ವಿಸ್ತಾರ ನ್ಯೂಸ್ ವಿಸ್ತಾರವಾಗಿ ಬೆಳೆಯಲಿ : ಹರತಾಳು ಹಾಲಪ್ಪ|Vistara

ರಿಪ್ಪನ್‌ಪೇಟೆ : ಸರ್ಕಾರದ ನಾಲ್ಕು ಅಂಗಗಳಲ್ಲಿ ನಾಲ್ಕನೆಯ ಅಂಗವಾದ ಮಾದ್ಯಮ ರಂಗಕ್ಕೆ ತನ್ನದೇ ಆದ ವಿಶೇಷ ಮಹತ್ವವಿದೆ. ಈಗಿನ ಕಾಲಘಟ್ಟದಲ್ಲಿ ಮಾದ್ಯಮಗಳು ನಿಖರ ಸುದ್ದಿ ಮತ್ತು ಜ್ಞಾನವನ್ನು ಪ್ರಸರಿಸುವ ಕಾರ್ಯವನ್ನು ಕೈಗೊಳ್ಳಬೇಕಾಗಿದೆ.ಆ ನಿಟ್ಟಿನಲ್ಲಿ ವಿಸ್ತಾರ ಚಾನಲ್ ಗಮನ ಹರಿಸಿ ಒಳ್ಳೆಯ ಸುದ್ದಿ ಮಾದ್ಯಮವಾಗಿ ಹೊರಬರಲಿ ಎಂದು ಶಾಸಕ ಎಚ್.ಹಾಲಪ್ಪ ಹರತಾಳು ತಿಳಿಸಿದರು.


ಪಟ್ಟಣದ ಆಶ್ರೀತಾ ಸಭಾಭವನದಲ್ಲಿ ವಿಸ್ತಾರ ವಾಹಿನಿ ಕನ್ನಡ ಸಂಭ್ರಮ ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಬದಲಾದ ದಿನಮಾನಗಳಲ್ಲಿ ಎಲ್ಲವೂ ಕಲುಷಿತಗೊಂಡಿದೆ ಎನ್ನುವ ಚರ್ಚೆ ಇದೆ. ಇಂತಹ ಸವಾಲುಗಳ ನಡುವೆಯೂ ಹರಿಪ್ರಕಾಶ್ ಕೋಣೆಮನೆ ಅವರ ಸಾರಥ್ಯದಲ್ಲಿ ವಿಸ್ತಾರ ವಾಹಿನಿ ಲೋಕಾರ್ಪಣೆಗೊಂಡಿರುವುದು ನನಗೆ ವೈಯಕ್ತಿಕವಾಗಿ ಅತೀವ ಸಂತಸ ತಂದಿದೆ,ವಿಸ್ತಾರ ನ್ಯೂಸ್ ವಿಸ್ತಾರವಾಗಿ ಬೆಳೆಯಲಿ ಎಂದು ಹೇಳಿದರು.



ಹಲವಾರು ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿ ತನ್ನ ಕೌಶಲ್ಯ ಹಾಗೂ ಪ್ರತಿಭೆಯಿಂದ ಹಲವಾರು ಸಮಸ್ಯೆಗಳನ್ನು ಎದುರಿಸಿ ಆ  ಸಂಸ್ಥೆಯನ್ನು ಉತ್ತುಂಗಕ್ಕೆ ಏರಿಸಿದ್ದ ಹರಿಪ್ರಕಾಶ್ ಕೋಣೆಮನೆ ನೇತ್ರತ್ವದಲ್ಲಿ ವಿಸ್ತಾರ ನ್ಯೂಸ್ ರಾಜ್ಯದ ನಂಬರ್ 1 ಚಾನೆಲ್ ಆಗಲಿ ಎಂದು ಹಾರೈಸಿದರು.


ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿ ಆಶೀರ್ವಚನ ನೀಡಿದ ನಿಟ್ಟೂರು ಮಠದ  ಶ್ರೀ ರೇಣುಕಾನಂದ ಸ್ವಾಮೀಜಿ ಈ ಜಗತ್ತಿಗೆ ದೃಶ್ಯ ಮಾದ್ಯಮ ಜನರಿಗೆ ಬಹಳ ಸುಲಭವಾಗಿ ತಲುಪುತ್ತಿದೆ.ಸಮಾಜದ ತಪ್ಪುಗಳನ್ನು ತಿದ್ದಿ ತೀಡುವ ಕೆಲಸ ಮಾಡುತ್ತಿವೆ.ಸಮಾಜದ ಸರ್ವತೋಮುಖ ಪ್ರಗತಿಗೆ ಶ್ರಮಿಸಬೇಕು.ಸಮಾಜದ ಮೂಲಭೂತ ಸೌಕರ್ಯಗಳ ಕುಂದುಕೊರತೆಗಳ ಬಗ್ಗೆ ಗಮನಹರಿಸುವ ಕೆಲಸ ವಿಸ್ತಾರ ಸುದ್ದಿ ಮಾಧ್ಯಮ ಮಾಡಲಿ ಹಾಗೇಯೆ ವಿಸ್ತಾರ ನ್ಯೂಸ್ ರಾಷ್ಟ್ರ ಮಟ್ಟದಲ್ಲಿ ಬೆಳೆಯಲಿ ಎಂದರು.

ಬದಲಾದ ದಿನಮಾನಗಳಲ್ಲಿ ಹೆಚ್ಚು ವಾಹಿನಿಗಳು ನಮ್ಮ ನಡುವೆ ಇದೆ. ಯಾವ ವಾಹಿನಿ ಜನರಿಗೆ ಬೇಕಾದ ಸುದ್ದಿಗಳನ್ನು ಕೊಡುತ್ತಾ ಬರುತ್ತದೆಯೋ ಅಂತಹ ವಾಹಿನಿಗಳು ಹೆಚ್ಚು ಕಾಲ ಬದುಕುತ್ತದೆ. ವಿಸ್ತಾರ ವಾಹಿನಿ ಜನರ ನಡುವೆ ಇದ್ದು ಜನಪರವಾಗಿ ಯೋಚಿಸಲಿ ಎಂದು ಸಲಹೆ ನೀಡಿದರು.



ಈ ಸಂಧರ್ಭದಲ್ಲಿ ರೋಟರಿ ಕ್ಲಬ್ ವತಿಯಿಂದ ಬ್ಯೂರೋ ಮುಖ್ಯಸ್ಥ ವಿವೇಕ್ ಮಹಾಲೆ ರವರಿಗೆ ಗೌರವಿಸಿ ಸನ್ಮಾನಿಸಲಾಯಿತು.

ಈ ಸಂಧರ್ಭದಲ್ಲಿ ಮುಖ್ಯ ಅತಿಥಿಗಳಾಗಿ ರಿಪ್ಪನ್‌ಪೇಟೆ ಗ್ರಾಪಂ ಅಧ್ಯಕ್ಷೆ ಮಂಜುಳಾ ಕೆ ರಾವ್,ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ ಜಿ ನಾಗರಾಜ್ ,ಬಿಜೆಪಿ ತಾಲೂಕ್ ಅಧ್ಯಕ್ಷ ಗಣಪತಿ ಬೆಳಗೋಡು ,ಆಮ್ ಆದ್ಮಿ ಪಕ್ಷದ ತಾಲೂಕ್ ಅಧ್ಯಕ್ಷ ಗಣಪತಿ ಸೂಗೋಡು ,ಒಕ್ಕಲಿಗರ ಸಂಘದ ಅಧ್ಯಕ್ಷ ಎಂ ಬಿ ಲಕ್ಷಣ ಗೌಡ ,ತಾಲೂಕ್ ಕಸಾಪ ಅಧ್ಯಕ್ಷರಾದ ತ ಮ ನರಸಿಂಹ , ರೋಟರಿ ಅಧ್ಯಕ್ಷರಾದ ಪ್ರಮೀಳಾ ಎಲ್ ಗೌಡ ,ಯುವ ಉದ್ಯಮಿ ಆಶ್ರೀತಾ ಸಂತೋಷ್ ಹಾಜರಿದ್ದರು.



ವಿಸ್ತಾರ ಬ್ಯೂರೋ ಮುಖ್ಯಸ್ಥ ವಿವೇಕ್ ಮಹಾಲೆ ಪ್ರಾಸ್ತಾವಿಕ ಮಾತನಾಡಿದರು.ಕು ಕಾವ್ಯ ನಿರೂಪಿಸಿದರು.ವಿಸ್ತಾರ ನ್ಯೂಸ್ ವರದಿಗಾರರಾದ ಸೆಬಾಸ್ಟಿಯನ್ ಮ್ಯಾಥ್ಯೂಸ್‌ ,ಪುರುಷೋತ್ತಮ್ ಶ್ಯಾನ್ ಭೋಗ್ ನಿಟ್ಟೂರು ಇದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

8 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

8 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

12 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

14 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

15 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

1 day ago