w
Headlines
Home » ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್ ಗೆ ಬೇಳೂರು ಗೋಪಾಲಕೃಷ್ಣ ಅರ್ಜಿ|beluru

ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್ ಗೆ ಬೇಳೂರು ಗೋಪಾಲಕೃಷ್ಣ ಅರ್ಜಿ|beluru

ಸಾಗರ ವಿಧಾನಸಭಾ ಕ್ಷೇತ್ರದ ಮುಂದಿನ ಚುನಾವಣೆಯಲ್ಲಿ  ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಅರ್ಜಿ ಸಲ್ಲಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಪಕ್ಷದ ನಿಯಾಮವಳಿಯಂತೆ ಇಂದು ಬೆಂಗಳೂರಿನ ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಅರ್ಜಿಯನ್ನು ಸಲ್ಲಿಸಿದರು.
ರಾಜ್ಯ ರಾಜಕಾರಣದಲ್ಲಿ ರಂಗುರಂಗಿನ ವ್ಯಕ್ತಿತ್ವ,ನೇರ ನುಡಿಯ ಮೂಲಕ ತನ್ನದೇ ಆದಂತಹ ಛಾಪು ಮೂಡಿಸಿಕೊಂಡು ಗ್ರಾಮೀಣ ಪ್ರದೇಶದಿಂದ ಹಿಡಿದು ನಗರ ಪ್ರದೇಶದವರೆಗೂ ಅಪಾರ ಅಭಿಮಾನಿಗಳನ್ನು ಹೊಂದಿರುವ ಬೇಳೂರು ಗೋಪಾಲಕೃಷ್ಣ ಸಾಗರ ವಿಧಾನಸಭಾ ಕ್ಷೇತ್ರಕ್ಕೆ ಅರ್ಜಿ ಸಲ್ಲಿಸಿರುವುದು ಸಾಗರ-ಹೊಸನಗರ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ,ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಪೋಸ್ಟ್ ಮ್ಯಾನ್ ಸುದ್ದಿ ಬಳಗದೊಂದಿಗೆ ಮಾತನಾಡಿದ ಬೇಳೂರು ಗೋಪಾಲಕೃಷ್ಣ ನಾನು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅರ್ಜಿಯನ್ನು ಸಲ್ಲಿಸಿದ್ದು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಹಾಗೂ ರಾಜ್ಯದ ವರಿಷ್ಟರು ಯಾವುದೇ ತೀರ್ಮಾನ ತೆಗೆದುಕೊಂಡರು ಅದಕ್ಕೆ ಬದ್ದನಾಗಿರುತ್ತೇನೆ ಎಂದ ಅವರು ಕ್ಷೇತ್ರದಾದ್ಯಂತ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಎಲ್ಲಾ ಪಕ್ಷದಲ್ಲಿರುವ ನನ್ನ ಅಭಿಮಾನಿಗಳು ನನ್ನ ಸ್ಪರ್ಧೆಯನ್ನು ಬಯಸಿದ್ದಾರೆ ಎಂದು ತಿಳಿಸಿದರು.
ಈ ಸಂಧರ್ಭದಲ್ಲಿ ಕೆಪಿಸಿಸಿ ಸಹಕಾರ ವಿಭಾಗದ ಆರ್ ಎಂ ಮಂಜುನಾಥ್ ಗೌಡ,ಶಿವಮೊಗ್ಗ ಚಂದ್ರಶೇಖರ್, ಸೋಮಶೇಖರ್ ಲಾವಿಗೆರೆ , ಶಿವಕುಮಾರ್ ,ಪರಮೇಶ್ವರ್ ಹಾಜರಿದ್ದರು.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.