Headlines

ರಿಪ್ಪನ್‌ಪೇಟೆ : ಆಟೋ ಅಪಘಾತದಲ್ಲಿ ಮೃತಪಟ್ಟಿದ್ದ ಶ್ರೀನಿವಾಸ್ ಮನೆಗೆ ಭೇಟಿ‌ ನೀಡಿದ ಶಾಸಕ ಹರತಾಳು ಹಾಲಪ್ಪ|Ripponpet

ರಿಪ್ಪನ್‌ಪೇಟೆ : ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ಶಬರೀಶನಗರದ ಆಟೋ ಶ್ರೀನಿವಾಸ್ ರವರ ಮನೆಗೆ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಭೇಟಿ ನೀಡಿದರು. ಮೃತರ ಮನೆಗೆ ಭೇಟಿ ನೀಡಿದ ಶಾಸಕರು ಕುಟುಂಬಸ್ಥರಿಗೆ ಧೈರ್ಯ ತುಂಬಿ‌,ಸಾಂತ್ವಾನ ಹೇಳಿ ಆರ್ಥಿಕ ನೆರವು ನೀಡಿದರು. ಚೌಡೇಶ್ವರಿ ದೇವಸ್ಥಾನಕ್ಕೆ ಭೇಟಿ : ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನಕ್ಕೆ ಭೇಟಿ ನೀಡಿದ ಶಾಸಕರು ಪೂಜೆ ಸಲ್ಲಿಸಿದರು. ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಗೆ ಸರ್ಕಾರದಿಂದ 3 ಲಕ್ಷ ಅನುದಾನ…

Read More

ಆಲುವಳ್ಳಿ ಗ್ರಾಮದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ|Aluvalli

ರಿಪ್ಪನ್‌ಪೇಟೆ: ಇಲ್ಲಿನ ಸಮೀಪದ ಆಲುವಳ್ಳಿ ಗ್ರಾಮದಲ್ಲಿ  67ನೇ ಕರ್ನಾಟಕ  ರಾಜ್ಯೋತ್ಸವದ ಅದ್ಧೂರಿಯಾಗಿ ನಡೆಯಿತು. ಆಲುವಳ್ಳಿ ಗ್ರಾಮದ ವೃತ್ತದಲ್ಲಿ ಕನ್ನಡ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.ಪ್ರಮುಖ ಬೀದಿಗಳಲ್ಲಿ ತಾಯಿ ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರೆ ಮತ್ತು  ಮೆರವಣಿಗೆ ನಡೆಯಿತು. ಮಕ್ಕಳು ವಿವಿಧ ವೇಷಭೂಷಣ ಧರಿಸಿ ಮೆರವಣಿಗೆಯಲ್ಲಿ ಪಾಲ್ಗೊಂಡು ಎಲ್ಲಾರ ಗಮನ ಸೆಳೆದರು. ಕಾರ್ಯಕ್ರಮದ ಧ್ವಜಾರೋಹಣ ಕಾರ್ಯಕ್ರಮವನ್ನು ಕನ್ನಡ ಸಂಘದ ಅಧ್ಯಕ್ಷರಾದ ಟೀಕೇಶಪ್ಪ ಗೌಡ ನೆರವೇರಿಸಿದರು ಈ ಸಂಧರ್ಭದಲ್ಲಿ ಗ್ರಾಮದ ಹೈಮಾಸ್ಕ್ ಬೀದಿ ದೀಪವನ್ನು ಹೊಸನಗರ ತಾಪಂ ಮಾಜಿ ಅಧ್ಯಕ್ಷ…

Read More

ಮಡಿವಾಳ ಸಮಾಜದಿಂದ ಶೀಘ್ರದಲ್ಲಿಯೇ ಮುಖ್ಯಮಂತ್ರಿಗಳ ಭೇಟಿ: ಡಾ.ರಾಜು ಎಂ ತಲ್ಲೂರು|Soraba

ಸೊರಬ: ಪರಿಶಿಷ್ಟ ಜಾತಿಗೆ ಸೇರಲು ಮಡಿವಾಳ ಸಮಾಜ ಎಲ್ಲ ರೀತಿಯ ಲಕ್ಷಣ ಹೊಂದಿದ್ದು, ಸಮಾಜದ ನಿಯೋಗ ಶೀಘ್ರದಲ್ಲಿಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಲಿದೆ ಎಂದು ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ರಾಜು ಎಂ. ತಲ್ಲೂರು ಹೇಳಿದರು.  ಸೋಮವಾರ ಪಟ್ಟಣದ ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಮಡಿವಾಳ ಸಮಾಜ ಅತ್ಯಂತ ಹಿಂದುಳಿದಿದ್ದು, ಪ್ರೊ. ಅನ್ನಪೂರ್ಣ ಅವರು ಕುಲಶಾಸ್ತ್ರೀಯ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಅವರು ಮಡಿವಾಳ…

Read More

ಅಖಾಡಕ್ಕೆ ಆರ್ ಎಂ ಮಂಜುನಾಥ ಗೌಡ ಎಂಟ್ರಿ – ತೀರ್ಥಹಳ್ಳಿ ವಿಧಾನಸಭೆ ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಸಲ್ಲಿಕೆ|RMM

ತೀರ್ಥಹಳ್ಳಿ : 2023 ರ ವಿಧಾನಸಭಾ ಚುನಾವಣೆಯ ರಂಗು ದಿನದಿಂದ ದಿನಕ್ಕೆ ಕಾವೇರುತ್ತಿದ್ದೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಆಕಾಂಕ್ಷಿಯಾಗಿ ಆರ್ ಎಂ ಮಂಜುನಾಥ ಗೌಡರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿ ಅಚ್ಚರಿ ಮೂಡಿಸಿದ್ದಾರೆ. ಈ ಹಿಂದೆ ಆರ್ ಎಂ ಎಂ ಮತ್ತು ಕಿಮ್ಮನೆ ರತ್ನಾಕರ್ ನಡುವೆ ಮುಸುಕಿನ ಗುದ್ದಾಟ ಯಾವಾಗಲು ನೆಡೆಯುತ್ತಿತ್ತು. ಇತ್ತೀಚಿಗಷ್ಟೇ ಆರ್ ಎಂ ಮಂಜುನಾಥ ಗೌಡರು ಮತ್ತು ಕಿಮ್ಮನೆ ರತ್ನಾಕರ್ ರವರ ಮುಸುಕಿನ ಗುದ್ದಾಟಕ್ಕೆ ಅನೇಕ ಕಾಂಗ್ರೆಸ್ ನಾಯಕರು ಬೈಟೆಕ್ ಕೂರಿಸಿ…

Read More

ಕೆಂಚನಾಲ : ಯುವಕನಿಗೆ PFI ಸಂಘಟನೆ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಜೀವ ಬೆದರಿಕೆ – ದೂರು ದಾಖಲು|Kenchanal

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದಲ್ಲಿ ಯುವಕನೊಬ್ಬ ನಿಗೆ ಪಿಎಫ಼್ ಐ ಸಂಘಟನೆ ಹೆಸರಿನಲ್ಲಿ ಸಾಮಾಜಿಕ ಜಾಲತಾಣವಾದ instragram ನಲ್ಲಿ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಕೆಂಚನಾಲ ಗ್ರಾಮದ ಸುಮಂತ್ ಎಂಬ ಯುವಕನಿಗೆ ಸಾಮಾಜಿಕ ಜಾಲತಾಣವಾದ ಇನ್ಸ್ಟ್ರಾಗ್ರಾಮ್ ನಲ್ಲಿ only____pfi  ಎಂಬ ಖಾತೆಯಿಂದ ಜೀವ ಬೆದರಿಕೆ ಬಂದಿದೆ ಎಂದು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಘಟನೆಯ ಹಿನ್ನಲೆ : ಸಾಮಾಜಿಕ ಜಾಲತಾಣವಾದ Instagram ನ ಸಕ್ರೀಯ ಸದಸ್ಯನಾಗಿರುವ ಸುಮಂತ್ ಗೆ only___pfi  ಎಂಬ…

Read More

ಭದ್ರಾವತಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಕೋಮುಗಳ ಗುಂಪಿನ ನಡುವೆ ಗಲಾಟೆ – ಓರ್ವನಿಗೆ ಚೂರಿ ಇರಿತ : ವದಂತಿಗಳಿಗೆ ಕಿವಿಗೊಡದಂತೆ ಪೊಲೀಸ್ ಇಲಾಖೆ ಮನವಿ|bhadravathi

ಕ್ಷುಲ್ಲಕ ಕಾರಣಕ್ಕೆ ಎರಡು ಕೋಮಿನ ಯುವಕರ ನಡುವೆ ಗಲಾಟೆ ನಡೆದಿರುವ ಘಟನೆ ಭದ್ರಾವತಿಯ ಗಾಂಧಿ ವೃತ್ತದಲ್ಲಿ ನಡೆದಿದೆ. ಗಲಾಟೆಯಲ್ಲಿ ಅರವಿಂದ್ ಮತ್ತು ಗೌತಮ್ ಎಂಬುವವರಿಗೆ ಗಾಯವಾಗಿದೆ. ಇಬ್ಬರನ್ನು ಭದ್ರವತಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮತ್ತೆ ಆಸ್ಪತ್ರೆ ಬಳಿಯೂ ಎರಡು ಕೋಮಿನ ಯುವಕರ ನಡುವೆ ಗಲಾಟೆ ನಡೆದಿದ್ದು, ಗಲಾಟೆಯಲ್ಲಿ ರಿಜ್ವಾನ್‌ ಎಂಬುವರಿಗೆ ಚಾಕು ಇರಿಯಲಾಗಿದ್ದು, ಹರೀಶ್ ಎಂಬುವವರಿಗೆ ಗಾಯವಾಗಿದೆ. ಚಾಕು ಇರಿತಕ್ಕೊಳಗಾದ ರಿಜ್ವಾನ್‌ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಭದ್ರಾವತಿ ಹಳೇ ನಗರ ಪೊಲೀಸ್…

Read More

ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್ ಗೆ ಕಾಗೋಡು ತಿಮ್ಮಪ್ಪ ಅರ್ಜಿ ಸಲ್ಲಿಕೆ – ಕುತೂಹಲ ಮೂಡಿಸಿದ ಕಾಗೋಡು ನಡೆ!!..???|Kagodu

ಕಾಂಗ್ರೆಸ್ ಪಕ್ಷವನ್ನು ಈ ಬಾರಿ ಅಧಿಕಾರಕ್ಕೆ ತರಲು ಎಲ್ಲರೂ ಸೇರಿ ವ್ಯವಸ್ಥಿತ ಸಂಘಟನೆ ಮಾಡಲಾಗುತ್ತಿದೆ. ಚುನಾವಣಾ ಉಮೇದುವಾರಿಕೆಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿ ಪಕ್ಷದ ನಿಯಮದಂತೆ ನಾನು ಹಾಗೂ ರಾಜನಂದಿನಿ ಅರ್ಜಿ ಸಲ್ಲಿಸಿದ್ದೇವೆ.ಪಕ್ಷ ಬಯಸಿದರೆ ಚುನಾವಣೆಗೆ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು. ತಾಲೂಕಿನ ತ್ಯಾಗರ್ತಿಯಲ್ಲಿ ಅವರು ಮಾದ್ಯಮದೊಂದಿಗೆ ಮಾತನಾಡಿ, ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಗೆಲ್ಲಲು ಉತ್ತಮ ವಾತಾವರಣ ಇದೆ. ಅದರ ಪ್ರಯೋಜನ ಪಡೆದುಕೊಳ್ಳಬೇಕು. ಕ್ಷೇತ್ರದಲ್ಲಿ ಅನೇಕ ಸಮಸ್ಯೆಗಳಿವೆ. ಅದನ್ನು ಬಗೆಹರಿಸುವ…

Read More

ಹುಲಿಕಲ್ ಘಾಟ್ ಭೀಕರ ಅಪಘಾತ ಪ್ರಕರಣ : ಗಂಭೀರ ಗಾಯಗೊಂಡಿದ್ದ ಮಹಿಳೆ ಸಾವು – ಮೃತರ ಸಂಖ್ಯೆ ಮೂರಕ್ಕೆ ಏರಿಕೆ|Hulikal accident

ಹೊಸನಗರ ತಾಲೂಕಿನ ಹುಲಿಕಲ್ ನಲ್ಲಿ ನಡೆದ ಅಪಘಾತ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆಯು ಮೃತಪಟ್ಟಿದ್ದಾರೆ. ಗುರುವಾರ ತಡರಾತ್ರಿ ನಡೆದಿದ್ದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿತ್ತು ಗಾಯಾಳುವನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ನಂತರ ಚಂದ್ರಗಿರಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಅಪಘಾತದಲ್ಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದ ಕಂಪದ ಕೈ ರವಿ ರವರ ಪತ್ನಿ ಶಾಲಿನಿ ಮೃತಪಟ್ಟಿದ್ದಾರೆ. ಘಟನೆಯ ಹಿನ್ನಲೆ: ಗುರುವಾರ ರಾತ್ರಿ ಹುಲಿಕಲ್ ಘಾಟ್ ನಲ್ಲಿ  ಬೈಕ್ ನಲ್ಲಿ ತೆರಳುತ್ತಿರುವವರ ಮೇಲೆ…

Read More

ಯಜಮಾನನ ಜೀವ ಉಳಿಸಿದ ಸಾಕು ನಾಯಿ – ಗ್ರಾಮಸ್ಥರಿಂದ ಶ್ವಾನದ ಮೆರವಣಿಗೆ|Sooduru

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಸೂಡೂರು ಗ್ರಾಮದಲ್ಲಿ ಕಾಡಿಗೆ ಕಟ್ಟಿಗೆ ತರಲು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯನ್ನು ತಾನೇ ಸಾಕಿದ ನಾಯಿ ಪತ್ತೆ ಹಚ್ಚಿದ ವಿನೂತನ ಘಟನೆ ನಡೆದಿದೆ. ಮಾಲೀಕನನ್ನು ಸಾವಿನ ದವಡೆಯಿಂದ ಪಾರು ಮಾಡಿದ ನಾಯಿಯ ಸ್ವಾಮಿ ನಿಷ್ಠೆಗೆ ಇಡೀ ಸೂಡೂರು ಗ್ರಾಮವೇ ಹರ್ಷ ವ್ಯಕ್ತಪಡಿಸಿ ನಾಯಿಯ ಮೆರವಣಿಗೆ ಮಾಡಿದೆ. ನಿನ್ನೆ(ನ.12) ಬೆಳೆಗ್ಗೆ 6 ಗಂಟೆ ಸುಮಾರಿಗೆ ಮನೆಗೆ ಸೌದೆ ತರಲು ಎಂದು ಸೂಡೂರು ಗ್ರಾಮದ 50 ವರ್ಷ ವಯಸ್ಸಿನ ಶೇಖರಪ್ಪ ಮನೆಯ ಸಮೀಪದ ಕಾಡಿಗೆ ಹೋಗಿದ್ದಾರೆ….

Read More

ಉದ್ಯೋಗ ಕೊಡಿಸುವುದಾಗಿ ನಂಬಿಸಿ ನಾಲ್ವರು ಮಹಿಳೆಯರಿಗೆ ವಂಚನೆ : ಪ್ರಕರಣ ದಾಖಲು|Cheating

ಹಾಸ್ಟೆಲ್ ನ ವಾರ್ಡನ್ ಎಂದು ಪರಿಚಯಿಸಿಕೊಂಡ ವ್ಯಕ್ತಿಯೊಬ್ಬ ತನ್ನ ಪ್ರಭಾವದಿಂದ ಕೆಲಸ ಕೊಡಿಸುವುದಾಗಿ ನಂಬಿಸಿ ನಾಲ್ವರು ಮಹಿಳೆಯರಿಗೆ ವಂಚಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ನಡೆದಿದೆ. ಶಿವಮೊಗ್ಗದ ನಿವಾಸಿಯಾದ ಸುನಿಲ್,ಸಾಗರದ ಶಾಹಿ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಮಹಿಳೆಯರಿಗೆ ಪರಿಚಿತನಾಗಿದ್ದಾನೆ. ಸುನಿಲ್ ಅವರಿಗೆ ಸುಳ್ಳು ಹೇಳಿ, “ನಾನು ಆನಂದಪುರದ ಯಡೇಹಳ್ಳಿಯ ಇಂದಿರಾ ಗಾಂಧಿ ವಸತಿ ಸಂಸ್ಥೆಯಲ್ಲಿ ಹಾಸ್ಟೆಲ್ ವಾರ್ಡನ್ ಆಗಿದ್ದೇನೆ. ಅವರು ಅದೇ ಸಂಸ್ಥೆಯಲ್ಲಿ ಕಂಪ್ಯೂಟರ್ ಆಪರೇಟರ್, ಹೌಸ್ ಕೀಪಿಂಗ್ ಸಿಬ್ಬಂದಿ ಮತ್ತು ಅಡುಗೆಯವರಾಗಿ…

Read More
Exit mobile version