ಲಕ್ಕವಳ್ಳಿ ಮಠಕ್ಕೆ ಅನುದಾನ ಕೋರಿ ಸಿಎಂಗೆ ನ.15 ರಂದು ಮನವಿ : ವೃಷಭಸೇನ ಭಟ್ಟಾರಕ ಪಟ್ಟಾಚರ್ಯವರ್ಯ ಸ್ವಾಮೀಜಿ|Lakkavalli matt

ಸೊರಬ: ತಾಲೂಕಿನ ಲಕ್ಕವಳ್ಳಿಯ ಶ್ರೀ ಮೋಕ್ಷ ಮಂದಿರ ಜೈನ ಮಠ ವರದಾ ನದಿ ಪ್ರವಾಹಕ್ಕೆ ಸಿಲುಕಿ ಹಾನಿಗೀಡಾಗುತ್ತಿದ್ದು, ನದಿಗೆ ತಡೆಗೋಡೆ ನಿರ್ಮಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನ. 15ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ಶ್ರೀ ಮಠದ ವೃಷಭಸೇನ ಭಟ್ಟಾರಕ ಪಟ್ಟಾಚರ್ಯವರ್ಯ ಸ್ವಾಮೀಜಿ ಹೇಳಿದರು.



ಪಟ್ಟಣದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವರದಾ ನದಿಗೆ ಮೂಗೂರು ಸಮೀಪ ಬ್ಯಾರೆಜ್ ನಿರ್ಮಿಸಿದ ತರುವಾಯ ಪ್ರತಿ ವರ್ಷ ಮಳೆಗಾಲದಲ್ಲಿ ಹಾಗೂ ಅತೀವೃಷ್ಠಿಯಾದ ಸಂದರ್ಭದಲ್ಲಿ ಮಠ ಮತ್ತು ಬಸದಿಗಳು ಮುಳುಗುತ್ತವೆ. ಪರಿಣಾಮ ಕಟ್ಟಡಗಳು ಸಂಪೂರ್ಣವಾಗಿ ನೆರೆಹಾವಳಿಗೆ ತುತ್ತಾಗಿದೆ. ಜಲ ಸಂಪನ್ಮೂಲ ಇಲಾಖೆಗೆ ಈ ಬಗ್ಗೆ ಮನವಿದರೂ ಪ್ರಯೋಜವಾಗಿಲ್ಲ. ಬಜೆಟ್‍ನಲ್ಲಿ ಅನುದಾನ ನೀಡುವುದಾಗಿ ತಿಳಿಸುತ್ತಾರೆ. ಆದರೆ, ಈವರೆಗೂ ಅನುದಾನ ನೀಡದಿರುವುದು ನೋವಿನ ಸಂಗತಿಯಾಗಿದೆ ಎಂದರು.




ಪ್ರವಾಸೋದ್ಯಮ ಇಲಾಖೆಯಿಂದ ನಿರ್ಮಿಸಿದ ಡ್ರಾಮೆಟರಿ ಸಹ 2019 ರಿಂದ 2021ರವರೆಗಿನ ನದಿ ಪ್ರವಾಹಕ್ಕೆ ಸಿಲುಕಿ ನಾಶವಾಗಿದೆ. 2010ರಲ್ಲಿ ರಾಜ್ಯ ಸರ್ಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಪೂರ್ಣವಾದ ಸಮುದಾಯ ಭವನ ನಿರ್ಮಾಣಕ್ಕೆ 1.17 ಕೋಟಿ ರೂ., ಅಂದಾಜು ಪಟ್ಟಿ ಸಲ್ಲಿಸಲಾಗಿತ್ತು. ಆದರೆ, ಕೇವಲ 1 ಲಕ್ಷ ರೂ., ಮಂಜೂರು ನೀಡಿ, ನಿಯಮಾವಳಿಯಂತೆ ನೀಡಲಾಗುವುದು ಎಂದು ತಿಳಿಸಿರುತ್ತಾರೆ. ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಜೈನ ಮಠಗಳ ಅಭಿವೃದ್ಧಿಗೆ ಅನುದಾನ ನೀಡುವುದಾಗಿ ತಿಳಿಸಿದ್ದರು. ನುಡಿದಂತೆ 50 ಕೋಟಿ ರೂ., ಅನುದಾನವನ್ನು ಅಲ್ಪಸಂಖ್ಯಾತರ ಇಲಾಖೆಗೆ ನೀಡಿದ್ದರು. ಈ ಪೈಕಿ ಬೇರೆ ಜೈನ ಮಠಗಳಿಗೆ ಅನುದಾನ ನೀಡಲಾಗಿದೆ ವಿನಃ, ಸಂಬಂಧಪಟ್ಟ ಇಲಾಖೆ ಲಕ್ಕವಳ್ಳಿಯ ಜೈನ ಮಠವನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಬೇಸರ ವ್ಯಕ್ತಪಡಿಸಿದರು.
ನ. 15ರಂದು ಆನವಟ್ಟಿಯಲ್ಲಿ ನಡೆಯಲಿರುವ ಜನಸಂಕಲ್ಪ ಯಾತ್ರೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಸಚಿವರು ಭಾಗವಹಿಸಲಿದ್ದಾರೆ. ಸಮೀಪದಲ್ಲಿಯೇ ಇರುವ ಲಕ್ಕವಳ್ಳಿಯ ಜೈನಮಠದ ದುಸ್ಥಿತಿಯ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತರುವ ನಿಟ್ಟಿನಲ್ಲಿ ಶ್ರೀ ಮಠದ ಭಕ್ತರ ಸಹಯೋಗದಲ್ಲಿ ಮನವಿ ಸಲ್ಲಿಸಲಾಗುವುದು ಹಾಗೂ ಮಠದ ಅಭಿವೃದ್ಧಿಗೆ ಅನುದಾನ ಕೋರಲಾಗುವುದು ಎಂದು ಮಾಹಿತಿ ನೀಡಿದರು.




ಸುದ್ದಿಗೋಷ್ಠಿಯಲ್ಲಿ ಶ್ರೀ ಮಠದ ರಾಜರಾಜೇಶ್ವರಿ ಉಪಸ್ಥಿತರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

5 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

22 hours ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

22 hours ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

22 hours ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

1 day ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

1 day ago