ಹೊಸನಗರ ತಾಲ್ಲೂಕಿನ ಹೆದ್ದಾರಿಪುರ ಗ್ರಾಮ ಪಂಚಾಯತಿ ಸದಸ್ಯ ಚೂಡಾಮಣಿ ಕಗ್ಗಲಿ (50) ಅನಾರೋಗ್ಯದಿಂದ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ.
ಹೆದ್ದಾರಿಪುರ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಇವರು ಬಿಜೆಪಿ ಪಕ್ಷದ ಸಕ್ರೀಯ ಕಾರ್ಯಕರ್ತರಾಗಿದ್ದರು.ತೀವ್ರ ಅನಾರೋಗ್ಯದಿಂದ ಬಳಲುತಿದ್ದ ಇವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ.
ಮೃತರು ತಾಯಿ,ಪತ್ನಿ ಇರ್ವರು ಪುತ್ರರನ್ನು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ತಮ್ಮ ಸ್ವಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಂತಾಪ :
ಬಿಜೆಪಿ ಪಕ್ಷದ ಸಕ್ರೀಯ ಕಾರ್ಯಕರ್ತರು ಹಾಗೂ ಹೆದ್ದಾರಿಪುರ ಗ್ರಾಪಂ ಸದಸ್ಯರಾದ ಚೂಡಾಮಣಿ ರವರ ನಿಧನಕ್ಕೆ ಕರ್ನಾಟಕ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ,ಸಾಗರ- ಹೊಸನಗರ ಶಾಸಕ ಹರತಾಳು ಹಾಲಪ್ಪ, ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ ಬಿ ಮಂಜುನಾಥ್ , ಮುಖಂಡರಾದ ಕಗ್ಗಲಿ ಲಿಂಗಪ್ಪ,ಬೆಳ್ಳೂರು ತಿಮ್ಮಪ್ಪ ,ಸುಧೀಂದ್ರ ಪೂಜಾರಿ,ಕೃಷ್ಣಮೂರ್ತಿ ಬೆಳ್ಳಿಸರ ,ಉಮೇಶ್ ಜಾಗದ್ದೆ ,ಕಲ್ಲೂರು ನಾಗೇಂದ್ರಪ್ಪ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.