w
Headlines
Home » ಹುಲಿಕಲ್ ಘಾಟ್ ಭೀಕರ ಅಪಘಾತ ಪ್ರಕರಣ : ಗಂಭೀರ ಗಾಯಗೊಂಡಿದ್ದ ಮಹಿಳೆ ಸಾವು – ಮೃತರ ಸಂಖ್ಯೆ ಮೂರಕ್ಕೆ ಏರಿಕೆ|Hulikal accident

ಹುಲಿಕಲ್ ಘಾಟ್ ಭೀಕರ ಅಪಘಾತ ಪ್ರಕರಣ : ಗಂಭೀರ ಗಾಯಗೊಂಡಿದ್ದ ಮಹಿಳೆ ಸಾವು – ಮೃತರ ಸಂಖ್ಯೆ ಮೂರಕ್ಕೆ ಏರಿಕೆ|Hulikal accident

ಹೊಸನಗರ ತಾಲೂಕಿನ ಹುಲಿಕಲ್ ನಲ್ಲಿ ನಡೆದ ಅಪಘಾತ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆಯು ಮೃತಪಟ್ಟಿದ್ದಾರೆ.




ಗುರುವಾರ ತಡರಾತ್ರಿ ನಡೆದಿದ್ದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿತ್ತು ಗಾಯಾಳುವನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ನಂತರ ಚಂದ್ರಗಿರಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.




ಈ ಅಪಘಾತದಲ್ಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದ ಕಂಪದ ಕೈ ರವಿ ರವರ ಪತ್ನಿ ಶಾಲಿನಿ ಮೃತಪಟ್ಟಿದ್ದಾರೆ.

ಘಟನೆಯ ಹಿನ್ನಲೆ:


ಗುರುವಾರ ರಾತ್ರಿ ಹುಲಿಕಲ್ ಘಾಟ್ ನಲ್ಲಿ  ಬೈಕ್ ನಲ್ಲಿ ತೆರಳುತ್ತಿರುವವರ ಮೇಲೆ ಹಿಂಬದಿಯಿಂದ ಬಂದ ಲಾರಿ ಹರಿದಿದ್ದು ಘಟನೆ ಬಳಿಕ ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ. ಘಟನಾ ಭೀಕರತೆ ನೋಡಿ ಜನ ಬೆಚ್ಚಿಬಿದ್ದಿದ್ದು, ಸುಮಾರು ಎರಡೂವರೆ ಘಂಟೆ ಕಾಲ ವಾಹನ ಸಂಚಾರ ಸ್ಥಗಿತವಾಗಿತ್ತು.





ಮಾಸ್ತಿಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂಪದ ಕೈ ಕೂಲಿ ಕಾರ್ಮಿಕ ರವಿ (47) ಹಾಗೂ ಅವರ ಅಣ್ಣನ ಮಗ ಶ್ರಿಸಿರ (10) ಸ್ಥಳದಲ್ಲಿಯೇ ಮೃತಪಟ್ಟಿದ್ದರು.

ಹುಲಿಕಲ್ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದ ಕಾರ್ತಿಕ ದೀಪೋತ್ಸವ ಕಾರ್ಯಕ್ರಮ ಮುಗಿಸಿ ಮನೆಗೆ ಬರುವಾಗ ಸುಮಾರು ರಾತ್ರಿ 9:35 ರ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿತ್ತು.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.