ಜಾಗದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿರುವ ಘಟನೆ ಶಿವಮೊಗ್ಗ ತಾಲೂಕಿನ ಹಾರೊ ಬೆನವಳ್ಳಿ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ.
ಈ ಗ್ರಾಮದಲ್ಲಿ ಇರುವ ಜಾಗದ ವಿಚಾರದಲ್ಲಿ ಒಂದು ಗುಂಪು ಇನ್ನೊಂದು ಗುಂಪಿನ ಮೇಲೆ ಹಲ್ಲೆಗೆ ಮುಂದಾಗಿದ್ದರು ಎಂಬ ಆರೋಪ ಕೇಳಿಬಂದಿದೆ.
ಗ್ರಾಮಸ್ಥರು ಯುವಕರಿಗೆ ಈ ರೀತಿ ಮಾಡುವುದು ತಪ್ಪು ಎಂದು ಹೇಳಲು ಹೋದಾಗ ಮಾತಿಗೆ ಮಾತು ಬೆಳೆದು ಘರ್ಷಣೆ ಆಗಿದೆ ಎಂದು ತಿಳಿದುಬಂದಿದೆ. ಈ ವೇಳೆ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಹೊಳೆ ಹೊನ್ನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಗುಂಪು ಘರ್ಷಣೆಯನ್ನು ತಪ್ಪಿಸಿದ್ದಾರೆ.
ಸ್ಥಳಕ್ಕೆ ಎಸ್ಪಿ ಮಿಥುನ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸ್ಥಳದಲ್ಲಿ ಡಿಎಆರ್ ಹಾಗೂ ಹೊಳೆಹೊನ್ನೂರು ಪೊಲೀಸರು ಮೊಕ್ಕಾಂ ಹೂಡಿದ್ದು, ಸದ್ಯ ಪರಿಸ್ಥಿತಿ ಶಾಂತಯುತವಾಗಿದೆ.
ಘಟನೆಯ ಹಿನ್ನಲೆ:
ಹಾರೊ ಬೆನವಳ್ಳಿ ಗ್ರಾಮದ ಹಾಳೂರು ಎಂಬಲ್ಲಿ ಗ್ರಾಮದ ಪ್ರತಿಯೊಬ್ಬರಿಗೆ ಸೈಟ್ ನೀಡಲಾಗಿತ್ತು. ಕಾರ್ತಿಕ್ ಎಂಬುವರಿಗೆ ನೀಡಲಾಗಿದ್ದ ಜಾಗದಲ್ಲಿ ಫೈರೋಜ್ ಎಂಬುವರು ಅಡಿಕೆ ತಟ್ಟೆ ತಯಾರಿಕಾ ಘಟಕ ಮಾಡಿಕೊಂಡಿದ್ದರು. ಈ ವಿಚಾರವಾಗಿ ಕಾರ್ತಿಕ್ ತನ್ನ ಸೈಟ್ನ್ನು ಬಿಟ್ಟು ಕೊಡುವಂತೆ ಫೈರೋಜ್ಗೆ ತಿಳಿಸಿದ್ದರು. ಆದರೆ ಫೈರೋಜ್ ತನ್ನ ಸಹೋದರ ಸಂಬಂಧಿಯನ್ನು ಕರೆಯಿಸಿ ಕಾರ್ತಿಕ್ಗೆ ಬೆದರಿಕೆ ಹಾಕಿ, ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗ್ತಿದೆ.
ವಿಷಯ ತಿಳಿದ ಗ್ರಾಮಸ್ಥರು ಫೈರೋಜ್ ಬಳಿ ಹೋಗಿ ಮಾತುಕತೆ ನಡೆಸುವಾಗ ಗುಂಪು ಸೇರಿಕೊಂಡು ಗಲಾಟೆ ಪ್ರಾರಂಭವಾಗಿದೆ ಎಂದು ತಿಳಿದು ಬಂದಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್