ರಿಪ್ಪನ್‌ಪೇಟೆಯಲ್ಲಿ ನ.25,26 ರಂದು ಕಲಾಕೌಸ್ತುಭ ಕನ್ನಡ ಸಂಘದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ-ನ.27ಕ್ಕೆ ಆಳ್ವಾಸ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮಕ್ಕೆ ಭರದ ಸಿದ್ಧತೆ

ರಿಪ್ಪನ್‌ಪೇಟೆ : ಇಲ್ಲಿನ ಕಲಾಕೌಸ್ತುಭ ಕನ್ನಡ ಸಂಘದ 29ನೇ ವರ್ಷದ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ನವೆಂಬರ್ 25 ಮತ್ತು 26 ರಂದು ಭೂಫಾಳಂ ಸಭಾ ಭವನದಲ್ಲಿ ಹಾಗೂ ನವೆಂಬರ್ 27 ರಂದು ಸಂಜೆ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜ್ ಚಿನ್ನೇಗೌಡ ಕ್ರೀಡಾಂಗಣದಲ್ಲಿ “ಆಳ್ವಾಸ್‌ ಸಾಂಸ್ಕೃತಿಕ ವೈಭವ’’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕಲಾಕೌಸ್ತುಭ ಕನ್ನಡ ಸಂಘದ ಕಾರ್ಯದರ್ಶಿ ರವಿಚಂದ್ರ ಮತ್ತು ಆಳ್ವಾಸ್ ನುಡಿಸಿರಿ ವಿರಾಸತ್ ಸಂಚಾಲಕ ಎನ್.ಸತೀಶ್ ಜಂಟಿ ಪತ್ರೀಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ.

ನವೆಂಬರ್ 25 ರಂದು ಶುಕ್ರವಾರ ಬೆಳಗ್ಗೆ 9 ಗಂಟೆಗೆ ತಾಯಿ ಭುವನೇಶ್ವರಿ ಅಲಂಕೃತ ಭಾವಚಿತ್ರ ಮೆರವಣಿಗೆ ಶಾಲಾ ಮಕ್ಕಳಿಗಾಗಿ ಭುವನೇಶ್ವರಿ ಹಾಗೂ ವಿವಿಧ ವೇಷ ಭೂಷಣಗಳೊಂದಿಗೆ, ವಿವಿಧ ಜಾನಪದ ಕಲಾತಂಡಗಳ ಭವ್ಯ ಮೆರವಣಿಗೆ ಏರ್ಪಡಿಸಲಾಗಿದೆ.

ನವೆಂಬರ್ 27ರಂದು ನಡೆಯುವ ಆಳ್ವಾಸ್ ಸಾಂಸ್ಕೃತಿಕ ಪ್ರದರ್ಶನದಲ್ಲಿ ಆಂಧ್ರದ ಜನಪದ, ಬಂಜಾರ ನೃತ್ಯ, ಮಣಿಪುರಿ ಸ್ಟಿಕ್‌ಡ್ಯಾನ್ಸ್, ಶಾಸ್ತ್ರೀಯ ನೃತ್ಯ, ನವದುರ್ಗೆ, ಮಲ್ಲಕಂಬ ಮತ್ತು ರೋಪ್ ಕಸರತ್ತು, ಗುಜರಾತಿನ ಗಾರ್ಭ ಮತ್ತು ದಾಂಡಿಯಾ, ಮಣಿಪುರಿ ಧೋಲ್ ಚಲಮ್, ಕಥಕ್ ನೃತ್ಯ, ನವರಂಗ್, ಪಶ್ಚಿಮ ಬಂಗಾಳದ ಪುರಿಲಿಯ ಸಿಂಹ ನೃತ್ಯ ಇನ್ನಿತರ ನೃತ್ಯ ಪ್ರದರ್ಶನಗಳು ಜರುಗಲಿವೆ.

ಈ ಸಾಂಸ್ಕೃತಿಕ ವೈಭವ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಸಕಲ ಕಲಾ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರೋತ್ಸಾಹಿಸುವಂತೆ ಜಂಟಿ ಪತ್ರೀಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಗೋಷ್ಠಿಯಲ್ಲಿ ಸಮಿತಿಯವರಾದ ಗಣೇಶ್ ಕಾಮತ್, ಎಂ.ಬಿ.ಮಂಜುನಾಥ,ಆರ್ ಟಿ ಗೋಪಾಲ್, ಎಂ.ಸುರೇಶ್ ಸಿಂಗ್, ಪದ್ಮಾ ಸುರೇಶ್, ಉಮಾ ಸುರೇಶ್, ಸಿ.ಚಂದ್ರುಬಾಬು, ಸುಧೀರ್ ಪಿ,ಶೈಲ ಆರ್ ಪ್ರಭು, ಸೀತಾ, ಗೀತಾ ಹಾಗೂ ಇನ್ನಿತರ ಹಲವರು ಹಾಜರಿದ್ದರು.


ರಾಜ್ಯೋತ್ಸವ ಕಾರ್ಯಕ್ರಮದ ಸ್ಪರ್ಧೆಯ ವಿವರ :

ನ.25 ರ ಮಧ್ಯಾಹ್ನ 2 ಗಂಟೆಗೆ ಪುರುಷರಿಗಾಗಿ ವಾಲಿಬಾಲ್ ಪಂದ್ಯಾವಳಿ, ಮಹಿಳೆಯರಿಗೆ ಥ್ರೋಬಾಲ್ ಮತ್ತು 1-2ನೇ ತರಗತಿ ಮಕ್ಕಳಿಗೆ ನೀತಿ ಕಥೆ ಹೇಳುವ ಸ್ಪರ್ಧೆ, 3-4ನೇ ತರಗತಿ ಮಕ್ಕಳಿಗೆ ಉಕ್ತಲೇಖನ ಸ್ಪರ್ಧೆ, 4-6ನೇ ತರಗತಿಯ ವಿದ್ಯಾರ್ಥಿಗಳಿಗೆ ಮಲೆನಾಡಿನ ಹಳ್ಳಿಯ ಚಿತ್ರಣ, 8-9-10ನೇ ತರಗತಿ ವಿದ್ಯಾರ್ಥಿಗಳಿಗೆ ಚಿತ್ರಕಲೆ ಜಾನುವಾರು ಸಂತೆ, ಪದವಿ ಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆ ನಡೆಯಲಿದೆ.

ಜಿಲ್ಲಾ ಮಟ್ಟದ ಗಾಯನ ಸ್ಪರ್ಧೆ:

ಇಲ್ಲಿನ ಕಲಾಕೌಸ್ತುಭ ಕನ್ನಡ ಸಂಘದವರು ನವೆಂಬರ್ 25 ರ ಸಂಜೆ ಜಿಲ್ಲಾ ಮಟ್ಟದ 16 ವರ್ಷ ಮೇಲ್ಪಟ್ಟವರಿಗೆ ಗಾಯನ ಸ್ಪರ್ಧೆಯನ್ನು ಆಯೋಜಿಸಿದ್ದಾರೆ. ಈ ಸ್ಪರ್ಧೆಯಲ್ಲಿ ಜಾನಪದಗೀತೆ ಮತ್ತು ಭಾವಗೀತೆ ಹಾಗೂ ಸಮೂಹ ಕನ್ನಡನಾಡ ಗೀತೆಯ ಸ್ಪರ್ಧೆಯನ್ನು ಹಮ್ಮಿಕೊಂಡಿದ್ದು ಭಾಗವಹಿಸಲಿಚ್ಚಿಸುವವರು ನವೆಂಬರ್ 25 ರ ಮಧ್ಯಾಹ್ನ 3 ಗಂಟೆಯ ಒಳಗೆ ಹೆಸರು ನೊಂದಾಯಿಸಿಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಸರು ನೊಂದಾಯಿಸಿಕೊಳ್ಳುವವರು 8722242237, 7259619104 ಈ ಮೊಬೈಲ್ ನಂಬರ್‌ಗೆ ಸಂಪರ್ಕಿಸುವಂತೆ ತಿಳಿಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

4 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

6 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

23 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

23 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

1 day ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago