ರಿಪ್ಪನ್‌ಪೇಟೆಯಲ್ಲಿ ಇಂದು ಆಳ್ವಾಸ್ ನುಡಿಸಿರಿ ಹಬ್ಬ – ಭರದ ಸಿದ್ದತೆ : 15 ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ|Ripponpet

ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಇಂದು ಆಳ್ವಾಸ್ ನುಡಿಸಿರಿ ಹಬ್ಬ ಆಯೋಜಿಸಲಾಗಿದೆ.ಈ ಕಾರ್ಯಕ್ರಮಕ್ಕೆ ಅಂದಾಜು 15 ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ.ಕಾರ್ಯಕ್ರಮದ ಸಿದ್ದತೆ ಭರದಿಂದ ಸಾಗಿದೆ.

ಇಂದು ಸಂಜೆ ಸರಿಯಾಗಿ 5 ಗಂಟೆಗೆ ಪಟ್ಟಣದ ಸಾಗರ ರಸ್ತೆಯ ಚಿನ್ನೆಗೌಡ ಕ್ರೀಡಾಂಗಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.


ಈ ಆಳ್ವಾಸ್ ಸಾಂಸ್ಕೃತಿಕ ಪ್ರದರ್ಶನದಲ್ಲಿ ಆಂಧ್ರದ ಜನಪದ, ಬಂಜಾರ ನೃತ್ಯ, ಮಣಿಪುರಿ ಸ್ಟಿಕ್‌ಡ್ಯಾನ್ಸ್, ಶಾಸ್ತ್ರೀಯ ನೃತ್ಯ, ನವದುರ್ಗೆ, ಮಲ್ಲಕಂಬ ಮತ್ತು ರೋಪ್ ಕಸರತ್ತು, ಗುಜರಾತಿನ ಗಾರ್ಭ ಮತ್ತು ದಾಂಡಿಯಾ, ಮಣಿಪುರಿ ಧೋಲ್ ಚಲಮ್, ಕಥಕ್ ನೃತ್ಯ, ನವರಂಗ್, ಪಶ್ಚಿಮ ಬಂಗಾಳದ ಪುರಿಲಿಯ ಸಿಂಹ ನೃತ್ಯ ಇನ್ನಿತರ ನೃತ್ಯ ಪ್ರದರ್ಶನಗಳು ಜರುಗಲಿವೆ.

ಈ ಸಾಂಸ್ಕೃತಿಕ ವೈಭವಕ್ಕೆ ಸಕಲ ಕಲಾ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೇಕಾಗಿ ಕಾರ್ಯಕ್ರಮದ ರೂವಾರಿ‌ಎನ್ ಸತೀಶ್ ಮನವಿ‌ ಮಾಡಿದ್ದಾರೆ.

Leave a Reply

Your email address will not be published. Required fields are marked *