ಹೆದ್ದಾರಿಪುರ ಗ್ರಾಪಂ ಸದಸ್ಯ ಚೂಡಾಮಣಿ‌ ಕಗ್ಗಲಿ ನಿಧನ|Heddaripura


ಹೊಸನಗರ ತಾಲ್ಲೂಕಿನ ಹೆದ್ದಾರಿಪುರ ಗ್ರಾಮ ಪಂಚಾಯತಿ ಸದಸ್ಯ ಚೂಡಾಮಣಿ ಕಗ್ಗಲಿ (50) ಅನಾರೋಗ್ಯದಿಂದ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ.



ಹೆದ್ದಾರಿಪುರ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಇವರು ಬಿಜೆಪಿ ಪಕ್ಷದ ಸಕ್ರೀಯ ಕಾರ್ಯಕರ್ತರಾಗಿದ್ದರು.ತೀವ್ರ ಅನಾರೋಗ್ಯದಿಂದ ಬಳಲುತಿದ್ದ ಇವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ.

ಮೃತರು ತಾಯಿ,ಪತ್ನಿ ಇರ್ವರು ಪುತ್ರರನ್ನು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ತಮ್ಮ ಸ್ವಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.



ಸಂತಾಪ : 

ಬಿಜೆಪಿ ಪಕ್ಷದ ಸಕ್ರೀಯ ಕಾರ್ಯಕರ್ತರು ಹಾಗೂ ಹೆದ್ದಾರಿಪುರ ಗ್ರಾಪಂ ಸದಸ್ಯರಾದ ಚೂಡಾಮಣಿ ರವರ ನಿಧನಕ್ಕೆ ಕರ್ನಾಟಕ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ,ಸಾಗರ- ಹೊಸನಗರ ಶಾಸಕ ಹರತಾಳು ಹಾಲಪ್ಪ, ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ ಬಿ‌ ಮಂಜುನಾಥ್ , ಮುಖಂಡರಾದ ಕಗ್ಗಲಿ ಲಿಂಗಪ್ಪ,ಬೆಳ್ಳೂರು ತಿಮ್ಮಪ್ಪ ,ಸುಧೀಂದ್ರ ಪೂಜಾರಿ,ಕೃಷ್ಣಮೂರ್ತಿ ಬೆಳ್ಳಿಸರ ,ಉಮೇಶ್ ಜಾಗದ್ದೆ ,ಕಲ್ಲೂರು ನಾಗೇಂದ್ರಪ್ಪ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

4 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

6 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

23 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

23 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

1 day ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago