Headlines

ರಿಪ್ಪನ್‌ಪೇಟೆ : ಆಟೋ ಅಪಘಾತದಲ್ಲಿ ಮೃತಪಟ್ಟಿದ್ದ ಶ್ರೀನಿವಾಸ್ ಮನೆಗೆ ಭೇಟಿ‌ ನೀಡಿದ ಶಾಸಕ ಹರತಾಳು ಹಾಲಪ್ಪ|Ripponpet

ರಿಪ್ಪನ್‌ಪೇಟೆ : ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ಶಬರೀಶನಗರದ ಆಟೋ ಶ್ರೀನಿವಾಸ್ ರವರ ಮನೆಗೆ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಭೇಟಿ ನೀಡಿದರು.




ಮೃತರ ಮನೆಗೆ ಭೇಟಿ ನೀಡಿದ ಶಾಸಕರು ಕುಟುಂಬಸ್ಥರಿಗೆ ಧೈರ್ಯ ತುಂಬಿ‌,ಸಾಂತ್ವಾನ ಹೇಳಿ ಆರ್ಥಿಕ ನೆರವು ನೀಡಿದರು.

ಚೌಡೇಶ್ವರಿ ದೇವಸ್ಥಾನಕ್ಕೆ ಭೇಟಿ :


ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನಕ್ಕೆ ಭೇಟಿ ನೀಡಿದ ಶಾಸಕರು ಪೂಜೆ ಸಲ್ಲಿಸಿದರು.




ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಗೆ ಸರ್ಕಾರದಿಂದ 3 ಲಕ್ಷ ಅನುದಾನ ಮಂಜೂರು ಮಾಡಿಸಿದ್ದ ಶಾಸಕರನ್ನು. ಸದರಿ ದೇವಸ್ಥಾನ ಸಮಿತಿ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು

ಕೆರೆಹಳ್ಳಿ ರಾಮೇಶ್ವರ ದೇವಸ್ಥಾನಕ್ಕೆ ಭೇಟಿ:


ಕೆರೆಹಳ್ಳಿ ರಾಮೇಶ್ವರ ದೇವಸ್ಥಾನದಲ್ಲಿ ಆಯೋಜಿಸಿದ್ದ ಕಾರ್ತಿಕ ದೀಪೋತ್ಸವ ಕಾರ್ಯಕ್ರಮಕ್ಕೆ ಶಾಸಕರು‌ ಭೇಟಿ‌ ನೀಡಿ ಪೂಜೆ ಸಲ್ಲಿಸಿದರು.

ಈ ಸಂಧರ್ಭದಲ್ಲಿ ರಾಮೇಶ್ವರ ದೇವಸ್ಥಾನ ಸಮಿತಿ ವತಿಯಿಂದ ಶಾಸಕರನ್ನು ಅಭಿನಂದಿಸಲಾಯಿತು‌


ನಂತರ ರಾಮೇಶ್ವರ ದೇವಸ್ಥಾನ ಸಮಿತಿ ವತಿಯಿಂದ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದ  ಶಾಸಕ ಹರತಾಳು ಹಾಲಪ್ಪ ದೇಶ,ಧರ್ಮ ,ನಾಡು ಕಟ್ಟುವಲ್ಲಿ ಅತಿ ಹೆಚ್ಚು ಶ್ರಮ ವಹಿಸಿರುವ ಜನಾಂಗದ ಬೇಡಿಕೆಯನ್ನು‌ ಈಡೇರಿಸುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕಾಗಿದೆ.ಆದಷ್ಟು ಬೇಗ ಎಲ್ಲಾ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದರು.




ಈ ಸಂಧರ್ಭದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ ಬಿ ಮಂಜುನಾಥ್ ,ಗ್ರಾಪಂ ಅಧ್ಯಕ್ಷೆ ಮಂಜುಳಾ ಕೆ ರಾವ್ ಮುಖಂಡರಾದ ಎ ಟಿ ನಾಗರತ್ನಮ್ಮ ,ಆರ್ ಟಿ ಗೋಪಾಲ್ ,ನಾಗರತ್ನ ದೇವರಾಜ್ ,ಸುಧೀಂದ್ರ ಪೂಜಾರಿ,ಸುರೇಶ್ ಸಿಂಗ್ ,ಸುಂದರೇಶ್ ,ಸತೀಶ್ ಎನ್ , ದೇವರಾಜ್ ಕೆರೆಹಳ್ಳಿ,ಉಮೇಶ್ ಜಾಗದ್ದೆ ,ಹೂವಪ್ಪ ,ಮಲ್ಲಿಕಾರ್ಜುನ್,ಕೃಷ್ಣ  ಹಾಗೂ ಇನ್ನಿತರರಿದ್ದರು.

Leave a Reply

Your email address will not be published. Required fields are marked *

Exit mobile version