Headlines

ರಿಪ್ಪನ್‌ಪೇಟೆ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ವಶಕ್ಕೆ|Sand mafia

ರಿಪ್ಪನ್‌ಪೇಟೆ : ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಗುರುವಾರ ರಾತ್ರಿ ಪಟ್ಟಣದ ಪಿಎಸ್ ಐ ಶಿವಾನಂದ ಕೆ ನೇತ್ರತ್ವದ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.




ಗುರುವಾರ ರಾತ್ರಿ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ತಳಲೆ ಬಸ್ ನಿಲ್ದಾಣದ ಬಳಿ ಅಕ್ರಮವಾಗಿ ಮರಳು ಸಾಗಿಸುತಿದ್ದ  ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.

ಅಕ್ರಮ ಮರಳು ತುಂಬಿಕೊಂಡು ಹೊಸನಗರದಿಂದ ಜಂಬಳ್ಳಿ ಮೂಗೂಡ್ತಿ ಮಾರ್ಗವಾಗಿ ಸಾಗಿಸುತ್ತಿರುವ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ತಳಲೆ ಬಸ್ ನಿಲ್ಧಾಣದಲ್ಲಿ  KA 21 C 3268 ನೋಂದಣಿ ಸಂಖ್ಯೆಯ ಟಿಪ್ಪರ್ ವಾಹನ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.




ಕಾರ್ಯಾಚರಣೆಯಲ್ಲಿ ಹೆಚ್ ಸಿ ಉಮೇಶ್, ಶಿವಕುಮಾರ್ ನಾಯ್ಕ್ ಹಾಗೂ ಮಧುಸೂಧನ್ ಇದ್ದರು.



Leave a Reply

Your email address will not be published. Required fields are marked *

Exit mobile version