ರಿಪ್ಪನ್ಪೇಟೆ : ಸರ್ಕಾರದ ನಾಲ್ಕು ಅಂಗಗಳಲ್ಲಿ ನಾಲ್ಕನೆಯ ಅಂಗವಾದ ಮಾದ್ಯಮ ರಂಗಕ್ಕೆ ತನ್ನದೇ ಆದ ವಿಶೇಷ ಮಹತ್ವವಿದೆ. ಈಗಿನ ಕಾಲಘಟ್ಟದಲ್ಲಿ ಮಾದ್ಯಮಗಳು ನಿಖರ ಸುದ್ದಿ ಮತ್ತು ಜ್ಞಾನವನ್ನು ಪ್ರಸರಿಸುವ ಕಾರ್ಯವನ್ನು ಕೈಗೊಳ್ಳಬೇಕಾಗಿದೆ.ಆ ನಿಟ್ಟಿನಲ್ಲಿ ವಿಸ್ತಾರ ಚಾನಲ್ ಗಮನ ಹರಿಸಿ ಒಳ್ಳೆಯ ಸುದ್ದಿ ಮಾದ್ಯಮವಾಗಿ ಹೊರಬರಲಿ ಎಂದು ಶಾಸಕ ಎಚ್.ಹಾಲಪ್ಪ ಹರತಾಳು ತಿಳಿಸಿದರು.
ಪಟ್ಟಣದ ಆಶ್ರೀತಾ ಸಭಾಭವನದಲ್ಲಿ ವಿಸ್ತಾರ ವಾಹಿನಿ ಕನ್ನಡ ಸಂಭ್ರಮ ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಬದಲಾದ ದಿನಮಾನಗಳಲ್ಲಿ ಎಲ್ಲವೂ ಕಲುಷಿತಗೊಂಡಿದೆ ಎನ್ನುವ ಚರ್ಚೆ ಇದೆ. ಇಂತಹ ಸವಾಲುಗಳ ನಡುವೆಯೂ ಹರಿಪ್ರಕಾಶ್ ಕೋಣೆಮನೆ ಅವರ ಸಾರಥ್ಯದಲ್ಲಿ ವಿಸ್ತಾರ ವಾಹಿನಿ ಲೋಕಾರ್ಪಣೆಗೊಂಡಿರುವುದು ನನಗೆ ವೈಯಕ್ತಿಕವಾಗಿ ಅತೀವ ಸಂತಸ ತಂದಿದೆ,ವಿಸ್ತಾರ ನ್ಯೂಸ್ ವಿಸ್ತಾರವಾಗಿ ಬೆಳೆಯಲಿ ಎಂದು ಹೇಳಿದರು.
ಹಲವಾರು ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿ ತನ್ನ ಕೌಶಲ್ಯ ಹಾಗೂ ಪ್ರತಿಭೆಯಿಂದ ಹಲವಾರು ಸಮಸ್ಯೆಗಳನ್ನು ಎದುರಿಸಿ ಆ ಸಂಸ್ಥೆಯನ್ನು ಉತ್ತುಂಗಕ್ಕೆ ಏರಿಸಿದ್ದ ಹರಿಪ್ರಕಾಶ್ ಕೋಣೆಮನೆ ನೇತ್ರತ್ವದಲ್ಲಿ ವಿಸ್ತಾರ ನ್ಯೂಸ್ ರಾಜ್ಯದ ನಂಬರ್ 1 ಚಾನೆಲ್ ಆಗಲಿ ಎಂದು ಹಾರೈಸಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿ ಆಶೀರ್ವಚನ ನೀಡಿದ ನಿಟ್ಟೂರು ಮಠದ ಶ್ರೀ ರೇಣುಕಾನಂದ ಸ್ವಾಮೀಜಿ ಈ ಜಗತ್ತಿಗೆ ದೃಶ್ಯ ಮಾದ್ಯಮ ಜನರಿಗೆ ಬಹಳ ಸುಲಭವಾಗಿ ತಲುಪುತ್ತಿದೆ.ಸಮಾಜದ ತಪ್ಪುಗಳನ್ನು ತಿದ್ದಿ ತೀಡುವ ಕೆಲಸ ಮಾಡುತ್ತಿವೆ.ಸಮಾಜದ ಸರ್ವತೋಮುಖ ಪ್ರಗತಿಗೆ ಶ್ರಮಿಸಬೇಕು.ಸಮಾಜದ ಮೂಲಭೂತ ಸೌಕರ್ಯಗಳ ಕುಂದುಕೊರತೆಗಳ ಬಗ್ಗೆ ಗಮನಹರಿಸುವ ಕೆಲಸ ವಿಸ್ತಾರ ಸುದ್ದಿ ಮಾಧ್ಯಮ ಮಾಡಲಿ ಹಾಗೇಯೆ ವಿಸ್ತಾರ ನ್ಯೂಸ್ ರಾಷ್ಟ್ರ ಮಟ್ಟದಲ್ಲಿ ಬೆಳೆಯಲಿ ಎಂದರು.
ಬದಲಾದ ದಿನಮಾನಗಳಲ್ಲಿ ಹೆಚ್ಚು ವಾಹಿನಿಗಳು ನಮ್ಮ ನಡುವೆ ಇದೆ. ಯಾವ ವಾಹಿನಿ ಜನರಿಗೆ ಬೇಕಾದ ಸುದ್ದಿಗಳನ್ನು ಕೊಡುತ್ತಾ ಬರುತ್ತದೆಯೋ ಅಂತಹ ವಾಹಿನಿಗಳು ಹೆಚ್ಚು ಕಾಲ ಬದುಕುತ್ತದೆ. ವಿಸ್ತಾರ ವಾಹಿನಿ ಜನರ ನಡುವೆ ಇದ್ದು ಜನಪರವಾಗಿ ಯೋಚಿಸಲಿ ಎಂದು ಸಲಹೆ ನೀಡಿದರು.
ಈ ಸಂಧರ್ಭದಲ್ಲಿ ರೋಟರಿ ಕ್ಲಬ್ ವತಿಯಿಂದ ಬ್ಯೂರೋ ಮುಖ್ಯಸ್ಥ ವಿವೇಕ್ ಮಹಾಲೆ ರವರಿಗೆ ಗೌರವಿಸಿ ಸನ್ಮಾನಿಸಲಾಯಿತು.
ಈ ಸಂಧರ್ಭದಲ್ಲಿ ಮುಖ್ಯ ಅತಿಥಿಗಳಾಗಿ ರಿಪ್ಪನ್ಪೇಟೆ ಗ್ರಾಪಂ ಅಧ್ಯಕ್ಷೆ ಮಂಜುಳಾ ಕೆ ರಾವ್,ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ ಜಿ ನಾಗರಾಜ್ ,ಬಿಜೆಪಿ ತಾಲೂಕ್ ಅಧ್ಯಕ್ಷ ಗಣಪತಿ ಬೆಳಗೋಡು ,ಆಮ್ ಆದ್ಮಿ ಪಕ್ಷದ ತಾಲೂಕ್ ಅಧ್ಯಕ್ಷ ಗಣಪತಿ ಸೂಗೋಡು ,ಒಕ್ಕಲಿಗರ ಸಂಘದ ಅಧ್ಯಕ್ಷ ಎಂ ಬಿ ಲಕ್ಷಣ ಗೌಡ ,ತಾಲೂಕ್ ಕಸಾಪ ಅಧ್ಯಕ್ಷರಾದ ತ ಮ ನರಸಿಂಹ , ರೋಟರಿ ಅಧ್ಯಕ್ಷರಾದ ಪ್ರಮೀಳಾ ಎಲ್ ಗೌಡ ,ಯುವ ಉದ್ಯಮಿ ಆಶ್ರೀತಾ ಸಂತೋಷ್ ಹಾಜರಿದ್ದರು.
ವಿಸ್ತಾರ ಬ್ಯೂರೋ ಮುಖ್ಯಸ್ಥ ವಿವೇಕ್ ಮಹಾಲೆ ಪ್ರಾಸ್ತಾವಿಕ ಮಾತನಾಡಿದರು.ಕು ಕಾವ್ಯ ನಿರೂಪಿಸಿದರು.ವಿಸ್ತಾರ ನ್ಯೂಸ್ ವರದಿಗಾರರಾದ ಸೆಬಾಸ್ಟಿಯನ್ ಮ್ಯಾಥ್ಯೂಸ್ ,ಪುರುಷೋತ್ತಮ್ ಶ್ಯಾನ್ ಭೋಗ್ ನಿಟ್ಟೂರು ಇದ್ದರು.