ರಿಪ್ಪನ್‌ಪೇಟೆ : ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರಾದ ಶ್ರೇಯಾ ಬಿ ಆರ್ ನಾಯಕ್ ಮತ್ತು ಶ್ರಾವ್ಯ ಹೆಚ್ ಓ ರವರು ಕಬ್ಬಡಿ ಪಂದ್ಯಾವಳಿಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ನ 22 ರ ಮಂಗಳವಾರ ರಾಮನಗರ ಜಿಲ್ಲೆಯ ಮಾಗಡಿಯಲ್ಲಿ ನಡೆದ ರಾಜ್ಯಮಟ್ಟದ 14 ವರ್ಷ ವಯೋಮಿತಿಯೊಳಗಿನ ಬಾಲಕಿಯರ ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಮುಂದಿನ ತಿಂಗಳು ಪಂಜಾಬ್ ನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕಬ್ಬಡಿ ಪಂದ್ಯಾವಳಿಗೆ ಶ್ರೀ ಶಾರದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರಾದ ಶ್ರೇಯಾ ಬಿ ಆರ್ ನಾಯಕ್ ಮತ್ತು ಶ್ರಾವ್ಯ ಹೆಚ್ ಓ ಆಯ್ಕೆಯಾಗುವ ಮೂಲಕ ಶಿವಮೊಗ್ಗ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಪಟ್ಟಣದ ಶಬರೀಶನಗರ ನಿವಾಸಿಗಳಾದ ರಾಘವೇಂದ್ರ ಬಿ ಎಸ್ ಮತ್ತು ಸವಿತಾ ದಂಪತಿಗಳ ಪುತ್ರಿಯಾದ ಶ್ರೇಯಾ ಬಿ ಆರ್ ನಾಯಕ್ ಶಾರದ ಶಾಲೆಯಲ್ಲಿ ಏಳನೇ ತರಗತಿ ವ್ಯಾಸಂಗ ಮಾಡುತಿದ್ದಾರೆ.
ಪಟ್ಟಣದ ಸಮೀಪದ ಮೈತೆ ಗ್ರಾಮದ ಓಂಕೇಶ ಮತ್ತು ಪವಿತ್ರಾ ದಂಪತಿಗಳ ಪುತ್ರಿಯಾದ ಶ್ರಾವ್ಯ ಹೆಚ್ ಓ ಶಾರದ ರಾಮಕೃಷ್ಣ ವಿದ್ಯಾಲಯದಲ್ಲಿ ಎಂಟನೇ ತರಗತಿ ವ್ಯಾಸಂಗ ಮಾಡುತಿದ್ದಾರೆ.
ಅಪ್ರತಿಮ ಸಾಧನೆಯ ಮೂಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುವ ಇವರಿಬ್ಬರಿಗೆ ಶ್ರೀ ರಾಮಕೃಷ್ಣ ಮಹಾವಿದ್ಯಾಲಯದ ಶಾಲಾ ಆಡಳಿತ ಮಂಡಳಿ ಹಾಗೂ ಮುಖ್ಯ ಶಿಕ್ಷಕರು ಸಹ ಶಿಕ್ಷಕರು ಹಾಗೂ ಪೋಷಕರು ದೈಹಿಕ ಶಿಕ್ಷಕರು ಅಭಿನಂದನೆ ಸಲ್ಲಿಸಿರುತ್ತಾರೆ.
ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿನಿಯರು
ಶ್ರೀ ರಾಮಕೃಷ್ಣ ಶಾರದ ವಿದ್ಯಾಲಯದ ಸಂಜನಾ,ಶ್ರೇಯಾ ಮತ್ತು ಐಶ್ವರ್ಯ,ಶ್ರಾವ್ಯ ರಾಮನಗರ ಜಿಲ್ಲೆಯ ಮಾಗಡಿಯಲ್ಲಿ ನಡೆದ ರಾಜ್ಯಮಟ್ಟದ 14 ವರ್ಷ ವಯೋಮಿತಿಯೊಳಗಿನ ಬಾಲಕಿಯರ ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ.ಆದರೆ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ತಂಡದಲ್ಲಿ ಶ್ರೇಯಾ ಮತ್ತು ಶ್ರಾವ್ಯ ಸ್ಥಾನ ಪಡೆದಿದ್ದಾರೆ.
ರಾಜ್ಯಮಟ್ಟದ ಕಬ್ಬಡಿ ಪಂದ್ಯಾವಳಿಯಲ್ಲಿ ಮೂರನೇ ಸ್ಥಾನ ಪಡೆದ ಬಾಲಕರು
ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ಬಾಲಕರು ರಾಜ್ಯ ಮಟ್ಟದ ಕಬ್ಬಡಿ ಪಂದ್ಯಾವಳಿಯಲ್ಲಿ ಮೂರನೇ ಸ್ಥಾನ ಗಳಿಸುವ ಮೂಲಕ ಅಧ್ಬುತ ಸಾಧನೆಗೈದಿದ್ದಾರೆ.
ಶ್ರೀ ರಾಮಕೃಷ್ಣ ಶಾರದ ವಿದ್ಯಾಲಯದ ರಾಯಿಲ್ , ಯಶವಂತ್ , ಹೃತಿಕ್ ರಾಮನಗರ ಜಿಲ್ಲೆಯ ಮಾಗಡಿಯಲ್ಲಿ ನಡೆದ ಬಾಲಕರ ಕಬ್ಬಡಿ ಪಂದ್ಯಾವಳಿಯಲ್ಲಿ ಮೂರನೇ ಸ್ಥಾನ ಪಡೆದಿದ್ದಾರೆ.
ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೂ,ಬಾಲಕರ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ ಹಾಗೂ ಮುಖ್ಯ ಶಿಕ್ಷಕರು ಸಹ ಶಿಕ್ಷಕರು ಹಾಗೂ ಪಬಾಲಕರು ದೈಹಿಕ ಶಿಕ್ಷಕರು ಅಭಿನಂದನೆ ಸಲ್ಲಿಸಿರುತ್ತಾರೆ.