ಬೇಡಿಕೆ ಈಡೇರಿಸದ ಜಿಲ್ಲಾಡಳಿತದ ವಿರುದ್ದ ಆಕ್ರೋಶಗೊಂಡು ತನ್ನ ಬೈಕ್ ಗೆ ಬೆಂಕಿ ಹಚ್ಚಿದ ಯುವಕ – ಜಿಲ್ಲಾಧಿಕಾರಿ ಕಛೇರಿ ಆವರಣದಲ್ಲಿ ಕೆಲಕಾಲ ಆತಂಕದ ವಾತವರಣ|Shivamogga
ಶಿವಮೊಗ್ಗ : ಬೇಡಿಕೆ ಈಡೇರಿಸದ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಯುವಕನೊಬ್ಬ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ತನ್ನ ಬೈಕ್ ಗೆ ಬೆಂಕಿ ಹಚ್ಚಿ ತನ್ನ ಆಕ್ರೋಶವನ್ನು ಹೊರಹಾಕಿದ್ದಾನೆ. ಈ ಘಟನೆಯಿಂದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಬೈಕ್ ಗೆ ಬೆಂಕಿ ಹಚ್ಚಿದ್ದ ಗಾಡಿಕೊಪ್ಪ ಸಮೀಪದ ಡಾ.ಅಂಬೇಡ್ಕರ್ ನಗರದ ರಾಜು (29) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಧ್ಯಾಹ್ನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರಾಜು, ತನ್ನ ಬೈಕಿಗೆ ಬೆಂಕಿ ಹಚ್ಚಿ ಅಧಿಕಾರಿಗಳ ವಿರುದ್ಧ ಆಕ್ರೋಶ…