ಚಲಿಸುತಿದ್ದ KSRTC ಬಸ್ ನಿಂದ ಹಾರಿ ವ್ಯಕ್ತಿ ಆತ್ಮಹತ್ಯೆ|
ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ಚಲಿಸುತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಭದ್ರಾವತಿಯ ವೀರಾಪುರ ಕ್ರಾಸ್ ಬಳಿ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಮಿಳ್ಳೆನಹಳ್ಳಿ ನಿವಾಸಿ ನಂದೀಶ್ (35) ಎಂಬುವವರು ಮೃತ ದುರ್ದೈವಿ. ನಂದೀಶ್ ಕಳೆದ ಹಲವು ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮೆಗ್ಗಾನ್ ಆಸ್ಪೆತ್ರೆಗೆ ಚಿಕಿತ್ಸೆಗಾಗಿ ಸ್ನೇಹಿತನ ಜತೆ ಬಂದಿದ್ದ ನಂದೀಶ್, ಚಿಕಿತ್ಸೆ ಪಡೆಯುವುದಿಲ್ಲ ಎಂದು ಹಠ ಮಾಡಿದ್ದಾರೆ. ಆಸ್ಪತ್ರೆಯಿಂದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ವಾಪಸ್ ಬರುತ್ತಿದ್ದಾಗ, ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದಲೇ…