ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಸಿದ್ದಪ್ಪನಗುಡಿ ಬಸ್ ನಿಲ್ದಾಣದ ಬಳಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಸಿದ್ದಪ್ಪನಗುಡಿ ನಿವಾಸಿ ಸಿದ್ದೇಶ್ ಬಂಧಿತ ಆರೋಪಿಯಾಗಿದ್ದಾನೆ.
ವೈದ್ಯಕೀಯ ಪರೀಕ್ಷೆಯಿಂದ ಆರೋಪಿ ಗಾಂಜಾ ಸೇವನೆ ಮಾಡಿರುವುದು ಡೃಡಪಟ್ಟಿರುವ ಹಿನ್ನಲೆಯಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದೆ.
ಘಟನೆಯ ಹಿನ್ನಲೆ :
ಇಂದು ಬೆನವಳ್ಳಿ ಗ್ರಾಮದ ಸಿದ್ಧಪ್ಪನ ಗುಡಿ ಹತ್ತಿರ ರಿಪ್ಪನ್‌ಪೇಟೆ ಪೊಲೀಸರು ಗಸ್ತು ಸಂಚರಿಸುತ್ತಿರುವಾಗ ಬೆಳಿಗ್ಗೆ 10-45 ಗಂಟೆ ವೇಳೆಗೆ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದವನನ್ನು ಕಂಡು ಆತನ ಬಳಿ ಹೋಗಿ ಆತನನ್ನು ವಿಚಾರಿಸಿದ್ದಾರೆ.
ಈ ಸಮಯದಲ್ಲಿ ಆರೋಪಿಯ ಮಾತು ತೊದಲುತ್ತಿದ್ದು, ಬಾಯಿಯಿಂದ ಅಮಲು ಪದಾರ್ಥ ಸೇದಿದ ವಾಸನೆ ಬರುತ್ತಿದ್ದರಿಂದ, ಆತನನ್ನು ಕೂಲಂಕುಷವಾಗಿ ವಿಚಾರಸಿದಾಗ ಆತನು ಬೀಡಿ ಜೊತೆ ಗಾಂಜಾ ಸೇರಿಸಿ ಸೇದಿದ ಬಗ್ಗೆ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ.
ಕೂಡಲೇ  ಆತನನ್ನು ವೈದ್ಯಕೀಯ ತಪಾಸಣೆಗೆ ಮೆಗಾನ್ ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು, ಆತನು ಗಾಂಜಾ ಸೇವನೆ ಮಾಡಿರುವ ಬಗ್ಗೆ ವೈದಕೀಯ ಪರೀಕ್ಷೆಯಿಂದ ದೃಡಪಟ್ಟಿರುವುದರಿಂದ ಈತನ ವಿರುದ್ಧ ಮಾದಕ ದ್ರವ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ.
ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
 
                         
                         
                         
                         
                         
                         
                         
                         
                         
                        