ರಿಪ್ಪನ್ಪೇಟೆ;- ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗವಟೂರು ಗ್ರಾಮದ ಸರ್ವೇ ನಂಬರ್ ೧೬೯ ರ ಜಾಗದಲ್ಲಿ ಮನೆ ಕಟ್ಟಿಕೊಂಡು ವಾಸವಾಗಿದ್ದ ಗಂಗಮ್ಮ ಕೋಂ ಎಸ್.ಚಂದ್ರಪ್ಪ ಎಂಬುವರ ಮೇಲೆ ಸದರಿ ಗ್ರಾಮದ ನಿವಾಸಿಗಳು ಜಾಗದ ವಿಚಾರದಲ್ಲಿ ಗಲಾಟೆ ಮಾಡಿ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ಎಸಗಿ ವಾಸಿಸುತ್ತಿದ್ದ ಮನೆಗೆ ಬೆಂಕಿ ಹಚ್ಚಿ ಸಂಪೂರ್ಣ ನಾಶಗೊಳಿಸಿರುವ ಘಟನೆ ರಿಪ್ಪನ್ಪೇಟೆ ಠಾಣೆಯಲ್ಲಿ ದೂರು ದಾಖಲಾಗಿದೆ.
ಈ ಜಾಗದ ವಿಚಾರದಲ್ಲಿ ಕೇಸ್ ನ್ಯಾಯಾಲಯದಲ್ಲಿದ್ದು ನ್ಯಾಯಾಲಯದ ತೀರ್ಪು ಬರುವ ಮುನ್ನವೇ ಏಕಾಏಕಿ ನುಗ್ಗಿ ಗಂಗಮ್ಮನ ಮೇಲೆ ಐದಾರು ಜನರ ಗುಂಪು ಮಾರಣಾಂತಿಕ ಹಲ್ಲೆ ಮಾಡುವುದರೊಂದಿಗೆ ಗಂಗಮ್ಮ ಕೋಂ ಚಂದ್ರಪ್ಪ ಅಡಿಕೆ ತೆಂಗು ಬಾಳೆ ಇನ್ನಿತರ ಬೆಳೆಗಳನ್ನು ನಾಶಗೊಳಿಸಿ ವಾಸದ ಮನೆಗೆ ಬೆಂಕಿ ಹಾಕಿ ಸಂಪೂರ್ಣ ನಾಶಗೊಳಿಸಿದ್ದಾರೆಂದು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಅರೋಪಿಗಳಾದ ಮಂಜಮ್ಮ, ಉಮೇಶ,,ಗಣೇಶ ಇನ್ನಿತರರು ಈ ರೀತಿಯ ಅಮಾನುಷ್ಯವಾಗಿ ಕೃತ್ಯ ಎಸಗಿದ್ದಾರೆಂದು ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಂಗಮ್ಮ ದೂರು ನೀಡಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್