ರಿಪ್ಪನ್ ಪೇಟೆ ; ಪಟ್ಟಣದ ಹೊಸನಗರ ರಸ್ತೆಯ ನಿವಾಸಿ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಉಪಾಧ್ಯಕ್ಷ ಹಾಗೂ ಸಪ್ತಗಿರಿ ಟ್ರೇಡರ್ಸ್ ಮಾಲೀಕ ಸುಧೀಂದ್ರ ಆರ್ ಪ್ರಭು ಯಾನೆ ಕಲ್ಲು ಬಾಬಣ್ಣ ( 62) ವರ್ಷ ಅವರು ಬುಧವಾರ ಬೆಳಗ್ಗೆ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು.
4 ದಶಕಗಳಿಂದ ಪಟ್ಟಣದಲ್ಲಿ ಮನೆ ಕಟ್ಟಡ ನಿರ್ಮಾಣದ ಸಾಮಗ್ರಿಗಳ ಮಾರಾಟದ ಮೂಲಕ ಚಿರಪರಿಚಿತರಾಗಿ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡು ಜನ ಮನ್ನಣೆ ಗಳಿಸಿದ್ದರು.
ಮೃತರು ಪತ್ನಿ, ಇಬ್ಬರು ಗಂಡು ಮಕ್ಕಳು,ಹಾಗೂ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಗಾಂಧಿ ನಗರದ ಹಿಂದೂ ರುದ್ರಭೂಮಿ
ಯಲ್ಲಿ ಸಂಜೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ .
ಸಂತಾಪ ;
ರಿಪ್ಪನಪೇಟೆ ಸಪ್ತಗಿರಿ ಟ್ರೇಡರ್ಸ್ ಮಾಲೀಕರಾದ ಸುಧೀಂದ್ರ ಆರ್.ಪ್ರಭು (ಕಲ್ಲು ಬಾಬಣ್ಣ) ರವರ ನಿಧನಕ್ಕೆ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್.ಹಾಲಪ್ಪ ಹರತಾಳು,ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಮತ್ತು ಮುಖಂಡರಾದ ಕಲಗೋಡು ರತ್ನಾಕರ್ ,ಅರ್ ಎ ಚಾಬುಸಾಬ್ ,ಎಂ ಬಿ ಮಂಜುನಾಥ್ ,ಆನಂದ್ ಮೆಣಸೆ ,ಆರ್ ಎನ್ ಮಂಜುನಾಥ್ ,ಸುಧೀಂದ್ರ ಪೂಜಾರಿ, ಆಸೀಫ಼್ ಭಾಷಾಸಾಬ್ ಸೇರಿದಂತೆ ಜಿ.ಎಸ್. ಬಿ. ಸಮಾಜ ಮತ್ತು ಪಟ್ಟಣದ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಮೃತರ ಆತ್ಮಕ್ಕೆ ಚಿರಶಾಂತಿ ಕೋರಿ ಸಂತಾಪ ಸೂಚಿಸಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್