ರಿಪ್ಪನ್ಪೇಟೆ : ಪಟ್ಟಣದಲ್ಲಿ ಇಂದು ಆಳ್ವಾಸ್ ನುಡಿಸಿರಿ ಹಬ್ಬ ಆಯೋಜಿಸಲಾಗಿದೆ.ಈ ಕಾರ್ಯಕ್ರಮಕ್ಕೆ ಅಂದಾಜು 15 ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ.ಕಾರ್ಯಕ್ರಮದ ಸಿದ್ದತೆ ಭರದಿಂದ ಸಾಗಿದೆ.
ಇಂದು ಸಂಜೆ ಸರಿಯಾಗಿ 5 ಗಂಟೆಗೆ ಪಟ್ಟಣದ ಸಾಗರ ರಸ್ತೆಯ ಚಿನ್ನೆಗೌಡ ಕ್ರೀಡಾಂಗಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಈ ಆಳ್ವಾಸ್ ಸಾಂಸ್ಕೃತಿಕ ಪ್ರದರ್ಶನದಲ್ಲಿ ಆಂಧ್ರದ ಜನಪದ, ಬಂಜಾರ ನೃತ್ಯ, ಮಣಿಪುರಿ ಸ್ಟಿಕ್ಡ್ಯಾನ್ಸ್, ಶಾಸ್ತ್ರೀಯ ನೃತ್ಯ, ನವದುರ್ಗೆ, ಮಲ್ಲಕಂಬ ಮತ್ತು ರೋಪ್ ಕಸರತ್ತು, ಗುಜರಾತಿನ ಗಾರ್ಭ ಮತ್ತು ದಾಂಡಿಯಾ, ಮಣಿಪುರಿ ಧೋಲ್ ಚಲಮ್, ಕಥಕ್ ನೃತ್ಯ, ನವರಂಗ್, ಪಶ್ಚಿಮ ಬಂಗಾಳದ ಪುರಿಲಿಯ ಸಿಂಹ ನೃತ್ಯ ಇನ್ನಿತರ ನೃತ್ಯ ಪ್ರದರ್ಶನಗಳು ಜರುಗಲಿವೆ.
ಈ ಸಾಂಸ್ಕೃತಿಕ ವೈಭವಕ್ಕೆ ಸಕಲ ಕಲಾ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೇಕಾಗಿ ಕಾರ್ಯಕ್ರಮದ ರೂವಾರಿಎನ್ ಸತೀಶ್ ಮನವಿ ಮಾಡಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್