Headlines

ಸಮಾಜಕ್ಕೆ ನಿಖರ ಸುದ್ದಿ ಮತ್ತು ಜ್ಞಾನವನ್ನು‌ ಪ್ರಸರಿಸುವ ವಾಹಿನಿಗಳ ಅಗತ್ಯತೆ ಇದೆ – ಶಾಸಕ ಹರತಾಳು ಹಾಲಪ್ಪ|sagara

ಸಾಗರ : ಇಂದಿನ ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಸುದ್ದಿ‌ಮಾಧ್ಯಮಗಳು ಪೈಪೋಟಿಗೆ ಬಿದ್ದು ಸುದ್ದಿಗಳನ್ನು ನೀಡುವುದರ ಜೊತೆಗೆ ಸಮಾಜಕ್ಕೆ ನಿಖರ ಸುದ್ದಿ ಮತ್ತು ಜ್ಞಾನವನ್ನು ಪ್ರಸರಿಸುವ ಅಗತ್ಯ ಇದೆ. ಜನರು ವಾಹಿನಿಗಳ ಮೇಲೆ ಇರಿಸಿಕೊಂಡಿರುವ ನಂಬಿಕೆ ಶಾಶ್ವತವಾಗಿ ಉಳಿಸಿ ಬೆಳೆಸಿಕೊಳ್ಳುವ ನಿಟ್ಟಿನಲ್ಲಿ ವಿಸ್ತಾರ ಚಾನಲ್ ಗಮನ ಹರಿಸಬೇಕು ಎಂದು ಶಾಸಕ ಎಚ್.ಹಾಲಪ್ಪ ಹರತಾಳು ತಿಳಿಸಿದರು.

ಪಟ್ಟಣದ ನಗರಸಭೆ ರಂಗಮಂದಿರದಲ್ಲಿ ಗುರುವಾರ ವಿಸ್ತಾರ ವಾಹಿನಿ ಕನ್ನಡ ಸಂಭ್ರಮ ಕಾರ್ಯಕ್ರಮವನ್ನು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದ ಅವರು ಉತ್ತಮ ಸಮಾಜದ ನಿರ್ಮಾಣದಲ್ಲಿ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಮತ್ತು ಪತ್ರಿಕಾ ರಂಗದ ಮೇಲೆ ಮಹತ್ತರವಾದ ಹೊಣೆಗಾರಿಕೆ ಇದೆ. ಬದಲಾದ ದಿನಮಾನಗಳಲ್ಲಿ ಎಲ್ಲವೂ ಕಲುಷಿತಗೊಂಡಿದೆ ಎನ್ನುವ ಚರ್ಚೆ ಇದೆ. ಇಂತಹ ಸವಾಲುಗಳ ನಡುವೆಯೂ ಹರಿಪ್ರಕಾಶ್ ಕೋಣೆಮನೆ ಅವರ ಸಾರಥ್ಯದಲ್ಲಿ ವಿಸ್ತಾರ ಸುದ್ದಿ ವಾಹಿನಿ ಲೋಕಾರ್ಪಣೆಗೊಂಡಿರುವುದು ಸಂತೋಷ ತಂದಿದೆ ಎಂದು ಹೇಳಿದರು.


ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಮಾತನಾಡಿ, ಬದಲಾದ ದಿನಮಾನಗಳಲ್ಲಿ ಹೆಚ್ಚು ವಾಹಿನಿಗಳು ನಮ್ಮ ನಡುವೆ ಇದೆ. ಯಾವ ವಾಹಿನಿ ಜನರಿಗೆ ಬೇಕಾದ ಸುದ್ದಿಗಳನ್ನು ಕೊಡುತ್ತಾ ಬರುತ್ತದೆಯೋ ಅಂತಹ ವಾಹಿನಿಗಳು ಹೆಚ್ಚು ಕಾಲ ಬದುಕುತ್ತದೆ. ವಿಸ್ತಾರ ವಾಹಿನಿ ಜನರ ನಡುವೆ ಇದ್ದು ಜನಪರವಾಗಿ ಯೋಚಿಸಲಿ ಎಂದು ಸಲಹೆ ನೀಡಿದರು.

ನ್ಯಾಯವಾದಿ ಕೆ. ದಿವಾಕರ್ ಮಾತನಾಡಿ, ಮಾಧ್ಯಮ ಬದುಕಿನ ಅವಿಭಾಜ್ಯ ಅಂಗವಾಗಿದೆ. ಆರ್ಥಿಕ ಪ್ರಾಮುಖ್ಯತೆ ಇಲ್ಲದೆ ಹೋದಲ್ಲಿ ಚಾನಲ್‍ಗಳನ್ನು ನಡೆಸಲು ಸಾಧ್ಯವಾಗುವುದಿಲ್ಲ. ಅಪರಾಧವನ್ನು ವೈಭವೀಕರಿಸುವುದನ್ನು ಬಿಟ್ಟು ಸ್ಥಳೀಯ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಿ ಅದಕ್ಕೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಹರಿಪ್ರಕಾಶ್ ಕೋಣೆಮನೆ ನೇತೃತ್ವದ ವಿಸ್ತಾರ ಚಾನಲ್ ಪ್ರಯತ್ನ ನಡೆಸಲಿ ಎಂದು ಹೇಳಿದರು.

ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ಉಪವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ. ರಾಜನಂದಿನಿ ಕಾಗೋಡು, ಜೆಡಿಎಸ್ ನಗರ ಅಧ್ಯಕ್ಷ ಸೈಯದ್ ಜಾಕೀರ್, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಅಧ್ಯಕ್ಷ ಜಿ.ನಾಗೇಶ್ ಹಾಜರಿದ್ದರು.

ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಇಮ್ರಾನ್ ಸಾಗರ್ ಸ್ವಾಗತಿಸಿದರು. ವಿವೇಕ್ ಮಹಾಲೆ ಪ್ರಾಸ್ತಾವಿಕ ಮಾತನಾಡಿದರು. ವಿ.ಟಿ.ಸ್ವಾಮಿ ನಿರೂಪಿಸಿದರು.

Leave a Reply

Your email address will not be published. Required fields are marked *

Exit mobile version