ರಿಪ್ಪನ್‌ಪೇಟೆಯಲ್ಲಿ ಕೆಂಪೇಗೌಡ ಪವಿತ್ರ ಮೃತ್ತಿಕೆ ಸಂಗ್ರಹಣಾ ಅಭಿಯಾನ ರಥಕ್ಕೆ ಅದ್ದೂರಿ ಸ್ವಾಗತ|Ripponpet

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನವೆಂಬರ್ 11 ರಂದು ಪ್ರಧಾನಿ ನರೇಂದ್ರ ಮೋದಿ ಅವರು 108 ಅಡಿಯ ಕೆಂಪೇಗೌಡರ ಕಂಚಿನ ಪ್ರತಿಮೆಯನ್ನು ಅನಾವರಣ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಪ್ರಸಿದ್ಧ ದೇವಾಲಯಗಳು, ಪ್ರಸಿದ್ಧ ಸ್ಥಳಗಳಿಂದ ಪವಿತ್ರವಾದ ಮಣ್ಣನ್ನು ಸಂಗ್ರಹಿಸಲಾಗುತ್ತದೆ. ಅದನ್ನು ಕೆಂಪೇಗೌಡರ ಪುತ್ಥಳಿ ಕೆಳಗೆ ಇಡಲಾಗುವುದು. ಈ ಕಾರ್ಯಕ್ರಮವು ಸರ್ಕಾರದ ವತಿಯಿಂದ ನಡೆಯುತ್ತಿದ್ದು, ಪಕ್ಷಾತೀತವಾಗಿ, ಜಾತ್ಯತೀತವಾಗಿ ನಡೆಯುತ್ತಿದೆ.


ಮೃತ್ತಿಕೆ ಸಂಗ್ರಹ ಅಭಿಯಾನ ರಥವು ರಿಪ್ಪನ್‌ಪೇಟೆ ಪಟ್ಟಣಕ್ಕೆ ಆಗಮಿಸುತ್ತಿದ್ದಂತೆಯೇ ತಾಲ್ಲೂಕು ಒಕ್ಕಲಿಗ ಸಂಘದ ಅಧ್ಯಕ್ಷ ಎಂ.ಬಿ.ಲಕ್ಷ್ಮಣಗೌಡ ಮತ್ತು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್ ಹಾಗೂ ನಾಡಕಛೇರಿ ಉಪತಹಶೀಲ್ದಾರ್ ಹುಚ್ಚರಾಯಪ್ಪ ನೇತ್ರತ್ವದಲ್ಲಿ ಅದ್ದೂರಿಯಾಗಿ ಸ್ವಾಗತಿಸಿ ರಥವನ್ನು ಬರಮಾಡಿಕೊಂಡರು.


ಕೆಂಪೇಗೌಡರ ಪ್ರತಿಮೆಯ ರಥವು ಗ್ರಾಮ ಪ್ರವೇಶಿಸುತ್ತಿದ್ದಂತೆ ನೂರಾರು ಮಹಿಳೆಯರು ಪೂರ್ಣ ಕುಂಭ ಸ್ವಾಗತದೊಂದಿಗೆ ಸ್ವಾಗತಿಸಿ ಮಹಿಳೆಯರ ಡೊಳ್ಳು, ವೀರಗಾಸೆ, ತಮಟೆಯ ಮೆರವಣಿಗೆಯೊಂದಿಗೆ ಸಾಗರ ರಸ್ತೆಯಿಂದ ಸಿದ್ದಿವಿನಾಯಕ ದೇವಸ್ಥಾನಕ್ಕೆ ಕರೆತರಲಾಯಿತು.


ವಿನಾಯಕ ವೃತ್ತದಲ್ಲಿ ಸಹಕಾರಿ ಧುರೀಣ ಆರ್ ಎಂ ಮಂಜುನಾಥ್ ಗೌಡ ಕೆಂಪೇಗೌಡ ರಥಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಸ್ವಾಗತಿಸಿದರು.

ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್ ಹಾಗೂ ಉಪಾಧ್ಯಕ್ಷೆ ಮಹಾಲಕ್ಷ್ಮಿ, ಕೆಂಚನಾಲ ಗ್ರಾಮ ಪಂಚಾಯ್ತಿ ಅಧ್ಯಕ್ಷ ಉಬೇದುಲ್ಲಾ ಷರೀಫ್, ಅರಸಾಳು ಗ್ರಾಮ ಪಂಚಾಯ್ತಿ ಪ್ರಭಾರ ಅಧ್ಯಕ್ಷೆ ಹೂವಪ್ಪ (ಉಮಾಕರ) ಇನ್ನಿತರರು ಗ್ರಾಮ ಪಂಚಾಯ್ತಿಗಳಿಂದ ತರಲಾದ ಪವಿತ್ರ ಮೃತ್ತಿಕೆಯನ್ನು ವಿನಾಯಕ ದೇವಸ್ಥಾನದಲ್ಲಿ ರಥಕ್ಕೆ ಸಮರ್ಪಿಸಿದರು.

ನಂತರ ರಥವನ್ನು ಹುಂಚ ಮಾರ್ಗವಾಗಿ ಹೊಸನಗರಕ್ಕೆ ಬೀಳ್ಕೊಡಲಾಯಿತು.

ಈ ಸಂದರ್ಭದಲ್ಲಿ ಎಂ.ಬಿ.ಮಂಜುನಾಥ ,ಎಂ ಎಂ ಪರಮೇಶ್, ಕೆ.ದೇವರಾಜ್ ಕೆರೆಹಳ್ಳಿ, ಷಣ್ಮುಖಪ್ಪ, ಕೆರೆಹಳ್ಳಿ ರವೀಂದ್ರ,ಕಲ್ಲೂರು ತೇಜಮೂರ್ತಿ, ಮಂಜಣ್ಣ ಡ್ರೈವರ್ ಕೋಟೆತಾರಿಗ, ಪ್ರಕಾಶ್, ಬೆಳ್ಳೂರು ತಿಮ್ಮಪ್ಪ, ಮಹಿಳಾ ಒಕ್ಕಲಿಗ ಸಂಘದ ಪ್ರಮಿಳಾ ಎಲ್.ಗೌಡ, ವಾಣಿ ಗೋವಿಂದಪ್ಪಗೌಡ, ಮಹಿಳಾ ನಿರ್ದೇಶಕರು ಹಾಗೂ ಪಂಚಾಯ್ತಿ ಪಿಡಿಓ ಜಿ.ಚಂದ್ರಶೇಖರ್, ಎನ್.ವರ್ತೇಶ್,ಆಸೀಫ಼್ ಭಾಷಾಸಾಬ್, ನಿರೂಪ್ ಕುಮಾರ್, ಕಲ್ಲೂರು ಈರಪ್ಪ ಹಾಗೂ ವಿವಿಧ ಇಲಾಖೆಯ ಅಧಿಕಾರಿ ವರ್ಗದವರು ಹಾಜರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…

18 hours ago

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…

18 hours ago

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga…

18 hours ago

ಶಿವಮೊಗ್ಗ ಲೋಕಾಯುಕ್ತ ಎಸ್‌ಪಿಯಾಗಿ ಆಂಟನಿ ಜಾನ್ ನೇಮಕ

ಶಿವಮೊಗ್ಗ ಲೋಕಾಯುಕ್ತ ಎಸ್‌ಪಿಯಾಗಿ ಆಂಟನಿ ಜಾನ್ ನೇಮಕ Anthony John has been appointed as the new Lokayukta…

18 hours ago

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…

1 day ago

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…

2 days ago