ಹೊಸನಗರ ತಾಲೂಕಿನ ಹುಲಿಕಲ್ ನಲ್ಲಿ ನಡೆದ ಅಪಘಾತ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆಯು ಮೃತಪಟ್ಟಿದ್ದಾರೆ.
ಗುರುವಾರ ತಡರಾತ್ರಿ ನಡೆದಿದ್ದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿತ್ತು ಗಾಯಾಳುವನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ನಂತರ ಚಂದ್ರಗಿರಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಈ ಅಪಘಾತದಲ್ಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದ ಕಂಪದ ಕೈ ರವಿ ರವರ ಪತ್ನಿ ಶಾಲಿನಿ ಮೃತಪಟ್ಟಿದ್ದಾರೆ.
ಘಟನೆಯ ಹಿನ್ನಲೆ:
ಗುರುವಾರ ರಾತ್ರಿ ಹುಲಿಕಲ್ ಘಾಟ್ ನಲ್ಲಿ ಬೈಕ್ ನಲ್ಲಿ ತೆರಳುತ್ತಿರುವವರ ಮೇಲೆ ಹಿಂಬದಿಯಿಂದ ಬಂದ ಲಾರಿ ಹರಿದಿದ್ದು ಘಟನೆ ಬಳಿಕ ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ. ಘಟನಾ ಭೀಕರತೆ ನೋಡಿ ಜನ ಬೆಚ್ಚಿಬಿದ್ದಿದ್ದು, ಸುಮಾರು ಎರಡೂವರೆ ಘಂಟೆ ಕಾಲ ವಾಹನ ಸಂಚಾರ ಸ್ಥಗಿತವಾಗಿತ್ತು.
ಮಾಸ್ತಿಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂಪದ ಕೈ ಕೂಲಿ ಕಾರ್ಮಿಕ ರವಿ (47) ಹಾಗೂ ಅವರ ಅಣ್ಣನ ಮಗ ಶ್ರಿಸಿರ (10) ಸ್ಥಳದಲ್ಲಿಯೇ ಮೃತಪಟ್ಟಿದ್ದರು.
ಹುಲಿಕಲ್ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದ ಕಾರ್ತಿಕ ದೀಪೋತ್ಸವ ಕಾರ್ಯಕ್ರಮ ಮುಗಿಸಿ ಮನೆಗೆ ಬರುವಾಗ ಸುಮಾರು ರಾತ್ರಿ 9:35 ರ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿತ್ತು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್