ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿ 2 ವರ್ಷ ವಯೋಮಿತಿ ಹೆಚ್ಚಳ :

ಪೊಲೀಸ್ ಅಭ್ಯರ್ಥಿಗಳ ಬೇಡಿಕೆಗೆ ಕೊನೆಗೂ ಮಣಿದಿರುವ ರಾಜ್ಯ ಸರ್ಕಾರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಮಾತ್ರ ಎರಡು ವರ್ಷಗಳಿಗೆ ಹೆಚ್ಚಿಸಿ ಕರ್ನಾಟಕ ಸರಕಾರ ಆದೇಶ ಹೊರಡಿಸಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಪೊಲೀಸ್ ಕಾನ್‍ಸ್ಟೇಬಲ್ ಹುದ್ದೆಗೆ ಸಾಮಾನ್ಯ ವರ್ಗಕ್ಕೆ ಗರಿಷ್ಠ ವಯೋಮಿತಿಯನ್ನು 25 ರಿಂದ 27 ವರ್ಷ ಹಾಗೂ ಎಸ್‍ಸಿ/ಎಸ್‍ಟಿ ಹಾಗೂ ಹಿಂದುಳಿದ ವರ್ಗಗಳಿಗೆ 27 ರಿಂದ 29 ವರ್ಷಳಿಗೆ ಹಾಗೂ ಬುಡ ಕಟ್ಟು ಜನಾಂಗದ ಅಭ್ಯರ್ಥಿಗಳಿಗೆ 32 ವರ್ಷಗಳಿಗೆ ಹೆಚ್ಚಿಸಲಾಗಿದೆ.



ಸೇವಾ ನಿರತ ಅಭ್ಯರ್ಥಿಗಳ ವಯೋಮಿತಿಯಲ್ಲಿ ಎಸ್ಸಿ-ಎಸ್ಟಿ ಅಭ್ಯರ್ಥಿಗಳ ವಯಸ್ಸಿಗೆ 35 ಜಾಗೂ ಇತರೆ ಅಭ್ಯರ್ಥಿಗಳಿಗೆ 33 ವರ್ಷಗಳಿಗೆ ಹೆಚ್ಚಿಸಲಾಗಿದೆ ಎಂದು ಹೇಳಿದರು.

ಸಶಸ್ತ್ರ ಪಡೆಯ ಪೊಲೀಶ್ ಕಾನ್ಸ್‍ಟೇಬಲ್ ಹುದ್ದೆಗಳಿಗೆ ಶೇ. 10 ರಷ್ಟು ಮೀಸಲಾತಿಯನ್ನು ಕಲ್ಪಿಸಿ ಗರಿಷ್ಠ ವಯೋಮಿತಿಯನ್ನು ಸಾಮಾನ್ಯ ವರ್ಗಕ್ಕೆ 31 ವರ್ಷ ಹಾಗೂ ಎಸ್ಸಿಎಸ್ಟಿ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ 33 ವರ್ಷಗಳನ್ನು ನಿಗ ಪಡಿಸಲಾಗಿದೆ ಎಂದು ತಿಳಿಸಿದರು.



ಕೋವಿಡ್‍ನಿಂದಾಗಿ ನಿಯಮಿತವಾಗಿ ನೇಮಕಾತಿ ನಡೆಯದ ಪ್ರಯುಕ್ತ ಆಕಾಂಕ್ಷಿತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ವಂಚಿತವಾಗಿರುವುದರಿಂದ ವಯೋಮಿತಿಯಲ್ಲಿ 02 ವರ್ಷಗಳ ವಿನಾಯಿತಿ ನೀಡುವಂತೆ ಹಲವಾರು ಮನವಿಗಳು ಬಂದಿದ್ದವು. ಅವರ ಮನವಿಗೆ ಸ್ಪಂದಿಸಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ ಎಂದರು.

2022-23 ನೇ ಸಾಲಿನಲ್ಲಿ ಕರೆದಿರುವ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳಿಗೆ ಎರಡು ವರ್ಷಗಳಿಗೆ ಹೆಚ್ಚಿಸಲಾಗಿದೆ. ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಒಂದು ವಾರಗಳ ಕಾಲ ವಿಸ್ತರಿಸುವಂತೆ ಸೂಚನೆ ನೀಡಲಾಗಿದೆ.ಪೊಲೀಸ್ ನೇಮಕಾತಿ ವಯೋಮಿತಿ ಹೆಚ್ಚಳ ಮಾಡುವಂತೆ ಆಕಾಂಕ್ಷಿಗಳು ಸರಕಾರಕ್ಕೆ ಒತ್ತಾಯಿಸಿದ್ದರು.

Leave a Reply

Your email address will not be published. Required fields are marked *