w
Headlines
Home » ಅಂತರ್ ವಿಶ್ವವಿದ್ಯಾಲಯ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್‌ಪೇಟೆಯ ವಿದ್ಯಾರ್ಥಿಗಳು ಆಯ್ಕೆ|volleyball

ಅಂತರ್ ವಿಶ್ವವಿದ್ಯಾಲಯ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್‌ಪೇಟೆಯ ವಿದ್ಯಾರ್ಥಿಗಳು ಆಯ್ಕೆ|volleyball

ರಿಪ್ಪನ್‌ಪೇಟೆ : ತಮಿಳುನಾಡಿನಲ್ಲಿ ನಡೆಯುವ ಅಂತರ್ ವಿಶ್ವವಿದ್ಯಾಲಯದ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ಡಿಸೆಂಬರ್ 23 ರಿಂದ 27 ರವರೆಗೆ ತಮಿಳುನಾಡಿನ ಚೆನ್ನೈನಲ್ಲಿ ನಡೆಯುವ ದಕ್ಷಿಣ ವಲಯದ ಅಂತರ್ ವಿಶ್ವವಿದ್ಯಾಲಯದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವ ಕುವೆಂಪು ವಿಶ್ವವಿದ್ಯಾಲಯದ ತಂಡಕ್ಕೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ತೃತೀಯ ಬಿಕಾಂ ವಿದ್ಯಾರ್ಥಿಗಳಾದ ಪ್ರಜ್ವಲ್ ಎನ್ ಎಂ ಮತ್ತು ಮಹಮ್ಮದ್ ಅರ್ಬಾಜ಼್ ಆಯ್ಕೆಯಾಗಿದ್ದಾರೆ.

ವಿದ್ಯಾನಗರದ ನಿವಾಸಿಗಳಾದ ಮಹೇಶ್ವರಾಚಾರಿ ಮತ್ತು ಮೀನಾಕ್ಷಿ ದಂಪತಿಗಳ ಪುತ್ರನಾದ ಪ್ರಜ್ವಲ್ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತೃತೀಯ ಬಿಕಾಂ ವ್ಯಾಸಂಗ ಮಾಡುತಿದ್ದಾರೆ.

ಸಾಗರ ರಸ್ತೆಯ ನಿವಾಸಿಗಳಾದ ಮುಸ್ತಫಾ ಮತ್ತು ಸಮೀನಾ ದಂಪತಿಗಳ ಪುತ್ರನಾದ ಮಹಮ್ಮದ್ ಅರ್ಬಾಜ಼್ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತೃತೀಯ ಬಿಕಾಂ ವ್ಯಾಸಂಗ ಮಾಡುತಿದ್ದಾರೆ.

ಅದ್ವಿತೀಯ ಪ್ರದರ್ಶನ ನೀಡುವ ಮೂಲಕ ವಿಶ್ವವಿದ್ಯಾಲಯ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡ ವಿದ್ಯಾರ್ಥಿಗಳಿಗೆ ಶಾಸಕರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಹರತಾಳು ಹಾಲಪ್ಪ ಮತ್ತು ಅಭಿವೃದ್ಧಿ ಸಮಿತಿ ಸದಸ್ಯರು ,ಕಾಲೇಜಿನ ಪ್ರಾಂಶುಪಾಲರಾದ ಚಂದ್ರಶೇಖರ್ ,ದೈಹಿಕ ಶಿಕ್ಷಕರಾದ ಕುಮಾರಸ್ವಾಮಿ ಮತ್ತು ಬೋಧಕ – ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.