ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಎಸ್ಕಾರ್ಟ್ ವಾಹನ ಅಪಘಾತಕ್ಕೀಡಾಗಿ ತಾಯಿ ಹಾಗೂ ಮಗು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ಕಚೇರಿ ಬಳಿ ನಡೆದಿದೆ.
ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಭದ್ರತೆ ಒದಗಿಸಲು ನೀಡಲಾಗಿದ್ದ ಸಿಇಎನ್ ಸಿಪಿಐ ಇದ್ದ ಎಸ್ಕಾರ್ಟ್ ವಾಹನ ಪಲ್ಟಿಯಾಗಿದೆ.
ವಾಣಿವಿಲಾಸ ಸಾಗರದಿಂದ ಹಿರಿಯೂರು ಕಡೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ರಸ್ತೆಯಲ್ಲಿ ತೆರಳುತ್ತಿದ್ದ ತಾಯಿ ಹಾಗೂ ಮಗು ಗಾಯಗೊಂಡಿದ್ದಾರೆ.
ಮಸ್ಕಲ್ ಗ್ರಾಮದ ಮಂಜುಳಾ ಹಾಗೂ ಮಗ ಮನೋಜ್ ಗಾಯಾಳುಗಳು. ಏಕಾಏಕಿ ಬ್ರೇಕ್ ಹಾಕಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
		 
                         
                         
                         
                         
                         
                         
                         
                         
                         
                        
