ಹೆದ್ದಾರಿಪುರ : ಅರಣ್ಯ ಇಲಾಖೆಯ ದಾಳಿ – ಲಕ್ಷಾಂತರ ರೂ ಮೌಲ್ಯದ ತೇಗದ ತುಂಡುಗಳು ವಶಕ್ಕೆ….!! ಮರ ಕಡಿಸುವುದು ಅವರೇ ಹಿಡಿಯುವುದು ಅವರ ಕಡೆಯವರೇ!!!!..?????|FOREST

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕೊಳವಳ್ಳಿ ಗ್ರಾಮದ ಸುಗಂಧರಾಜ್ ಎಂಬುವವರಿಗೆ ಸೇರಿದ ಮನೆಯ ಸಮೀಪದಲ್ಲಿ ಅಕ್ರಮ ಕಡಿತಲೆ ಮಾಡಿ ಸಂಗ್ರಹಿಸಿಟ್ಟಿದ್ದ ಸುಮಾರು ರೂ. 2ಲಕ್ಷ ಮೌಲ್ಯದ ತೇಗದ ಮರದ ನಾಟ ಹಾಗೂ ಸೈಜ್‌ಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ಗ್ರಾಮಠಾಣೆ ವ್ಯಾಪ್ತಿಯಲ್ಲಿ ಬೆಳೆದಿದ್ದ ತೇಗದ ಮರಗಳನ್ನು ಅಕ್ರಮವಾಗಿ ಕಡಿದು, ಸ್ಶೆಜ್‌ಗಳಾಗಿ ಪರಿವರ್ತಿಸಿದ್ದು, ವಿಷಯ ತಿಳಿದು ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ದಾಳಿ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ವಲಯ ಅರಣ್ಯ ಅಧಿಕಾರಿ ಎಂ. ರಾಘವೇಂದ್ರ ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು, ಉಪವಲಯ ಅರಣ್ಯಾಧಿಕಾರಿ ಯುವರಾಜ್, ಅಕ್ಷಯ್ ಕುಮಾರ್,ಹರೀಶ,ತವರ್ಯ ನಾಯಕ್,ಅನಿಲ್,ಯುವರಾಜ್,
ಪ್ರಮೋದ್ ದಾಳಿಯಲ್ಲಿ ಭಾಗವಹಿಸಿದ್ದರು.


ಕಡಿಸುವುದು ಅವರೇ ಹಿಡಿಯುವುದು ಅವರ ಕಡೆಯವರೇ…!!!!????

ಹೀಗೊಂದು ಮಾತು ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕೊಳವಳ್ಳಿ ಗ್ರಾಮದಲ್ಲಿ ಕೇಳಿಬರುತಿದ್ದು ಅರಣ್ಯ ಅಧಿಕಾರಿಯೊಬ್ಬರು ಕೊಳವಳ್ಳಿ ಗ್ರಾಮದ ಗ್ರಾಮಠಾಣ ಜಾಗದಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಡಿಯುವವರ ಬೆಂಬಲಕಿದ್ದು ಅದು ಗ್ರಾಮಸ್ಥರ ಗಮನಕ್ಕೆ ಹಲವಾರು ದಿನಗಳ ಹಿಂದೆಯೇ ಬಂದಿತ್ತು.

ಆದರೆ ಮೊನ್ನೆಯ ದಿನ ಗ್ರಾಮದ ವ್ಯಕ್ತಿಯೊಬ್ಬರು ನೇರವಾಗಿ ತಾಲೂಕಿನ ಹಿರಿಯ ಅಧಿಕಾರಿಯೊಬ್ಬರಿಗೆ ಕರೆ ಮಾಡಿ ಮಾಹಿತಿ ತಿಳಿಸಿದಾಗ ಆ ಅಧಿಕಾರಿ ಸಿಬ್ಬಂದಿಗಳನ್ನು ಯಾವುದೇ ಮಾಹಿತಿ ನೀಡದೇ 18ನೇ ಮೈಲಿಕಲ್ಲಿಗೆ ಕಳುಹಿಸಿಕೊಟ್ಟಿದ್ದಾರೆ.ಆ ನಂತರ ಸ್ಥಳದ ಮಾಹಿತಿ ನೀಡಿ ಬುದ್ದಿವಂತಿಕೆ ತೋರಿಸಿದ್ದಾರೆ ಹಾಗಾಗಿ ಅಕ್ರಮ ನಾಟವನ್ನು ಪತ್ತೆಹಚ್ಚಲು ಸಾಧ್ಯವಾಯಿತಂತೆ ಎಂದು ಜನಸಾಮಾನ್ಯರು ಗುಸುಗುಸು ಮಾತನಾಡಿಕೊಳ್ಳುತಿದ್ದಾರೆ.

ಜನಸಾಮಾನ್ಯ ಕಟ್ಟಿಗೆ,ಸೊಪ್ಪು ಕಾಡಿನಿಂದ ತಂದಾಗ ಬೂಟುಕಾಲಲ್ಲಿ ಮನೆಗೆ ನುಗ್ಗಿ ಹಿಂಸಿಸಿ ದರ್ಪ ತೋರಿಸುವ ಅಧಿಕಾರಿ ಕಳ್ಳರ ಜೊತೆ ಶಾಮೀಲಾಗಿ ಕಾಡನ್ನು ಬರಿದು ಮಾಡಲು ಹೊರಟಿರುವುದು ಬೇಸರದ ಸಂಗತಿ ಎನ್ನುತ್ತಾರೆ ಕೊಳವಳ್ಳಿಯ ಜನತೆ.

ಒಟ್ಟಾರೆಯಾಗಿ ಈ ವಿಚಾರ ಹೊಸನಗರ ತಾಲೂಕಿನ ಅರಣ್ಯ ಇಲಾಖೆಯ ಸಭ್ಯ ಅಧಿಕಾರಿಗಳ ಗಮನಕ್ಕೆ ಬಂದಿದೆ ಎನ್ನಲಾಗುತ್ತಿದ್ದು ಏನು ಕ್ರಮ ಕೈಗೊಳ್ಳುತ್ತಾರೋ ಕಾದುನೋಡಬೇಕಾಗಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

2 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

6 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

8 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

20 hours ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

20 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

23 hours ago