w
Headlines
Home » ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ – ಗಾಯಾಳು ಮೆಗ್ಗಾನ್ ಗೆ ದಾಖಲು|crime

ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ – ಗಾಯಾಳು ಮೆಗ್ಗಾನ್ ಗೆ ದಾಖಲು|crime

ರಿಪ್ಪನ್‌ಪೇಟೆ : ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಮೇಲೆ ಬಿಯರ್ ಬಾಟಲಿಯಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ತೀರ್ಥಹಳ್ಳಿ ರಸ್ತೆಯ ಖಾಸಗಿ ಬಾರ್ & ರೆಸ್ಟೋರೆಂಟ್ ಮುಂಭಾಗದಲ್ಲಿ ನಡೆದಿದೆ.




ಪಟ್ಟಣದ ಗಾಂಧಿನಗರದ ನಿವಾಸಿ ಮಂಜುನಾಥ್ (27) ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದಾನೆ.

ತೀರ್ಥಹಳ್ಳಿ ರಸ್ತೆಯ ಖಾಸಗಿ ಬಾರ್ ವೊಂದರ ಮುಂಂಭಾಗದಲ್ಲಿ ಕ್ಷುಲ್ಲಕ ಕಾರಣಕ್ಕೆ ತೀರ್ಥಹಳ್ಳಿ ರಸ್ತೆ ನಿವಾಸಿ ಪ್ರವೀಣ್ ಎಂಬಾತ ಮಂಜುನಾಥ್ ಮೇಲೆ ಏಕಾಏಕಿ ಬಿಯರ್ ಬಾಟಲಿಯಲ್ಲಿ ತಲೆಗೆ ಹಲ್ಲೆ ನಡೆಸಿದ್ದಾನೆ.




ಗಾಯಾಳು ಮಂಜುನಾಥ್ ನನ್ನು ಸ್ಥಳೀಯರು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿ ತಲೆಗೆ ಆರು ಹೊಲಿಗೆ ಹಾಕಲಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಗೆ ರವಾನಿಸಲಾಗಿದೆ.

ರಿಪ್ಪನ್‌ಪೇಟೆ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.



Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.