ಯಜಮಾನನ ಜೀವ ಉಳಿಸಿದ ಸಾಕು ನಾಯಿ – ಗ್ರಾಮಸ್ಥರಿಂದ ಶ್ವಾನದ ಮೆರವಣಿಗೆ|Sooduru

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಸೂಡೂರು ಗ್ರಾಮದಲ್ಲಿ ಕಾಡಿಗೆ ಕಟ್ಟಿಗೆ ತರಲು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯನ್ನು ತಾನೇ ಸಾಕಿದ ನಾಯಿ ಪತ್ತೆ ಹಚ್ಚಿದ ವಿನೂತನ ಘಟನೆ ನಡೆದಿದೆ. ಮಾಲೀಕನನ್ನು ಸಾವಿನ ದವಡೆಯಿಂದ ಪಾರು ಮಾಡಿದ ನಾಯಿಯ ಸ್ವಾಮಿ ನಿಷ್ಠೆಗೆ ಇಡೀ ಸೂಡೂರು ಗ್ರಾಮವೇ ಹರ್ಷ ವ್ಯಕ್ತಪಡಿಸಿ ನಾಯಿಯ ಮೆರವಣಿಗೆ ಮಾಡಿದೆ.




ನಿನ್ನೆ(ನ.12) ಬೆಳೆಗ್ಗೆ 6 ಗಂಟೆ ಸುಮಾರಿಗೆ ಮನೆಗೆ ಸೌದೆ ತರಲು ಎಂದು ಸೂಡೂರು ಗ್ರಾಮದ 50 ವರ್ಷ ವಯಸ್ಸಿನ ಶೇಖರಪ್ಪ ಮನೆಯ ಸಮೀಪದ ಕಾಡಿಗೆ ಹೋಗಿದ್ದಾರೆ. ಪ್ರತಿ ಸಾರಿ ಕಾಡಿಗೆ ಹೋದಾಗ ಬೆಳಗೆ 10 ಗಂಟೆಯ ಒಳಗೆ ಮನೆಗೆ ಹಿಂದಿರುಗಿ ಬರುತ್ತಿದ್ದರು. ಆದರೆ ನಿನ್ನೆ 11 ಗಂಟೆಯಾದರೂ ಮನೆಗೆ ಬಂದಿಲ್ಲ. ಹೀಗಾಗಿ ಕೆಲವು ಜನರು ಕಾಡಿಗೆ ಹೋಗಿ ಹುಡುಕಾಡಿದ್ದು ಕಾಡಿಗೆ ಹೋಗಿದ್ದವರಿಗೂ ಶೇಕರಪ್ಪನ ಸುಳಿವು ಸಿಕ್ಕಿಲ್ಲ. ಇದರಿಂದ ಗಾಬರಿಗೊಂಡು ಮಧ್ಯಾಹ್ನದ ವೇಳೆಗೆ ಶೇಖರಪ್ಪರನ್ನು ಹುಡುಕುವುದಕ್ಕೆ ಗ್ರಾಮದ 100 ಹೆಚ್ಚು ಜನರು ಕಾಡಿನೊಳಗೆ ಹೋಗಿದ್ದಾರೆ. ಪ್ರತಿ ಬಾರಿ ಅವರು ಕಾಡಿಗೆ ಹೋಗುವ ದಾರಿ ಕಟ್ಟಿಗೆ ಅರಸುವ ಸ್ಥಳ ಎಲ್ಲವನ್ನೂ ತಡಕಾಡಿದ್ದಾರೆ.


ಯಾವುದರಿಂದಲೂ ಶೇಖರಪ್ಪನ ಪ್ರತಿಕ್ರಿಯೆ ಸಿಗದಿದ್ದಾಗ ಗ್ರಾಮದ ಜನರ ತಲೆಯಲ್ಲಿ ನಾನಾ ಯೋಚನೆ ಅಲೆದಾಡಿದೆ. ಮತ್ತೊಂದೆಡೆ ಕಾಣೆಯಾದ ಶೇಖರಪ್ಪರನ್ನು ಹುಡುಕಲು ಗ್ರಾಮಸ್ಥರೊಂದಿಗೆ ಬಂದಿದ್ದ ಶೇಖರಪ್ಪ ಸಾಕಿದ ನಾಯಿ ಗ್ರಾಮದ ಜನರನ್ನು ಬಿಟ್ಟು ತನ್ನದೇ ದಾರಿ ಹಿಡಿದು ಮುನ್ನುಗ್ಗಿದೆ. ಕೊನೆಗೆ ಸಂಜೆ 4 ಗಂಟೆಯ ಸುಮಾರಿಗೆ ಕಾಣೆಯಾಗಿದ್ದ ಶೇಖರಪ್ಪರನ್ನು ಪತ್ತೆ ಹಚ್ಚಿ ಗ್ರಾಮಸ್ಥರನ್ನು ಕರೆ ತಂದಿದೆ.




ಗ್ರಾಮಸ್ಥರು ಬಂದು ನೋಡಿದಾಗ ಒಂದು ಮರದ ಕೆಳಗೆ ಪ್ರಜ್ಞೆ ಇಲ್ಲದೆ ಶೇಖರಪ್ಪ ಬಿದ್ದಿರುವುದು ಕಂಡು ಬಂದಿದೆ. ತಕ್ಷಣವೇ ಗ್ರಾಮಸ್ಥರು ಆ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಹೀಗೆ ತನಗೆ ಸಾಕಿ ಸಲುಹಿದ ಯಜಮಾನನ ಜೀವ ಉಳಿಸುವಲ್ಲಿ ಶ್ವಾನ ಗ್ರಾಮಸ್ಥರಿಗೆ ಸಹಾಯ ಮಾಡಿದೆ. ತಾನೇ ಸಾಕಿದ ಶ್ವಾನ ತನ್ನ ಯಜಮಾನನ ಜೀವ ಉಳಿಸುವ ಮೂಲಕ ಸ್ವಾಮಿ ನಿಷ್ಟೆ ಮೆರೆದಿದೆ.




ನೀರು ಮತ್ತು ಆಹಾರ ಇಲ್ಲದೇ ಕಾಡಿನಲ್ಲಿ ಪ್ರಜ್ಞೆ ತಪ್ಪಿದ್ದರಿಂದ ಮರದ ಕೆಳಗೆ ಬಿದ್ದಿರಬಹುದು, ಅದೇ ಜಾಗದಲ್ಲಿ ಜನರು ಹುಡುಕಿದ್ದಾರೆ. ಜನರು ಕಣ್ಣಿಗೆ ಕಾಣದ ಶೇಖರಪ್ಪ ನಾಯಿಗೆ ಕಂಡಿದ್ದಾರೆ. ಆಯನೂರಿನಲ್ಲಿರುವ ಒಂದು ಖಾಸಗಿ ಹೋಟೆಲಲ್ಲಿ ಕೆಲಸಕ್ಕೆಂದು ಹೋಗುತ್ತಿದ್ದರು. ಅಂದು ರಜೆ ಹಾಕಿ ಸೌದೆ ತರಲು ಕಾಡಿಗೆ ಹೋಗಿದ್ದರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

5 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

21 hours ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

21 hours ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

21 hours ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

1 day ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

1 day ago