಡ್ “ಸಂಪೂರ್ಣ ಕುಟುಂಬಕ್ಕಾಗಿ ಶ್ರೇಷ್ಠ ಮೌಲ್ಯ ಮತ್ತು ವಿಶ್ವಾಸಾರ್ಹ ಸೇವೆ” ಎಂಬುದು ಈ ವರ್ಷದ ದ್ಯೇಯ ವಾಕ್ಯ. ಇದು ಆಸ್ಪತ್ರೆಯ ಎಲ್ಲಾ ಆರೋಗ್ಯ ಸೇವೆಗಳ ಮೇಲೆ ರಿಯಾಯಿತಿಯನ್ನು ನೀಡುತ್ತದೆ. ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ, ಯಾರಾದರೂ ಸದಸ್ಯರಾಗಬಹುದು ಮತ್ತು ಪ್ರಯೋಜನಗಳನ್ನು ಪಡೆಯಬಹುದು. ಕಾರ್ಡ್ ಖರೀದಿಸಲು ಹೂಡಿಕೆ ಮಾಡಿದ ಹಣವನ್ನು ಕಾರ್ಡ್‌ನ ಎರಡು ಅಥವಾ ಮೂರು ಬಳಕೆಗಳಲ್ಲಿ ರಿಯಾಯಿತಿಗಳ ರೂಪದಲ್ಲಿ ಹಿಂಪಡೆಯಬಹುದು. ಮಣಿಪಾಲ ಆರೋಗ್ಯಕಾರ್ಡಿನ 22 ನೇ ವರ್ಷವು ಒಂದು ವರ್ಷ ಮತ್ತು ಎರಡು ವರ್ಷದ ಯೋಜನೆಯನ್ನು ಒಳಗೊಂಡಿದೆ.





1 ವರ್ಷದ ಯೋಜನೆಯಲ್ಲಿ ಕಾರ್ಡಿನ ಸದಸ್ಯತ್ವವು ಒಬ್ಬರಿಗೆ ₹ 300 / -, ಕೌಟಂಬಿಕ ಕಾರ್ಡ್ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳಿಗೆ   ₹ 600/- ಮತ್ತು ಕುಟುಂಬ ಪ್ಲಸ್ ಯೋಜನೆಗೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳು ಮತ್ತು 4 ಪೋಷಕರು (ತಂದೆ, ತಾಯಿ, ಅತ್ತೆ ಮತ್ತು ಮಾವ) ₹ 750/-. ಇದೊಂದು ಹೆಚ್ಚುವರಿ ಲಾಭವಾಗಿದೆ. 2 ವರ್ಷದ ಯೋಜನೆಯಲ್ಲಿ ಒಬ್ಬರಿಗೆ ₹ 500/-, ಕುಟುಂಬಕ್ಕೆ ₹ 800/- ಮತ್ತು ಕೌಟಂಬಿಕ ಪ್ಲಸ್ ಯೋಜನೆಗೆ ₹ 950/- ಆಗಿರುತ್ತದೆ.

ಮಣಿಪಾಲ ಆರೋಗ್ಯ ಕಾರ್ಡ್ ಹೊಂದಿರುವವರು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ರಿಯಾಯಿತಿ ಸೌಲಭ್ಯ ಪಡೆಯಬಹುದು,

ಹೊರ ರೋಗಿ ವಿಭಾಗದಲ್ಲಿ,ಒಳ  ರೋಗಿ ವಿಭಾಗದಲ್ಲಿ ತಜ್ಞ ಅಥವಾ ಸೂಪರ್ ಸ್ಪೆಷಲಿಸ್ಟ್ ವೈದ್ಯರ ಸಮಾಲೋಚನೆ ಯಲ್ಲಿ ಶೇಕಡಾ 50 ರಿಯಾಯಿತಿವ್ಪ್ರಯೋಗಾಲಯ ಪರೀಕ್ಷೆ ಯಲ್ಲಿ ಶೇಕಡಾ 30 ರಿಯಾಯಿತಿ
ಸಿ ಟಿ, ಎಂ ಆರ್ ಐ, ಅಲ್ಟ್ರಾಸೌಂಡ್ ಗಳಲ್ಲಿ ಶೇಕಡಾ 20 ರಿಯಾಯಿತಿ
ಹೊರರೋಗಿ ವಿಧಾನಗಳಲ್ಲಿ ಮತ್ತು ಮಧುಮೇಹ ಪಾದ ತಪಾಸಣೆಯಲ್ಲಿ ಶೇಕಡಾ 20 ರಿಯಾಯಿತಿ ಔಷಧಾಲಯಗಳಲ್ಲಿ ಶೇಕಡಾ 12ರವರೆಗೆ ರಿಯಾಯಿತಿ ಸಾಮಾನ್ಯ ವಾರ್ಡಿನಲ್ಲಿ ಒಳರೋಗಿಯಾದಲ್ಲಿ ಉಪಯೋಗವಾಗುವ ವಸ್ತುಗಳನ್ನು ಹೊರತುಪಡಿಸಿ ಶೇಕಡಾ 25 ರಿಯಾಯಿತಿಕೋವಿಡ್ ರೋಗಿಗಳಿಗೆ ಜನರಲ್ ವಾರ್ಡ್ ನಲ್ಲಿ ರೋಗಿಗಳಿಗೆ ಸರ್ಕಾರ ಅನುಮೋದಿತ ಪ್ಯಾಕೇಜ್ ಮೇಲೆ ಶೇಕಡಾ 10 ರಿಯಾಯಿತಿ.ಕಾರ್ಡ್ ಹೊಂದಿರುವವರು ಕರಾವಳಿ ಕರ್ನಾಟಕ ಮತ್ತು ಗೋವಾದ ಮಣಿಪಾಲ್ ಗ್ರೂಪ್ ಆಸ್ಪತ್ರೆಗಳಿಗೆ ಈ ಯೋಜನೆ ಅನ್ವಯಿಸುತ್ತದೆ.




ಇದರಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ಡಾ.ಟಿ.ಎಂ.ಎ ಪೈ ಆಸ್ಪತ್ರೆ ಉಡುಪಿ ಮತ್ತು ಡಾ.ಟಿ.ಎಂ.ಎ ಪೈ ರೋಟರಿ ಆಸ್ಪತ್ರೆ ಕಾರ್ಕಳ, ಕೆಎಂಸಿ ಆಸ್ಪತ್ರೆ ಅತ್ತಾವರ ಮತ್ತು ಅಂಬೇಡ್ಕರ್ ಸರ್ಕಲ್ ಮಂಗಳೂರು ಮತ್ತು ದುರ್ಗಾ ಸಂಜೀವನಿ ಮಣಿಪಾಲ ಆಸ್ಪತ್ರೆ ಕಟೀಲ್ ಮತ್ತು ಮಣಿಪಾಲ್ ಆಸ್ಪತ್ರೆ ಗೋವಾ, ಮಣಿಪಾಲ ಮತ್ತು ಮಂಗಳೂರಿನಲ್ಲಿರುವ ದಂತ ಚಿಕಿತ್ಸಾ ಆಸ್ಪತ್ರೆಗಳಲ್ಲಿ ರಿಯಾಯಿತಿ ಪ್ರಯೋಜನಗಳನ್ನು ಪಡೆಯಬಹುದು. ಮಣಿಪಾಲ ಆರೋಗ್ಯ ಕಾರ್ಡ್ ನ್ನು ಒಂದು ಅಥವಾ ಎರಡು ವರ್ಷದ ಅವಧಿಗೆ ಎಷ್ಟು ಬಾರಿಯಾದರೂ ಉಪಯೋಗಿಸಬಹುದು. ಕಾರ್ಡ್ ನೋಂದಾಯಿಸಿದ ಮೊಬೈಲ್ ಸಂಖ್ಯೆಯಿಂದ 8867579797 ಗೆ ಮಿಸ್ ಕಾಲ್ ನೀಡುವುದರ ಮೂಲಕ ನೋಂದಣಿ ಮಾಡಿದ ಆರೋಗ್ಯ ಕಾರ್ಡ್ ನ ಮಾಹಿತಿ ಪಡೆಯಬಹುದು ಎಂದು ತಿಳಿಸಿದರು.




ಪತ್ರಿಕಾಗೋಷ್ಟಿಯಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಮುಖ್ಯ ವ್ಯವಸ್ಥಾಪಕರಾದ ಕೆ. ಸಚಿನ್ ಕಾರಂತ್,  ಸಹಾಯಕ ವ್ಯವಸ್ಥಾಪಕರಾದ ಕೃಷ್ಣಪ್ರಸಾದ ಬಿ ಎಸ್, ಮಾರುಕಟ್ಟೆ ವಿಭಾಗದ ಪ್ರತಿನಿಧಿಯಾದ ಚೇತನ್ ಹಾಗೂ ಶ್ರೀ ಅನಿಲ್ ನಾಯ್ಕ. ತಾಲೂಕು ಕಾರ್ಯ ನಿರತ ಪತ್ರಕರ್ತ ಸಂಘದ ಕೆ ಎಂ ಬಸವರಾಜ್. ಸಬಾಸ್ಟಿನ್. ಪರಶುರಾಮ್. ಚಿದಾನಂದ ಸ್ವಾಮಿ,ರಫಿ ರಿಪ್ಪನ್‌ಪೇಟೆ,ಪಿಯೂಸ್ ರೋಡ್ರಿಗಸ್,ದೇವರಾಜ್ ಉಪಸ್ಥಿತರಿದ್ದರು.


2022ರ ನೋಂದಾವಣಿಗಾಗಿ ಅರ್ಜಿಗಳು ಕೆಳಕಂಡ ಅಧಿಕೃತ ಪ್ರತಿನಿಧಿಗಳ ಬಳಿ ಲಭ್ಯವಿದೆ:

ರಿಪ್ಪನ್‌ಪೇಟೆ: ಪಿಯೂಸ್ ರೋಡ್ರಿಗಸ್: 9448914656, ರಕ್ಷಿತ್: 8971289756, ಸೈಂಟ್ ಮಿಲಾಗ್ರೆಸ್ ಸೌಹಾರ್ಧ: 8762449853
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

5 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

7 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

24 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

1 day ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

1 day ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago